ಕೋವಿಡ್ 19 ತಡೆಗೆ ಮುನ್ನೆಚ್ಚರಿಕೆ ಅಗತ್ಯ
Team Udayavani, Mar 22, 2020, 3:39 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ 19 ವೈರಸ್ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೂ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನೆರೆಯ ಆಂಧ್ರದ ಗಡಿಗೆ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಅಂತರ ಕಾಯ್ದುಕೊಳ್ಳಿ: ಕೊರೊನಾ ವೈರಸ್ ಹರಡುವಿಕೆ ದಿನೇ ದಿನೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದರು.
ಸ್ಯಾನಿಟೈಸರ್ ಒದಗಿಸಿ: ಕೋವಿಡ್ 19 ಜಾಗೃತಿಗೆ ಎನ್‌ಸಿಸಿ ಹಾಗೂ ಸ್ಕೌಟ್ಸ್ ಅಂಡ್ ಗೈಡ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತೆ ಸೂಚಿಸಿದರು. ಗೌರಿಬಿದನೂರು ತಾಲೂಕಿನ ಅಲ್ಲೀಪುರದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು. ಡೀಸಿ ಆರ್.ಲತಾ ಮಾತನಾಡಿ, ಇಲ್ಲಿಯವ ರೆಗೆ 129 ಜನ ವಿದೇಶಗಳಿಂದ ಜಿಲ್ಲೆಗೆ ಬಂದಿದ್ದು, 34 ಮಂದಿ ಚಿಕ್ಕಬಳ್ಳಾಪುರ, 68 ಮಂದಿ ಗೌರಿಬಿದನೂರು, 6 ಮಂದಿ ಬಾಗೇ ಪಲ್ಲಿ, 12 ಮಂದಿ ಶಿಡ್ಲಘಟ್ಟ ತಾಲೂಕಿನವ ರಾಗಿದ್ದಾರೆ. ಇದರಲ್ಲಿ 89 ಮಂದಿಯನ್ನು 14 ದಿನಗಳ ಅವಲೋಕನದಲ್ಲಿ ಇರಿಸಲಾಗಿದೆ ಎಂದರು.
ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲಾಧಿಕಾರಿ ಆರ್. ಲತಾ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Tragedy: ಕಾರು ಅಪಘಾತ: ಯುವ ಪತ್ರಕರ್ತ ಸ್ಥಳದಲ್ಲೇ ಮೃತ್ಯು!
Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
MUST WATCH
ಹೊಸ ಸೇರ್ಪಡೆ
Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.