![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Oct 25, 2019, 3:22 PM IST
ಚಿಂತಾಮಣಿ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಎಲ್ಲಾ ಸ್ಥಾನಗಳನ್ನು ಗೆಲ್ಲಬೇಕಾದರೆ ಜೆಡಿಎಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಬದಿಗೊತ್ತಿ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು.
ಅ.30 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿ 31ರಂದು ಸಾಮೂ ಹಿಕವಾಗಿ ಎಲ್ಲಾ 31 ವಾರ್ಡ್‌ಗಳಿಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪಕ್ಷದಿಂದ ಕಟಮಾ ಚನಹಳ್ಳಿ ಬಳಿ ಇರುವ ಶಾಸಕ ಜೆ.ಕ ಕೃಷ್ಣಾರೆಡ್ಡಿರವರ ಗೆಸ್ಟ್‌ಹೌಸ್ ಬಳಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷ ಯಾರನ್ನು ಗುರುತಿಸಿ ಟಿಕೆಟ್ ನೀಡುತ್ತದಯೋ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
ಪ್ರಾಮಾಣಿಕವಾಗಿ ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಎಚ್ಚರಿಸಿದರು. 30ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಗೊಳಿಸಿ 31ರಂದು ನಗರದಲ್ಲಿ ಮೆರವಣಿಗೆಯೊಂದಿಗೆ ಎಲ್ಲಾ ವಾರ್ಡ್ ಗಳಿಗೆ ಸಾಮೂಹಿಕವಾಗಿ ನಾಮ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಜೆಡಿಎಸ್ ತಾ.ಅಧ್ಯಕ್ಷ ರಾಜಗೋಪಾಲ್ ಮಾತನಾಡಿ, ಗೊಂದಲಗಳಿಗೆ ಆಸ್ಪದ ನೀಡದಂತೆ ಒಗ್ಗಟಿನಿಂದ ಚುನಾವಣೆ ಎದುರಿಸಬೇಕೆಂದರು.
ಮುಖಂಡ ಆಗ್ರಹಾರ ಮುರಳಿ ಮಾತನಾಡಿದರು. ಜೆಡಿಎಸ್ ಉಪಾಧ್ಯಕ್ಷ ದಿನ್ನಮಿಂದಹಳ್ಳಿ ಬೈರಾರೆಡ್ಡಿ, ನಗರ ಘಟಕದ ಅಧ್ಯಕ್ಷ ಮಂಜು ನಾಥಚಾರಿ, ಮುಖಂಡ ರಾದ ಅಬ್ಬುಗುಂಡು ಪ್ರಸಾದ್, ನಾಗ ರಾಜ ರೆಡ್ಡಿ, ಆಗ್ರಹಾರ ಮುರಳಿ, ಸಿ.ಕೆ.ಶಬ್ಬೀರ್, ಶ್ರೀರಾಮಪ್ಪ, ಅಮರ್, , ದೊಡಬೊಮ್ಮನಹಳ್ಳಿ ವೆಂಕಟ ರೆಡ್ಡಿ ಇದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.