ಕೋವಿಡ್ ನಿಯಂತ್ರಣಕ್ಕೆ ಕ‌ಠಿಣ ಕ್ರಮ


Team Udayavani, Mar 27, 2021, 1:55 PM IST

ಕೋವಿಡ್ ನಿಯಂತ್ರಣಕ್ಕೆ ಕ‌ಠಿಣ ಕ್ರಮ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆನಡೆಸಿ, ಕೆಲವೊಂದು ಹಬ್ಬಗಳನ್ನು ಆಚರಿಸಲು ನಿಷೇಧಿಸಿ ಪರಿಷ್ಕೃತ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಹಬ್ಬವನ್ನು ಸರಳವಾಗಿ ಆಚರಿಸಿ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಮಂಚೇನಹಳ್ಳಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿಮಾತನಾಡಿ, ಮಹಾರಾಷ್ಟ್ರದಲ್ಲಿ 35 ಸಾವಿರ ಮಂದಿಗೆ ಕೋವಿಡ್ ವ್ಯಾಪಿಸಿದೆ. ಕೆಲವೊಂದು ನಗರಗಳನ್ನು ಲಾಕ್‌ಡೌನ್‌ ಮಾಡಲಾಗಿದೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ, ಮಾರ್ಗಸೂಚಿ ಹೊರಡಿಸಲಾಗಿದೆ. ಜನರು ಮುಂದಿನ ಎರಡು ತಿಂಗಳ ಕಾಲ ಹಬ್ಬ- ಜಾತ್ರೆಗಳನ್ನು ನಿಲ್ಲಿಸಿ, ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸೋಂಕಿಗೆ ಉದಾಸೀನ ಬೇಡ: ಸಮಾಜದಲ್ಲಿ ಪ್ರತಿಯೊಬ್ಬರ ಜೀವ ಅಮೂಲ್ಯ. ಮನೆಯಲ್ಲಿರುವ ಹಿರಿಯ ಮತ್ತು ಕಿರಿಯರ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಸೋಂಕಿನ ಪ್ರಭಾವದಿಂದ ನಮ್ಮ ಕಣ್ಣೆದುರು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ನಾಗರಿಕರು ಸೋಂಕಿನ ಬಗ್ಗೆ ಉದಾಸೀನ ಮಾಡುವುದು ಬೇಡ. ಸ್ವಯಂ ಪ್ರೇರಿತ ರಾಗಿ ಕಟ್ಟುನಿಟ್ಟಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ಪ್ರಧಾನಿ ಮೋದಿ ನಾಯಕತ್ವದಿಂದ 10 ತಿಂಗಳ ಅವಧಿಯಲ್ಲಿ ಕೋವಿಡ್ ಲಸಿಕೆ ಬಂದಿದೆ. 45 ವರ್ಷ ಮೇಲ್ಪಟ್ಟ ನಾಗರಿಕರು ಲಸಿಕೆ ಪಡೆದುಕೊಂಡು ಆರೋಗ್ಯಕಾಪಾಡಿಕೊಳ್ಳಬೇಕು. ನೆರೆಯ ಕೇರಳ, ಮಹಾರಾಷ್ಟ್ರ, ಪಂಜಾಬ್‌ ಹೀಗೆ ಬೇರೆ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಆರೋಗ್ಯ ತಪಾಸಣೆ ಮಾಡುತ್ತಿದ್ದೇವೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ಹೆಚ್ಚಾಗಿರುವ ಕುರಿತು ಪರಿಶೀಲಿಸಲಾಗಿ, ಶೇ.60ರಷ್ಟು ಹೊರರಾಜ್ಯಗಳಿಂದ ಬಂದ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿಹೊರರಾಜ್ಯಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ಕಡ್ಡಾಯ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಪಂ ಸದಸ್ಯ ಬಾಲಕೃಷ್ಣ, ‌ ಕೋಚಿಮುಲ್‌ ನಿರ್ದೇಶಕ ಸುಬ್ಟಾರೆಡ್ಡಿ, ಡಿಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹನುಮೇಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷಜಿ.ಆರ್‌.ರಾಜಶೇಖರ್‌, ಮುಖಂಡರಾದ ಮಂಚೇನಹಳ್ಳಿರಿಯಾಝ್, ಯುವ ಮುಖಂಡ ಯತೀಶ್‌ರೆಡ್ಡಿ, ಮಧುಸುಧನ್‌ರೆಡ್ಡಿ, ಚಿಕ್ಕಬಳ್ಳಾಪುರ ನಗರ ಬಿಜೆಪಿ ಮಂಡಲ ಉಪಾಧ್ಯಕ್ಷ ಆನಂದ್‌, ಮುಖಂಡ ರಿಯಾಝ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.