ಬೀದಿನಾಟಕ ಪ್ರದರ್ಶಿಸಿ ಕೋವಿಡ್ ಜಾಗೃತಿ
Team Udayavani, Aug 25, 2020, 2:07 PM IST
ಶಿಡ್ಲಘಟ್ಟ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಮತ್ತು ಪರಿಸರ ಕಾಪಾಡಿಕೊಳ್ಳುವ ಮೂಲಕ ಕೋವಿಡ್ ಸೋಂಕು ನಿಯಂತ್ರಿಸಲು ಜನರಿಗೆ ಬೀದಿ ನಾಟಕದ ರೂಪದಲ್ಲಿ ಮನದಟ್ಟು ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದರು.
ತಾಲೂಕಿನ ದೊಡ್ಡದಾಸರಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಕೋವಿಡ್, ಸ್ವಚ್ಛತೆ ಮತ್ತು ಪರಿಸರ ಕುರಿತ ಜಾಗೃತಿ ಮೂಡಿಸುವ ಬೀದಿ ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಸಾಮಾನ್ಯವಾದ ರೋಗವಾಗಿದ್ದು, ಭಯ ಪಡುವ ಅಗತ್ಯವಿಲ್ಲ. ಬದಲಾಗಿ ಜಾಗೃತರಾಗಿರಬೇಕು. ಜೀವನ ಶೈಲಿ ಮತ್ತು ಆಹಾರದ ಪದ್ಧತಿ ಬದಲಾಯಿಸಿ ಕೊಂಡು ನಿಯಂತ್ರಿಸಲು ಪ್ರಯತ್ನಿಸಬೇಕೆಂದರು.
ಬೇರು ಬೆವರು ಕಲಾ ತಂಡದಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಾರ್ವಜನಿಕರು ಅನುಸರಿಸ ಬೇಕಾದ ಎಚ್ಚರಿಕೆ ಕ್ರಮಗಳು ಸೇರಿದಂತೆ ಕೋವಿಡ್ ಸೋಂಕು ಉಂಟು ಮಾಡುತ್ತಿರುವ ಹಾನಿಯ ಕುರಿತು ಸಾರ್ವಜನಿಕರಿಗೆ ನಾಟಕ ಪ್ರದರ್ಶಿಸಿ ಜಾಗೃತಿ ಮೂಡಿಸಿದರು. ನಮ್ಮ ಮನೆ ಹಾಗೂ ಸುತ್ತಮುತ್ತ ಸ್ವಚ್ಛವಾಗಿರಿಸಿ ಕೊಳ್ಳಬೇಕಾದ ಅಗತ್ಯ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸಿದರು.
ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸರಹಳ್ಳಿ ಮತ್ತು ನಗರದ ಸಿದ್ಧಾರ್ಥ ನಗರದ ಶಾಲೆಯ ಬಳಿ ಬೇರು ಬೆವರು ಕಲಾ ತಂಡದವರು ಜನಜಾಗೃತಿ ಬೀದಿ ನಾಟಕ ಪ್ರದರ್ಶಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ. ಎಂ.ತ್ಯಾಗರಾಜ್, ಮಹಿಳಾ ಜ್ಞಾನವಿಕಾಸ ಅಧಿಕಾರಿ ಲಕ್ಷ್ಮೀ, ಸೇವಾಪ್ರತಿನಿಧಿ ಲಾವಣ್ಯ, ಲಕ್ಷ್ಮೀ, ಬೇರು ಬೆವರು ಕಲಾ ತಂಡದ ಮಹೇಶ್, ಚಂದ್ರಶೇಖರ್, ಚಿ.ಮು. ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.