ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಚಿಕಿತ್ಸೆಗೆ ಸಿದ್ಧತೆ
Team Udayavani, Apr 11, 2021, 4:37 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇ ದಿನೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್ ಅವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹೊಸ ಸಮಸ್ಯೆ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ ತಾಲೂಕುಗಳ ಪೈಕಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾ ಪುರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ.
ಇದರಿಂದ ನಾಗರಿಕರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಡಳಿತ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸದೆ ನಿರ್ಲಕ್ಷ್ಯಿಸುವ ನಾಗರಿಕರಿಗೆ ನಗರಸಭೆಯ ಮಾರ್ಷಲ್‌ಗಳ ಮೂಲಕ ದಂಡ ವಸೂಲಿ ಮಾಡುವ ಕ್ರಮ ಕೈಗೊಂಡರೂ ಮಾಸ್ಕ್ ಧರಿಸಲು ನಾಗರಿಕರು ನಿರ್ಲಕ್ಷ್ಯವಹಿಸಿರುವುದು ಕಂಡುಬಂದಿದೆ.
ದಿನೇ ದಿನೆ ಸೋಂಕಿತರು ಹೆಚ್ಚಳ: ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಬೇರೆಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ಜಿಲ್ಲೆ ಯಲ್ಲಿಸೋಂಕಿನ ಪ್ರಮಾಣ ಕಡಿಮೆಯಾದರೂ, ದಿನೇ ದಿನೆಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣ ವಾಗಿದೆ. ಕೋವಿಡ್ ಸೋಂಕು ನಿಯಂತ್ರಿಸಲು ಮತ್ತು ಕೋವಿಡ್ ಸೋಂಕಿತರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆ ಅಗತ್ಯ ವ್ಯವಸ್ಥೆ ಗಳನ್ನು ಮಾಡಿಕೊಂಡರೂ, ಸೋಂಕಿನ ಪ್ರಮಾಣ ಹೆಚ್ಚಳವಾದರೆಮತ್ತೂಮ್ಮೆ ವಸತಿ ನಿಲಯಗಳನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ಅನಿವಾರ್ಯದ ಪರಿಸ್ಥಿತಿನಿರ್ಮಾಣವಾಗುವ ಅಪಾಯ ಕಂಡು ಬಂದಿದೆ.
ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಯ ಮೂಲಕ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯ 08 ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿ ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಖ್ಯೆಗೆ ಅನುಗುಣವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ 860 ಹಾಸಿಗೆಗಳು, 35 ವೆಂಟಿಲೇಟರ್‌ಗಳು, ಆಕ್ಸಿಜೆನ್ ಹೊಂದಿದ 315 ಹಾಸಿಗೆಗಳು ಹಾಗೂ 45 ಐಸಿಯು ಹಾಸಿಗೆಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಆಸ್ಪತ್ರೆಗಳ ನೆರವು: ಕೋವಿಡ್ ಸೋಂಕಿತರಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುವ ಸಲುವಾಗಿ ಖಾಸಗಿಆಸ್ಪತ್ರೆಗಳ ನೆರವು ಪಡೆದುಕೊಳ್ಳಲಾಗಿದೆ. ಅಲ್ಲಿಯೂ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತರಿಗೆ ಚಿಕಿತ್ಸೆ ನೀಡುವ ಜೊತೆಗೆ ಸೋಂಕು ನಿಯಂತ್ರಿಸಲು ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸೋಂಕಿತರಿಗೆಚಿಕಿತ್ಸೆ ನೀಡಲು ಯಾವುದೇ ರೀತಿಯ ಲೋಪವಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯ ಹಾಸಿಗೆಗಳುಮತ್ತು ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ.
ತಜ್ಞ ವೈದ್ಯರ ತಂಡ ಸೇವೆಗೆ ಸಿದ್ಧ: ಜಿಲ್ಲಾ ಆರೋಗ್ಯ ಅಧಿಕಾರಿಗಳ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿನುರಿತ ತಜ್ಞ ವೈದ್ಯರ ತಂಡ ಕೋವಿಡ್ ಸೋಂಕಿತರಿಗೆ ಸೇವೆ ಮಾಡಲು ಸರ್ವಸನ್ನದರಾಗಿದ್ದು, ಕೆಮ್ಮು, ಜ್ವರ, ನೆಗಡಿ ಅಥವಾ ಇನ್ನಿತರೆ ಲಕ್ಷಣಗಳು ಕಂಡು ಬಂದರೆ ಕೂಡಲೇ ಕೋವಿಡ್-19 ಪರೀಕ್ಷೆಗೆ ಒಳಪಡಿಸಿ, ಒಂದು ವೇಳೆ ಪಾಸಿಟಿವ್ ಪ್ರಕರಣ ದೃಢಪಟ್ಟರೆ ಕೂಡಲೇ ಅವರಿಗೆ ಜಿಲ್ಲಾ ಮಟ್ಟದಲ್ಲಿ ತೆರೆದಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಯನ್ನು ಕಲ್ಪಿಸಲಾಗಿದೆ. ತುರ್ತು ವಾಹನದ ಸೌಲಭ್ಯಒದಗಿಸಲಾಗಿದೆ.
ವಾರಿಯರ್ ತಂಡ ಸಕ್ರೀಯಗೊಳಿಸಲು ಕ್ರಮ:
ಕಳೆದ ವರ್ಷ ಕೋವಿಡ್ ಸೋಂಕಿನ ಅಲೆಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಸೋಂಕು ಕಡಿಮೆಯಾಗಿದೆ. ಸೋಂಕು ನಿಯಂತ್ರಿಸಲು ಈ ಹಿಂದೆ ಜಾರಿಗೊಳಿಸಿದ್ದ ವ್ಯವಸ್ಥೆಗಳನ್ನು ಮತ್ತೂಮ್ಮೆ ಚಾಲನೆ ನೀಡಲು ಸಿದ್ಧತೆ ಮಾಡಿ ಕೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿತಾಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳು ಹಾಗೂ ಗ್ರಾಪಂ ಮಟ್ಟದಲ್ಲಿ ಕೊರೊನಾ ವಾರಿಯರ್ತಂಡಗಳನ್ನು ಸಕ್ರೀಯಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಅಥವಾ ಹೊರ ರಾಜ್ಯ ಗಳಿಂದ ಬರುವ ಪ್ರಯಾಣಿಕರ ಮೇಲೆ ಕಣ್ಣಿಡಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಲಸಿಕೆ: ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರದ ಪರಿಷ್ಕೃತ ಆದೇಶದನ್ವಯ ಸರ್ಕಾರಿ ಶಾಲೆಗಳಲ್ಲಿ ಕೋವಿಡ್ ಲಸಿಕೆ ಹಾಕುವ ಅಭಿ ಯಾನವನ್ನು ಆರಂಭಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅರಿವು ಮೂಡಿಸಲಾ ಗುತ್ತಿದೆ. ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಚುನಾ ಯಿತ ಪ್ರತಿ ನಿಧಿಗಳು ಮತ್ತು ಸಮಾಜ ಸೇವಕರು ಲಸಿಕೆ ನೀಡುವ ಅಭಿಯಾನವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಆರೋಗ್ಯ ಸಚಿವರ ಸೂಚನೆ ಮತ್ತು ಜಿಲ್ಲಾ ಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಜೊತೆಗೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯಗಳೊಂದಿಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ● ಡಾ.ಇಂದಿರಾ.ಆರ್.ಕಬಾಡೆ, ಜಿಲ್ಲಾ ಆರೋಗ್ಯ ಅಧಿಕಾರಿ, ಚಿಕ್ಕಬಳ್ಳಾಪುರ
-ಎಂ.ಎ.ತಮೀಮ್‌ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.