ಸೋಂಕು ತಡೆಗೆ ಸಮರೋಪಾದಿ ಕೆಲಸ ಮಾಡಿ


Team Udayavani, Apr 24, 2021, 5:15 PM IST

ಸೋಂಕು ತಡೆಗೆ ಸಮರೋಪಾದಿ ಕೆಲಸ ಮಾಡಿ

ಚಿಕ್ಕಬಳ್ಳಾಪುರ: ಕೋವಿಡ್‌ ಸೋಂಕು ಹರಡದಂತೆ ಏನೆಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಸಹ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುವ ರೀತಿಯಲ್ಲಿ ಹೆಚ್ಚಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವೆಲ್ಲರೂ ಸಮರೋಪಾದಿಯಾಗಿ ಕಾರ್ಯನಿರ್ವಹಿಸಿ ಕೋವಿಡನ್ನು ಜಿಲ್ಲೆಯಿಂದ ತೊಲಗಿಸೋಣ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಶುಕ್ರವಾರ ಡೀಸಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ಕುಂದು- ಕೊರತೆಗಳ ಕುರಿತು ಜಿಲ್ಲಾ ಜಂಟಿ ಸಮಾಲೋಚನಾ ಸಮಿತಿ ಸಭೆಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು, ಜಿಲ್ಲಾ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ, ನೌಕರರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಆಲಿಸಿದರು.

ಬೆದರಿಸುವವರ ಮೇಲೆ ಕ್ರಮ: 2005 ರ ಮಾಹಿತಿ ಹಕ್ಕು ಕಾಯ್ದೆಯಡಿ ಕಾನೂನಾತ್ಮಕವಾಗಿ ಮಾಹಿತಿಯನ್ನು ಯಾರೇ ಕೇಳಲಿ ಅವರಿಗೆ ಮಾಹಿತಿಒದಗಿಸಿ, ಅದರ ಹೊರತಾಗಿ ಮಾಹಿತಿಹಕ್ಕು ಹೆಸರಲ್ಲಿ ಹೆದರಿಸಿ ಬೆದರಿಸಿ ಅನಾವಶ್ಯಕವಾಗಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಅಧಿಕಾರಿ, ಸಿಬ್ಬಂದಿ ನಿರ್ಭಿತರಾಗಿ ಕೆಲಸ ನಿರ್ವಹಿಸುವಂತೆ ಆತ್ಮ ವಿಶ್ವಾಸ ತುಂಬಿದರು.

ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿ: ನೌಕರರ ವೈದ್ಯಕೀಯ ವೆಚ್ಚದ ಮರುಪಾವತಿ ಮಾಡಲು ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅಧಿಕಾರಿ, ನೌಕರರ ವಿರುದ್ಧ ಯಾವುದೇ ಇಲಾಖೆ ವಿಚಾರಣೆಗಳಿದ್ದಲ್ಲಿ ಅನಾವಶ್ಯಕ ವಿಳಂಬ ತೋರದೆ, ಶೀಘ್ರ ಇತ್ಯರ್ಥ ಮಾಡಿಕೊಳ್ಳಿ. ನೌಕರರಿಗೆ ಒಳಾಂಗಣ, ಹೊರಾಂಗಣ ಕ್ರೀಡೆ, ಸಭೆ, ಸಮಾರಂಭ ಹಮ್ಮಿಕೊಳ್ಳಲು ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಕೇಂದ್ರದಿಂದ 6 ಕಿ.ಮೀ ದೂರದ ಅಂತರದಲ್ಲಿ ಜಾಗ ನೀಡಲಾಗುವುದು. ಡೀಸಿ ಕಚೇರಿ ಆವರಣದಲ್ಲಿ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಿ, ಒಂದು ಪಾರ್ಕಿಂಗ್‌ ಶೇಡ್‌ ನಿರ್ಮಾಣ ಮಾಡಿ ಎಂದು ತಿಳಿಸಿದರು.

ಕೆ.ಜಿ.ಐ.ಡಿ ಸಾಲಗಳ ಅರ್ಜಿಗಳನ್ನು ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಗಳ ಅರ್ಜಿಗಳನ್ನುಒಂದು ವಾರದ ಒಳಗಡೆ ಇತ್ಯರ್ಥ ಪಡಿಸಬೇಕು. ಕರ್ತವ್ಯ ನಿರ್ವಹಿಸುವ ಯಾವುದೇ ಸರ್ಕಾರಿ ನೌಕರರಿಗೆ ಕೋವಿಡ್‌ ಬಂದರೆ ಅಂತಹವರಿಗೆ ವಿಶೇಷ ನಿಗಾವಹಿಸಿ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಗುರು ಭವನ ನಿರ್ಮಾಣ: ಜಿಲ್ಲೆಯಲ್ಲಿ ಗುರು ಭವನ ನಿರ್ಮಿಸಲು ಈಗಾಗಲೇ ಜಾಗವನ್ನುಗುರುತಿಸಲಾಗಿದೆ. ಒಂದು ಉತ್ತಮ ಭವನ ನಿರ್ಮಾಣಕ್ಕೆ ನೀಲ ನಕ್ಷೆ ಮಾದರಿ ತಯಾರಿಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್‌, ಅಪರ ಜಿಲ್ಲಾಧಿಕಾರಿ ಎಚ್‌. ಅಮರೇಶ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ನಾಗರಾಜ್‌, ತಾಲೂಕು ಸರ್ಕಾರಿ ನೌಕರರ ಸಂಘಗಳ ಅಧ್ಯಕ್ಷರಾದ ಕೆ.ಎನ್‌ ಸುಬ್ಟಾರೆಡ್ಡಿ (ಶಿಡ್ಲಘಟ್ಟ), ಬಿ. ಜನಾರ್ಧನ್‌ರೆಡ್ಡಿ (ಚಿಂತಾಮಣಿ), ಸತ್ಯನಾರಾಯಣರೆಡ್ಡಿ (ಬಾಗೇಪಲ್ಲಿ), ಕೆ.ವಿ. ನಾರಾಯಣಸ್ವಾಮಿ(ಗುಡಿಬಂಡೆ), ಮಧು ಸೂದನ್‌ರೆಡ್ಡಿ (ಗೌರಿಬಿದನೂರು) ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.