ವಿದುರಾಶ್ವತ ದ್ವಿತೀಯಹಂತದ ಅಭಿವೃದ್ಧಿಗೆ ನೆರವು ಕಲ್ಪಿಸಲು CMಗೆ ಪ್ರಸ್ತಾವನೆ:ಶಿವಶಂಕರರೆಡ್ಡಿ
Team Udayavani, Mar 12, 2021, 10:09 AM IST
ಚಿಕ್ಕಬಳ್ಳಾಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣಗಳನ್ನು ಬಲಿದಾನಗಳನ್ನು ನೀಡಿದ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಖ್ಯಾತಿ ಹೊಂದಿರುವ ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತವನ್ನು ದ್ವಿತೀಯ ಹಂತದಲ್ಲಿ ಅಭಿವೃದ್ಧಿಗೊಳಿಸಲು ಅಗತ್ಯ ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದೆಂದು ಮಾಜಿ ಸಚಿವ ಹಾಗೂ ಶಾಸಕ ಎನ್ಎಚ್ ಶಿವಶಂಕರರೆಡ್ಡಿ ತಿಳಿಸಿದರು.
ತಾಲೂಕಿನ ವಿದುರಾಶ್ವತದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಅಮೃತ ಮಹೋತ್ಸವದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ತರಗತಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ದೇಶಾದ್ಯಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 75 ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ವಿದುರಾಶ್ವತ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ,ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದರು.
ವಿದುರಾಶ್ವತ್ಥದಲ್ಲಿ ಈಗಾಗಲೇ ಅನೇಕ ರೀತಿಯ ಅಭಿವೃದ್ಧಿ ಕಾಮಗಾರಿಗಳು ನಡೆಸಲಾಗಿದೆ ಜೊತೆಗೆ ಎರಡನೇ ಹಂತದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿ ನಡೆಸಲು ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ: ಚಾಕೋ: ಸೋಲಿನ ಬಾಲ ಹಿಡಿದವರೆಂದಿಗೂ ಒಂಟಿಯೇ!
ದೇಶದ ಸ್ವಾತಂತ್ರ್ಯಕ್ಕಾಗಿ ವಿದುರಾಶ್ವತ್ಥದಲ್ಲಿ ಅನಧಿಕೃತವಾಗಿ 32 ಹಾಗೂ ಅಧಿಕೃತವಾಗಿ ಒಂಬತ್ತು ಮಂದಿ ಹುತಾತ್ಮರ ಆಗಿದ್ದಾರೆಂದು ದಾಖಲಾಗಿದೆ. ಸ್ವಾತಂತ್ರ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳಿಂದ ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಪ್ರಾಣಗಳನ್ನು ತ್ಯಾಗಮಾಡಿದ ಹುತಾತ್ಮರನ್ನು ಸ್ಮರಿಸಿ ಯುವಕರಿಗೆ ಅದರಲ್ಲೂ ವಿಶೇಷವಾಗಿ ಮುಂದಿನ ಪೀಳಿಗೆಗೆ ಸ್ವಾತಂತ್ರ್ಯದ ಕುರಿತು ಅರಿವು ಮೂಡಿಸಬೇಕೆಂದು ಕರೆ ನೀಡಿದರು.
ಯೋಗಾಭ್ಯಾಸ ಸಾವಿರಾರು ವರ್ಷಗಳಿಂದ ಬಂದಿರುವ ಒಂದು ಸಾಧನ ಇದರ ಮಹತ್ವವನ್ನು ಅರಿತು ಈಗಾಗಲೇ ಸರ್ಕಾರಿ ನೌಕರರಿಗೆ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಕುರಿತು ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಲು ಯೋಗ ಸಹಕಾರಿಯಾಗಿದ್ದು ಪ್ರತಿನಿತ್ಯ ಯೋಗಾಭ್ಯಾಸ ಮಾಡುವ ಜನರು ಬೆಳಗ್ಗೆಯಿಂದ ಸಂಜೆವರೆಗೆ ಒಂದು ರೀತಿಯಲ್ಲಿ ಉತ್ಸಾಹದಿಂದ ಇರುತ್ತಾರೆ ಸಮಾಜದಲ್ಲಿರುವ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಿ ವಿಶೇಷವಾಗಿ ಶಾಲಾ ಮಕ್ಕಳಿಗೆ ಯೋಗ ಕಲಿಸಬೇಕು ಅದರ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕೆಂದು ಕರೆ ನೀಡಿದರು.
ಇದನ್ನೂ ಓದಿ: ಎಚ್ಚರಿಕೆ ವಹಿಸಿ, ಕೋವಿಡ್-19 ಸಾಂಕ್ರಮಿಕ ರೋಗ ಇನ್ನೂ ಮುಗಿದಿಲ್ಲ: ಕೆಂದ್ರ ಸರ್ಕಾರ
ಕಾರ್ಯಕ್ರಮದಲ್ಲಿ ಸ್ವತಂತ್ರ ಹೋರಾಟಗಾರ ಬ್ರಹ್ಮಯ್ಯ,ಜಿ ಲ್ಲಾ ಆಯುಷ್ ಇಲಾಖೆಯ ಅಧಿಕಾರಿ ತಬೀಬ್ ಉನ್ನಿಸಾ, ತಾಲೂಕ ದಂಡದಿಕಾರಿ ಶ್ರೀನಿವಾಸ್, ಬಿಇಓ ಶ್ರೀನಿವಾಸಮೂರ್ತಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ನಿತ್ಯಭವಿಷ್ಯ: ಈ ರಾಶಿಯವರ ಹಣದ ದಾಹ ಆರ್ಥಿಕ ಸ್ಥಿತಿಯ ಏರುಪೇರಿಗೆ ಕಾರಣವಾಗಲಿದೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.