ಸೂಕ್ತ ಭಧ್ರತೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ಕೋವಿಡ್-19 ಲಸಿಕೆ ಆಗಮನ : ಸುರಕ್ಷಿತವಾಗಿ ಶೇಖರಣೆ
Team Udayavani, Jan 13, 2021, 11:49 PM IST
ಚಿಕ್ಕಬಳ್ಳಾಪುರ: ಬಹು ನಿರೀಕ್ಷಿತ ಕೋವಿಡ್-19 ಲಸಿಕೆಯು ಸೂಕ್ತ ಪೊಲೀಸ್ ಭದ್ರತೆದೊಂದಿಗೆ ಬುಧವಾರ ಸಂಜೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಆಗಮಿಸಿತು.
ಜಿಲ್ಲಾಧಿಕಾರಿ ಆರ್. ಲತಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಲಸಿಕೆಯನ್ನು ಸೂಕ್ತ ಭದ್ರತೆಯೊಂದಿಗೆ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಇಲಾಖೆಯ ದಾಸ್ತಾನಿ ಕೊಠಡಿಯಲ್ಲಿ ಸುರಕ್ಷಿತವಾಗಿ ಶೇಖರಣೆ ಮಾಡಲಾಯಿತು.
ಜಿಲ್ಲೆಯಲ್ಲಿ ಜನವರಿ 16 ರಿಂದ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ದೊರೆಯಲಿದೆ. ಪ್ರಸ್ತುತ ಜಿಲ್ಲೆಗೆ 500 ವಾಯಿಲ್ಸ್(ಡೋಸ್) ನಷ್ಟು ಲಸಿಕೆ ಬಂದಿದ್ದು, ಇದನ್ನು ಸುಮಾರು 5000 ಜನರಿಗೆ ಲಸಿಕೆ ನೀಡಬಹುದಾಗಿದೆ. ಪ್ರಸ್ತುತ ಜನವರಿ 16 ರಂದು ಮೊದಲ ಹಂತದಲ್ಲಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ 853 ಮಂದಿ ಕಾರ್ಯಕರ್ತರಿಗೆ(ವಾರಿಯರ್ಸ್) ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಂತರದ ದಿನಗಳಲ್ಲಿ ಉಳಿದ 4000 ಜನರಿಗೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.