ಸಂವಹನ ಕೌಶಲ್ಯ ಅಗತ್ಯ
Team Udayavani, Sep 23, 2019, 3:00 AM IST
ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಎಷ್ಟೇ ಉನ್ನತ ಶಿಕ್ಷಣ ಪಡೆದರೂ ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು. ಅನೇಕ ವಿದ್ಯಾರ್ಥಿಗಳಿಗೆ ಇಂದಿಗೂ ಉದ್ಯೋಗ ನೀಡುವ ಕಂಪನಿಗಳು ಏರ್ಪಡಿಸುವ ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೇ ಕೈಗೆ ಬರುವ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಐಟಿಬಿಟಿ ಇಲಾಖೆ ನಿವೃತ್ತ ಕಾರ್ಯದರ್ಶಿ ವಿವೇಕ್ ಕುಲಕರ್ಣಿ ತಿಳಿಸಿದರು.
ನಗರದ ಹೊರ ವಲಯದಲ್ಲಿರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಐದು ವರ್ಷಗಳ ಎಂಜಿನಿಯರಿಂಗ್ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದ ಬಳಿಕ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದಿನಷ್ಟೇ ಕೌಶಲಕ್ಕೂ ಆದ್ಯತೆ ನೀಡಬೇಕಿದೆ. ಎಂಜಿನಿಯರಿಂಗ್ ವಿಭಾಗಗಳ ಪೈಕಿ ಮೆಕ್ಯಾನಿಕಲ್ ಎಂಜಿನಿಯರಿಂಗ್ಗೆ ಇರುವ ವಿಫುಲವಾದ ಅವಕಾಶಗಳು ಮತ್ತೂಂದಕ್ಕಿಲ್ಲ ಎಂದರು.
ಗುಣಮಟ್ಟದ ಶಿಕ್ಷಣ ಪಡೆಯಿರಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಓದು, ಬರಹದ ಅಭ್ಯಾಸ ಸಾಕಷ್ಟು ಕ್ಷೀಣಿಸುತ್ತಿದೆ. ಸತತ ಅಧ್ಯಯನದಿಂದ ಜ್ಞಾರ್ನಾಜನೆ ಹೆಚ್ಚುತ್ತದೆ. ಆದರೆ ಇಂದಿನ ಬಹಳಷ್ಟು ವಿದ್ಯಾರ್ಥಿಗಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂದರು. ಉತ್ತಮ ಭವಿಷ್ಯ ರೂಪುಗೊಳ್ಳಬೇಕಾದರೆ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಓದು ಮುಗಿದ ನಂತರ ಬದುಕು ರೂಪಿಸಿಕೊಳ್ಳುವುದು ಬಹಳ ಮುಖ್ಯ. ಆದ್ದರಿಂದ ವಿದ್ಯಾರ್ಥಿ ಜೀವನವನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕೆಂದರು.
ಎಂಜಿನಿಯರ್ಗಳು ದೇಶದ ಭವಿಷ್ಯ: ಜೀವನದುದ್ದಕ್ಕೂ ಕಲಿಕೆಯ ಮೇಲೆ ಆಸಕ್ತಿ ಇರಬೇಕು. ಒಂದು ಕೋರ್ಸ್ ಮುಗಿದ ಬಳಿಕ ಕಲಿಕೆ ಮುಗಿಯುವುದಿಲ್ಲ. ನಿರಂತರವಾದ ಅಧ್ಯಯನ ಇದ್ದರೆ ಮಾತ್ರ ಯಾವುದೇ ರಂಗದಲ್ಲಿ ಯಶಸ್ಸು ಸಾಧಿಸಬಹುದು. ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆಯೇ ದೇಶದ ಭವಿಷ್ಯ ನಿಂತಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಂಜಿನಿಯರ್ಗಳ ಪಾತ್ರ ಅಮೂಲ್ಯವಾಗಿರುವುದರಿಂದ ಆಳವಾದ ಅಧ್ಯಯನಕ್ಕೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕೆಂದರು.
ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಶ್ರೀಕಂಠ ಮೂರ್ತಿ ವಹಿಸಿದ್ದರು. ವೇದಿಕೆಯಲ್ಲಿ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾದ ಭಾನು ಚೈತನ್ಯ, ಡಾ.ಎಸ್.ಜಿ.ಗೋಪಾಲಕೃಷ್ಣ, ಉಪ ಪ್ರಾಂಶುಪಾಲ ಡಾ.ಹರೀಶ್, ಪರೀಕ್ಷಾ ನಿಯಂತ್ರಕರಾದ ಡಾ.ಎಚ್.ಸಿ.ಯೋಗೀಶ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಅನಂದಮ, ಶಾರದಾ, ಭವನಿ ಸೇರಿದಂತೆ ಮಹಾ ವಿದ್ಯಾಲಯದ ವಿವಿಧ ವಿಭಾಗದ ಎಂಜಿನಿಯರಿಂಗ್ ಪೂರೈಸಿದ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
53 ವಿದ್ಯಾರ್ಥಿಗಳಿಗೆ ಚಿನ್ನದ ಪದಕ: ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆದ ಎಂಜನಿಯರಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭದಲ್ಲಿ ಕಂಪ್ಯೂಟರ್ ಸೈನ್ಸ್ ಆಂಡ್ ಎಂಜಿನಿಯರಿಂಗ್, ಕನ್ಸ್ಟ್ರಕ್ಷನ್ ಟೆಕ್ನಾಲಜಿ, ಎಂಟೆಕ್, ಎಂಬಿಎ, ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗ ಸೇರಿ ಒಟ್ಟು 608 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರೆ ಆ ಪೈಕಿ 53 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಚಿನ್ನದ ಪದಕ ಪಡೆದು ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.