ಕೋವಿಡ್‌ 19 ತಡೆಗೆ ಹೋಂ ಕೇರ್‌ ಸೆಂಟರ್‌


Team Udayavani, Jul 4, 2020, 7:02 AM IST

care centre

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್‌-19 ಅನ್ನು ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ತರಲು ಹೋಂ ಕೇರ್‌ ಸೆಂಟರ್‌ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಈ ಬಗ್ಗೆ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಸಚಿವ  ಸಂಪುಟ ಉಪ ಸಮಿತಿ ಕೂಡ ಇದಕ್ಕೆ ಸಮ್ಮತಿ ಸೂಚಿಸಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ತಾಲೂಕಿನ ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ಗ್ರಾಮಕ್ಕೆ ಶುಕ್ರವಾರ ಸಂಜೆ  ಭೇಟಿ ನೀಡಿದ್ದ ವೇಳೆ  ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮತ್ತೂಮ್ಮೆ ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಜಾರಿಗೊಳಿಸುವ ಸಂದರ್ಭ, ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಈಗಾಗಲೇ ಮುಂದುವರಿದ ರಾಷ್ಟ್ರಗಳಲ್ಲಿ ಕೋವಿಡ್‌ 19 ತಡೆಗೆ  ಹೋಮ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೆಂಟರ್‌ಗಳನ್ನು ತೆರೆದು ಕಿಟ್‌ಗಳನ್ನು ವಿತರಿಸಲಿದೆ.

ಕಡಿಮೆ ವಯಸ್ಸಿನ, ಯಾವುದೇ ಕಾಯಿಲೆ ಇಲ್ಲದ, ಕೋವಿಡ್‌ 19 ಸೋಂಕು ಇಲ್ಲದವರಿಗೆ ಮನೆಗಳಲ್ಲಿ ಚಿಕಿತ್ಸೆ  ನೀಡಲು ಸರ್ಕಾರ ನಿರ್ಧರಿಸಿ ಜು.1ರಂದೇ ಮಾರ್ಗಸೂಚಿ ಪ್ರಕಟಿಸಿದೆ ಎಂದರು. ಹೋಮ್‌ ಕೇರ್‌ನಲ್ಲಿ ಟೆಲಿ ಮೆಡಿಸಿನ್‌, ವಿಡಿಯೋ ಹಾಗೂ ಐವಿಆರ್‌ ಮೂಲಕ ಎಲ್ಲಾ ವೈದ್ಯಕೀಯ ಸೇವೆಗಳನ್ನು ನೀಡುವ ಮೂಲಕ ಜನರ ಮನೆ  ಬಾಗಿಲಿಗೆ ತಲುಪಿಸುವ ಕೆಲಸ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದು ವಿವರಿಸಿದರು. ಜಿಪಂ ಅಧ್ಯಕ್ಷ ಚಿಕ್ಕನರಸಿಂ ಹಯ್ಯ, ಎಸಿ ಆರತಿ ಆನಂದ್‌, ತಹಶೀಲ್ದಾರ್‌ ನಾಗಪ್ರಶಾಂತ್‌, ಡಿವೈಎಸ್‌ಪಿ ರವಿಶಂಕರ್‌, ಸತ್ಯಸಾಯಿ ಗ್ರಾಮದ  ಸಂಜೀವಕರಾಯಶೆಟ್ಟಿ, ಗೋವಿಂದರೆಡ್ಡಿ ಮತ್ತಿತರರು ಇದ್ದರು.

ದೇಶದ ಬಗ್ಗೆ ಸಿದ್ದುಗೆ ದುರಭಿಮಾನ ಬೇಡ: ಭಾರತ ಹಾಗೂ ಚೀನಾ ಸಂಘರ್ಷಕ್ಕೆ ಕಾರಣವಾಗಿರುವ ಲಡಾಕ್‌ಗೆ ಪ್ರಧಾನಿ ಮೋದಿ ಹೋಗಿ ಸುಳ್ಳು ಹೇಳಿ ಬಂದಿದ್ದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟ  ಡಿಸಿಎಂ ಅಶ್ವತ್ಥನಾರಾಯಣ, ಒಂದು ಕಡೆ  ಚೀನಾ, ಮತ್ತೂಂದು ಕಡೆ ಪಾಕಿಸ್ತಾನದಂತಹ ಆತಂಕವಾದಿಗಳು ಇರುವ ಸಂದರ್ಭದಲ್ಲಿ ದೇಶ ಯಾವುದಕ್ಕೂ ತಗ್ಗಲ್ಲ,

ಬಗ್ಗಲ್ಲ ಎಂಬುದನ್ನು ತೋರಿಸಲು ಪ್ರಧಾನಿ ನರೇಂದ್ರ ಮೋದಿ ನೇರವಾಗಿ  ಲಡಾಕ್‌ಗೆ ಹೋಗಿ ಬಂದಿದ್ದಾರೆ. ಇದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನದಿಂದ ಒಪ್ಪಿಕೊಳ್ಳಬೇಕು. ದುರಭಿ ಮಾನ ತೋರಿಸಬಾರದೆಂದು ಹೇಳಿದರು. ಬಿಜೆಪಿಗೆ ದೇಶದ ಜನರ ಹಿತ ಮುಖ್ಯವೇ ಹೊರತು, ರಾಜಕೀಯ ಮುಖ್ಯವಲ್ಲ.  ಇಂತಹ ಸಂದರ್ಭದಲ್ಲಿ ದೇಶದ ಜನ ಒಗ್ಗಟ್ಟನಿಂದ ದೇಶದ ಸಮಸ್ಯೆಗಳ ವಿರುದ್ಧ ಹೋರಾಡಬೇಕು ಎಂದರು.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.