ಜುಲೈನಲ್ಲಿ ಕೋವಿಡ್ 19 ಸ್ಫೋಟ!
Team Udayavani, Jun 10, 2020, 6:38 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಕೋವಿಡ್ 19 ಸೋಂಕಿತರ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ತಜ್ಞರು ಹಾಗೂ ಪರಿಣಿತರು ತಮಗೆ ವರದಿ ನೀಡಿದ್ದಾರೆ. ಈ ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಮಂಗಳವಾರ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಬೆಂಗಳೂರಿನ ಲ್ಯಾಮ್ ರೀಸರ್ಚ್ ಪ್ರೈ.ಲಿ ನೀಡಿರುವ ಗಂಟಲು ದ್ರವ ಪರೀಕ್ಷಾ ಘಟಕ ಉದ್ಘಾಟಿಸಿ ಮಾತನಾಡಿದ ಸಚಿವರು, ಜಗತ್ತಿನ ಇತರೆ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ನಾವು ಸುರಕ್ಷಿತವಾಗಿದ್ದೇವೆ. ನಮಗಿಂತ ಕಡಿಮೆ ಜನಸಂಖ್ಯೆ ಇರುವ ದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೃತಪಟ್ಟಿದ್ದಾರೆ ಎಂದರು.
ಜುಲೈ ತಿಂಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಬಗ್ಗೆ ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಪರಾಮರ್ಶೆ ನಡೆಸಲಾಗುವುದು. ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸುಮಾರು 1 ಲಕ್ಷದಷ್ಟು ಹಾಸಿಗೆಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ಸೋಕಿತರಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೇರಿದಂತೆ ಲ್ಯಾಮ್ ರೀಸರ್ಚ್ ಪ್ರೈ.ಲಿ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.