ಕೋವಿಡ್‌ 19 ಆರ್ಭಟ: ಮತ್ತಿಬ್ಬರು ಸಾವು


Team Udayavani, Jul 2, 2020, 6:27 AM IST

arbhata

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಕೋವಿಡ್‌ 19 ಸ್ಫೋಟ ಮುಂದುವರಿದಿದ್ದು ಬುಧವಾರ ಒಂದೇ ದಿನ ಚಿಕ್ಕಬಳ್ಳಾಪುರ ನಗರದಲ್ಲಿ ಬರೋಬ್ಬರಿ 15 ಕೋವಿಡ್‌ -19 ಪ್ರಕರಣ ವರದಿಯಾದರೆ ಮತ್ತೂಂದಡೆ ಕೋವಿಡ್‌-19 ತುತ್ತಾಗಿದ್ದ  ಮತ್ತಿಬ್ಬರು ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದಾರೆ. ಮಂಗಳವಾರ ಜಿಲ್ಲೆಯಲ್ಲಿ 13 ಪ್ರಕರಣ ಕಂಡು ಬಂದಿದ್ದವು.

ಈಗ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಮಾತ್ರ ದಿನದಿಂದ ದಿನಕ್ಕೆ ಕೋವಿಡ್‌ 19 ಮುಂದುವರಿದಿದ್ದು ಹೊಸದಾಗಿ 15  ಪ್ರಕರಣ ದಾಖಲಾಗಿ ಸೋಂಕಿತರ ಸಂಖ್ಯೆ 229ಕ್ಕೆ ತಲುಪಿದೆ. ಇನ್ನು ಬೆಂಗಳೂರಿನಿಂದ ಬಂದವರಲ್ಲಿಯೇ ಹೆಚ್ಚು ಪಾಸಿಟಿವ್‌ ಪ್ರಕರಣಗಳು ಕಂಡು ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.

ಇಬ್ಬರು ಸಾವು: ಜಿಲ್ಲೆಯಲ್ಲಿ ಕೋವಿಡ್‌-19ಗೆ ತುತ್ತಾಗಿದ್ದ ಗೌರಿಬಿದನೂರು 81 ವರ್ಷದ ವ್ಯಕ್ತಿ ಹಾಗೂ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ 55 ವರ್ಷದ ಮಹಿಳೆ ಚಿಕಿತ್ಸೆ ಫ‌ಲಿಸದೇ ಮೃತ ಪಟ್ಟಿದ್ದಾರೆ. ಇದುವರೆಗೂ ಕೋವಿಡ್‌-19ಗೆ  ಬಲಿಯಾದವರ ಸಂಖ್ಯೆ ಜಿಲ್ಲೆಯಲ್ಲಿ 6ಕ್ಕೆ ತಲುಪಿದ್ದು ಕೋವಿಡ್‌ ಇಲ್ಲದೇ ಒಬ್ಬರು ಮೃತ ಪಟ್ಟಿದ್ದಾರೆ. ಮೃತ 6 ಮಂದಿ ಪೈಕಿ ಚಿಂತಾಮಣಿ 1, ಚಿಕ್ಕಬಳ್ಳಾಪುರ 3, ಗೌರಿಬಿದನೂರು ತಾಲೂಕಿನಲ್ಲಿ ಇಬ್ಬರು ಇದ್ದಾರೆ.

ಹೆಚ್ಚುತ್ತಿರುವ ಸೋಂಕು: ಜಿಲ್ಲಾಡಳಿತ ಹಲವು ದಿನಗಳ ಹಿಂದೆಯಷ್ಟೇ ಜಿಲ್ಲೆ ಕೋವಿಡ್‌ 19 ಮುಕ್ತವಾಗಿ ಹಸಿರು ವಲಯವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿತ್ತು. ಆದರೆ, ಹಲವು ದಿನಗಳಿಂದ ಈಚೆಗೆ ನಿರಂತರವಾಗಿ ಸೋಂಕಿತರ ಸಂಖ್ಯೆ  ಹೆಚ್ಚಾಗುತ್ತಿರುವುದು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. 229 ಸೋಂಕಿತರ ಪೈಕಿ ಚಿಂತಾಮಣಿ 16, ಚಿಕ್ಕಬಳ್ಳಾಪುರ 53, ಬಾಗೇಪಲ್ಲಿ 53, ಗೌರಿಬಿದನೂರು 96, ಶಿಡ್ಲಘಟ್ಟ ತಾಲೂಕಿನಲ್ಲಿ 11 ಪ್ರಕರಣ  ದಾಖಲಾಗಿವೆ. ಈ ಪೈಕಿ 169 ಮಂದಿ ಡಿಸ್ಚಾರ್ಜ್‌ ಆಗಿದ್ದು ಇನ್ನೂ 53 ಪ್ರಕರಣ ಸಕ್ರಿಯವಾಗಿವೆ.

ಟಾಪ್ ನ್ಯೂಸ್

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು

Police-Stomach

Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ಕಾರು ಅಪಘಾತ: ಯುವ ಪತ್ರಕರ್ತ ಸ್ಥಳದಲ್ಲೇ ಮೃತ್ಯು!

12(1

Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.