ದಲಿತರು, ಹಿಂದುಳಿದ ವರ್ಗದವರು ಗೋಮಾಂಸ ಸೇವಿಸುವುದಿಲ್ಲ: ಸಿದ್ದು ಹೇಳಿಕೆಗೆ ಸುಧಾಕರ್ ಆಕ್ರೋಶ

Team Udayavani, Dec 12, 2020, 5:28 PM IST

sudhakar

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಗೋವುಗಳನ್ನು ಸಂರಕ್ಷಣೆ ಮಾಡುವ‌‌ ಉದ್ದೇಶದಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ ಹೊರತು ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ರಾಜ್ಯ ಆರೋಗ್ಯ ಮತ್ತು ‌ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಹಾಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದ ವರ್ಗದವರು ಗೋಮಾಂಸವನ್ನು ಸೇವೆ ಮಾಡುತ್ತಿಲ್ಲ. ಅವರೆಲ್ಲರೂ ಸಸ್ಯಾಹಾರಿಗಳಾಗಿದ್ದಾರೆ. ಆದರೂ ಸಹ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಸಮಾಜವನ್ನು ಅಪಹಾಸ್ಯ‌ ಮತ್ತು ಅವಮಾನ ಮಾಡುತ್ತಿದ್ದಾರೆ. ಜೊತೆಗೆ ಹಿಂದೂ ಸಮಾಜವನ್ನು ಹೊಡೆಯಲು ಹುನ್ನಾರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೋಹತ್ಯೆ ನಿಷೇಧ ಬಗ್ಗೆ ದಲಿತರು, ಹಿಂದುಳಿದ ವರ್ಗದವರು ಗೋ ಮಾಂಸ ತಿಂತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ಸುಳ್ಳು. ದಲಿತರು, ಹಿಂದುಳಿದ ವರ್ಗದವರು ಯಾರು ಕೂಡ ಗೋಮಾಂಸ ತಿನ್ನಲ್ಲ, ಸುಮ್ಮನೇ ಅವರನ್ನು ಎಳೆದು ತರುವುದು ಸರಿಯಲ್ಲ. ಅವರನ್ನು ಅಪಹಾಸ್ಯ ಮಾಡೋದು ವಿಪಕ್ಷ ನಾಯಕರಿಗೆ ತರವಲ್ಲ. ಎಷ್ಟೊ ಮಂದಿ‌ ದಲಿತರು ಮಾಂಸಹಾರ ಬಿಟ್ಟಿದ್ದಾರೆ. ಹೀಗೆ ಮಾಡಿ ಮಾಡಿ ಸಿದ್ದರಾಮಯ್ಯ ಹಿಂದೂಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಮುಂದುವರಿದ ಪ್ರತಿಭಟನೆ: ಕೃಷಿ ಕಾಯ್ದೆಯಿಂದ ರೈತರಿಗೆ ಹೊಸ ಮಾರುಕಟ್ಟೆ, ತಂತ್ರಜ್ಞಾನ ಲಭ್ಯ

ರಾಜಕಾರಣದ ಮೂಲಕ ವ್ಯಾಪಾರ ಮಾಡಿಕೊಳ್ಳಲು ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರ್‌ರೆಡ್ಡಿ ಅವರು ಅನುಭವಿಗಳು. ಕಳೆದ 20 ವರ್ಷಗಳಿಂದ ಇವರ ನಾಟಕವನ್ನು ನೋಡಿರುವ ಕ್ಷೇತ್ರದ ಜನ ಗ್ರಾಮ ಪಂಚಾಯತಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಭವಿಷ್ಯ ‌ನುಡಿದರು.

ಮಾಜಿ ಸಿಎಂ  ಸಿದ್ದರಾಮಯ್ಯ ಏನು ಹೇಳ್ತಾರೆ ಅದಕ್ಕೆ ವಿರುದ್ಧವಾಗಿ ಫಲಿತಾಂಶ ಬರುತ್ತದೆ. ನಾನು ಅವರ ಜೊತೆ ಇದ್ದಾಗಿನಿಂದ ನೋಡುತ್ತಿದ್ದೇನೆ. ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಎಂದರು. ಆದರೇ ಹೆಚ್ ಡಿಕೆ ಸಿಎಂ ಆಗಿ ಬಿಟ್ಟರು.‌ ಈಗ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದಿದ್ದಾರೆ, ಎಲ್ಲಾ ಕಡೆ ಬಿಜೆಪಿ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೇಯೇ ಇಲ್ಲ. ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ ಎಲ್ಲ ರೀತಿಯಲ್ಲೂ ಒಳ್ಳೆಯ ಆಡಳಿತ ‌ನೀಡುತ್ತಿದ್ದಾರೆ ಎಂದ ಸಚಿವರು ಸಿಎಂ‌ ಬದಲಾವಣೆ ಕೇವಲ ಮಾಧ್ಯಮದವರ ಸೃಷ್ಠಿ ಎಂದರು.

ಇದನ್ನೂ ಓದಿ:  ಕೊಡಪಾನದ ಒಳಗೆ ಮೂಗು ತೂರಿಸಲು ಹೋಗಿ ತಲೆ ಸಿಲುಕಿಕೊಂಡು ಒದ್ದಾಡಿದ ಬೀದಿ ನಾಯಿ | Udayavni

ಸುಧ್ದಿಗಾರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಬ್ಬರು ಮಾಜಿ ಸಿಎಂಗಳು ಪರಸ್ಪರ ನಿಂದನೆ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ, ರಾಜ್ಯದಲ್ಲಿ ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನವಿದೆ.  ರಾಜಕಾರಣಿಗಳು ಸಿದ್ಧಾಂತಗಳ ಬಗ್ಗೆ ಮಾತನಾಡಬೇಕು, ವಿಷಯಗಳ ಬಗ್ಗೆ ಚರ್ಚೆ ಮಾಡಬೇಕು. ಒಬ್ಬರಿಗೊಬ್ಬರು ನಿಂದನೆ ಮಾಡಿಕೊಳ್ಳುವುದು ಜನರ ಮುಂದೆ ಸಣ್ಣದಾಗಿ ಕಾಣುತ್ತಾರೆ. ರಾಜಕಾರಣದಲ್ಲಿ ಸ್ಪರ್ಧೆ, ಪ್ರತಿಸ್ಪರ್ಧೆ ಸಾಮಾನ್ಯ,  ಇಬ್ಬರಿಗೂ ಮನವಿ ಮಾಡುತ್ತೇನೆ  ಪರಸ್ಪರ ‌ನಿಂದನೆ ಮಾಡೊದು ನಿಲ್ಲಿಸಲಿ ಎಂದರು.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾರಿಗೆಸಂಸ್ಥೆ ನಷ್ಟವನ್ನು ಅನುಭವಿಸಿದೆ. ಸಾರಿಗೆ ನೌಕರರ ವೇತನವನ್ನು ಪಾವತಿಸಲು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದ್ದು, ಸಾರಿಗೆ ನೌಕರರ  ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕಪಡಿಸಿದರು.

ಜಿ.ಪಂ‌ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ‌ ನಾಗರಾಜ್, ಮರಳುಕುಂಟೆ ಕೃಷ್ಣಮೂರ್ತಿ, ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಬಿಐ ವಶದಲ್ಲಿದ್ದ ಕೆಜಿಗಟ್ಟಲೇ ಚಿನ್ನ ನಾಪತ್ತೆ: ಕೋರ್ಟ್ ನಲ್ಲಿ ಸಿಬಿಐ ವಾದಿಸಿದ್ದೇನು?

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.