18ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂಜನಪ್ಪ ನಾಮಪತ್ರ ಸಲ್ಲಿಕೆ
Team Udayavani, Nov 15, 2019, 3:22 PM IST
ಚಿಕ್ಕಬಳ್ಳಾಪುರ: ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ನ.18 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜನಪ್ಪ ನಾಮಪತ್ರ ಸಲ್ಲಿಸಲ್ಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎಸ್. ಪಿ.ಶ್ರೀನಿವಾಸ್ ತಿಳಿಸಿದರು.
ಕ್ಷೇತ್ರದ ಮಂಚೇನಹಳ್ಳಿ ಹೋಬಳಿ ಘಟಕದ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಗುರುವಾರ ಆದೇಶ ಪತ್ರ ವಿತರಿಸಿ ಮಾತ ನಾಡಿದ ಅವರು, ಕಾಂಗ್ರೆಸ್ ಪಕ್ಷ ಯುವ ಜನತೆಯನ್ನು ಬೆಂಬಲಿಸಿ ರಾಜಕೀಯವಾಗಿ ಬೆಳೆಸುವುದರಲ್ಲಿ ಬೇರೆ ಬೇರೆ ಪಕ್ಷಗಳಿಗಿಂತ ಮುಂಚೂಣಿಯಲ್ಲಿದೆ ಎಂದರು.
ಯುವ ಶಕ್ತಿಯೇ ಕಾಂಗ್ರೆಸ್ ಪಕ್ಷದ ಆಸ್ತಿ. ಈಗಾಗಲೇ ಜಿಲ್ಲೆಯಲ್ಲಿ ಅತಿ ಹೆಚ್ಚು ಯುವ ಜನತೆಯು ಕಾಂಗ್ರೆಸ್ ಪರವಾಗಿರುವುದು ಈ ಹಿಂದಿನ ವಿಧಾನ ಸಭಾ ಕ್ಷೇತ್ರಗಳ ಫಲಿತಾಂಶವೇ ಸಾಕ್ಷಿ. ಉಪ ಚುನಾವಣೆಯಲ್ಲಿ ಯುವಕರು ಹಗಲಿರುಳು ಪ್ರಚಾರದಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್ ತತ್ವ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಸಾಧನೆಗಳ ಬಗ್ಗೆ ಮತದಾರರಿಗೆ ತಿಳಿಸಬೇಕು ಎಂದು ಹೇಳಿದರು.
18 ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ತೆರಳಿ ಎ.ಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು. ಈ ತಿಂಗಳ ಕೊನೆಯ ವಾರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೈಕ್ ರಾಲಿ ಮುಖಾಂತರ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್, ಚಿಕ್ಕಬಳ್ಳಾಪುರ ನಗರ ಘಟಕದ ಅಧ್ಯಕ್ಷ ವಿನಯ್ ಕುಮಾರ್ ಸೇರಿದಂತೆ ನೂತನವಾಗಿ ಆಯ್ಕೆಗೊಂಡ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.