ಹೊಸ 100 ಕೇಸ್ ಪತ್ತೆ, ಇಬ್ಬರು ಸಾವು
Team Udayavani, Jul 26, 2020, 8:27 AM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಕೋವಿಡ್ ಆರ್ಭಟ ಮುಂದುವರಿದಿದ್ದು, ಶನಿವಾರ ಒಂದೇ ದಿನ ಹೊಸ 100 ಕೋವಿಡ್-19 ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,358ಕ್ಕೆ ಏರಿಕೆ ಕಂಡಿದೆ.
ಹೊಸದಾಗಿ ಪತ್ತೆಯಾಗಿರುವ 100 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 16, ಬಾಗೇಪಲ್ಲಿ 21, ಚಿಂತಾಮಣಿ 16, ಗೌರಿಬಿದನೂರು 8, ಗುಡಿಬಂಡೆ 18, ಶಿಡ್ಲಘಟ್ಟದಲ್ಲಿ 21 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇದೇ ಮೊದಲ ಬಾರಿಗೆ ಗುಡಿಬಂಡೆಯಲ್ಲಿ 10ಕ್ಕಿಂತ ಹೆಚ್ಚು ಪ್ರಕರಣಗಳು ಒಂದೇ ದಿನ ಪತ್ತೆಯಾಗಿವೆ. ಒಟ್ಟಾರೆ 1,358 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 457, ಬಾಗೇಪಲ್ಲಿ 184, ಚಿಂತಾಮಣಿ 210, ಗೌರಿಬಿದನೂರು 326, ಗುಡಿಬಂಡೆ 58, ಶಿಡ್ಲಘಟ್ಟದಲ್ಲಿ ಒಟ್ಟು 123 ಪ್ರಕರಣಗಳು ದಾಖಲಾಗಿವೆ. ಇದುವರೆಗೂ 621 ಮಂದಿ ಡಿಸಾcರ್ಜ್ ಆಗಿದ್ದು 708 ಸಕ್ರಿಯ ಪ್ರಕರಣಗಳು ಇವೆ. ಚಿಕ್ಕಬಳ್ಳಾಪುರ, ಗೌರಿಬಿದನೂರು, ಚಿಂತಾಮಣಿಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಬಳ್ಳಾಪುರ 500 ರ ಸಮೀಪದಲ್ಲಿದೆ.
ಸಾವಿನ ಸಂಖ್ಯೆ 28ಕ್ಕೆ: ಜಿಲ್ಲೆಯಲ್ಲಿ ಶನಿವಾರ ಕೋವಿಡ್ -19ಗೆ ಇಬ್ಬರು ಬಲಿಯಾಗಿದ್ದಾರೆ. ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವು ಸಂಭವಿಸಿದ್ದು ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ಗೆ 28 ಮಂದಿ ಬಲಿಯಾಗಿದ್ದಾರೆ. ಆ ಪೈಕಿ ಚಿಕ್ಕಬಳ್ಳಾಪುರ 12, ಚಿಂತಾಮಣಿ, ಬಾಗೇಪಲ್ಲಿ, ಶಿಡ್ಲಘಟ್ಟದಲ್ಲಿ ತಲಾ 2, ಗೌರಿಬಿದನೂರು 9, ಗುಡಿಬಂಡೆ 1 ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.