ರಾಜಿ ಸಂಧಾನ: ತಾಳಹಳ್ಳಿಯಲ್ಲಿ ನೀರಿನ ಕಿತ್ತಾಟಕ್ಕೆ ತೆರೆ
Team Udayavani, Jan 25, 2018, 3:31 PM IST
ಚಿಕ್ಕಬಳ್ಳಾಪುರ: ಕುಡಿಯುವ ನೀರಿಗೆ ಹೊಸ ಕೊಳವೆಬಾವಿ ಕೊರೆಸುವ ವಿಚಾರದಲ್ಲಿ ಒಮ್ಮತ ಮೂಡದೇ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ತೀವ್ರ ವಿವಾದಕ್ಕೆ ಗುರಿಯಾಗಿದ್ದ ತಾಲೂಕಿನ ತಾಳಹಳ್ಳಿಯಲ್ಲಿ ಎರಡು ಬಣಗಳ ನಡುವಿನ ನೀರಿನ ಕಿತ್ತಾಟಕ್ಕೆ ಕೊನೆಗೂ ಬುಧವಾರ ಬ್ರೇಕ್ ಬಿದ್ದಿದೆ.
ತಾಳಹಳ್ಳಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಎರಡು ಗುಂಪುಗಳ ಪ್ರಮುಖರನ್ನು ಸೇರಿಸಿ ರಾಜೀ ಸಂಧಾನ ನಡೆಸುವ ಮೂಲಕ ಗ್ರಾಮದಲ್ಲಿ ಹೊಸ ಕೊಳವೆ ಬಾವಿಗೆ ಜಿಪಂ ಅಧ್ಯಕ್ಷರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಹೊಸ ಕೊಳವೆಬಾವಿ: ಕುಡಿಯುವ ನೀರಿನ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಗ್ರಾಮಗಳಲ್ಲಿ ಸೌಹಾರ್ದತೆ ನೆಲಸಬೇಕು. ಈ ರೀತಿ ಕಿತ್ತಾಡಿಕೊಂಡರೆ ನೀರಿನ ಸಮಸ್ಯೆ ಎದುರಿಸುವರು ನೀವು ಎಂದು ಎರಡು
ಬಣಗಳ ಮುಖಂಡರಿಗೆ ಬುದ್ಧಿವಾದ ಹೇಳಿದ ಜಿಪಂ ಅಧ್ಯಕ್ಷರು ತಮ್ಮ ಸಮ್ಮುಖದಲ್ಲಿಯೇ ಗ್ರಾಮಕ್ಕೆ ಬೋರ್‌ವೆಲ್ ಲಾರಿ ಕರೆಸಿ ಹೊಸದಾಗಿ ಕೊಳವೆ ಬಾವಿ ಕೊರೆಯಲು ಚಾಲನೆ ನೀಡಿದರು.
ಗ್ರಾಮದಲ್ಲಿ ಇತ್ತೀಚೆಗೆ ಸರ್ಕಾರಿ ಕೊಳವೆ ಬಾವಿ ಕೊರೆಯುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಾಗದ ವಿಚಾರದಲ್ಲಿ ಒಮ್ಮತ ಮೂಡದೇ ಗ್ರಾಮಕ್ಕೆ ಬಂದಿದ್ದ ಬೋರ್‌ವೆಲ್ ಲಾರಿಗಳನ್ನು ಅಡ್ಡಗಟ್ಟಿ ಪರ, ವಿರೋಧವಾಗಿ ಅಹೋರಾತ್ರಿ ಧರಣಿ ನಡೆಸಿದ್ದರಿಂದ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನೆಲೆಸಿತ್ತು. ಅಲ್ಲದೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೊಟ್ಟ ಭರವಸೆಯಂತೆ ಗ್ರಾಮದಲ್ಲಿ ಹೊಸ ಕೊಳವೆ ಬಾವಿ ಕೊರೆಸಲಿಲ್ಲವೆಂದು ಆರೋಪಿಸಿ ತಾಳಹಳ್ಳಿ ಗ್ರಾಮದ ನೂರಾರು ಮಹಿಳೆಯರು ಕಳೆದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಲಿ ಬಿಂದಿಗೆಗಳ ಸಮೇತ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಈ ಸಂದರ್ಭದಲ್ಲಿ ಗ್ರಾಮದ ರಮೇಶ್, ದೇವರಾಜ್, ನಾರಾಯಣಸ್ವಾಮಿ, ಮುನಿರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.