ಕೊರೊನಾ ಸೋಂಕು ತಡೆಗೆ ನಿಯಮ ಪಾಲಿಸಿ
Team Udayavani, Jun 3, 2021, 5:52 PM IST
ಗೌರಿಬಿದನೂರು: ತಾಲೂಕಿನಲ್ಲಿ ಕೊರೊನಾ 2ನೇ ಅಲೆಇಳಿಕೆಯಾಗುತ್ತಿದ್ದರೂ ನಿರ್ಲಕ್ಷ್ಯ ಮಾಡದೇ ಮುಂಜಾಗ್ರತೆಕ್ರಮ ಪಾಲನೆ ಮಾಡಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರಸಭೆ ಕಚೇರಿ ಆವರಣದಲ್ಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮತ್ತು ಉದ್ಯಮಿ ಚಿದಾನಂದಗುಪ್ತ ಅವರನೇತೃತ್ವದಲ್ಲಿ ಪೌರ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.
ಸಂಕಷ್ಟಕ್ಕೆ ಸ್ಪಂದಿಸಲುಸಿದ್ಧ:ಕೊರೊನಾಸೋಂಕಿನ ಕಡಿವಾಣದಲ್ಲಿ ಪೌರಕಾರ್ಮಿಕರ ಸೇವೆ ಅಪಾರ. ಅವರ ಕುಟುಂಬದ ನಿರ್ವಹಣೆ ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಅವರ ಸೇವೆಪರಿಗಣಿಸಿ ದಿನಸಿ ಕಿಟ್ ವಿತರಣೆ ಮಾಡುತ್ತಿದ್ದೇವೆ. ಅಲ್ಲದೇ,ಅವರ ಸಂಕಷ್ಟಕ್ಕೆ ಸ್ಪಂದಿಸಲು ಸಿದ್ಧವಿದ್ದೇವೆಂದರು. ಮುಂದಿನ ದಿನಗಳಲ್ಲಿ ವಾಟರ್‌ವೆುನ್‌ಗಳಿಗೆ ದಿನಸಿ ಕಿಟ್‌ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
3ನೇ ಕೊರೊನಾ ಅಲೆ ತಡೆಗೆಕ್ರಮ: ತಜ್ಞರ ಪ್ರಕಾರ ಮುಂದಿನಅಕ್ಟೋಬರ್ ವೇಳೆಗೆ 3ನೇ ಅಲೆ ಬರುವ ಸೂಚನೆ ನೀಡಿದ್ದುಇದಕ್ಕೆ ನಾವು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದುಅಧಿಕಾರಿಗಳಿಗೆ ತಿಳಿಸಿದರು.ನಗರಸಭೆ ಅಧ್ಯಕ್ಷೆ ಗಾಯಿತ್ರಿ, ಪೌರಾಯುಕ್ತಸತ್ಯನಾರಾಯಣ, ಉದ್ಯಮಿ ಚಿದಾನಂದಗುಪ್ತ,ಮುಖಂಡರಾದ ಎಚ್.ಎನ್.ಪ್ರಕಾಶರೆಡ್ಡಿ, ನಗರಸಭೆಸದಸ್ಯರಾದ ರಮೇಶ್, ಅಮರ್, ರಫೀಕ್, ನಗರಸಭೆ ಸಿಬ್ಬಂದಿಸುರೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.