ಕೆರೆ, ಕುಂಟೆ, ಕಲ್ಯಾಣಿ ಅಭಿವೃದ್ದಿಗೆ ಯೋಜನೆ
ಯೋಜನಾ ವೆಚ್ಚದ ವರದಿ ವಾರದೊಳಗೆ ಸಲ್ಲಿಸಿ ! ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ!
Team Udayavani, Feb 12, 2021, 4:46 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜಲ ಸಂಪನ್ಮೂಲವನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಕೆರೆ, ಕುಂಟೆ, ಕಲ್ಯಾಣಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ಹಾಕಿಕೊಂಡಿದ್ದು, ಈ ಸಂಬಂಧ ಅಭಿವೃದ್ಧಿಪಡಿಸಬಹುದಾದ ಕಲ್ಯಾಣಿ, ಚೆಕ್‌ಡ್ಯಾಂಗಳ ಸಮಗ್ರ ಯೋಜನಾ ವೆಚ್ಚದ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ಜಿಲ್ಲಾಡಳಿತ ಭವನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೆರೆಗಳು ಮತ್ತು ಕಲ್ಯಾಣಿಗಳ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಗುರುವಾರ ನಡೆಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶ್ರಮದಾನ ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ ಜಲಮೂಲಗಳ ಸಂರಕ್ಷಣೆಗೆ ಚಿಂತನೆ ಮಾಡಲಾಗಿದೆ. ಈ ದಿಸೆಯಲ್ಲಿ ಜಿಲ್ಲಾಡಳಿತದೊಂದಿಗೆ ಎನ್‌ಸಿಸಿ, ಎನ್ ಎಸ್‌ಎಸ್, ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದಂತೆ ಇತರೆ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಕಲ್ಯಾಣಿ ಅಭಿವೃದ್ಧಿ: ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 15 ಕಲ್ಯಾಣಿಗಳಿದ್ದು, ಈ ಪೈಕಿ 3 ಕಲ್ಯಾಣಿಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಇನ್ನೂ 12 ಕಲ್ಯಾಣಿಗಳನ್ನು ಮತ್ತಷ್ಟು ಅಭಿವೃದ್ಧಿ ಮಾಡಬೇಕಾಗಿದ್ದು, ಡಿಎಂಎಫ್‌ಟಿ ಮತ್ತು ವಿಶೇಷ ಅನುದಾನದ ಮೂಲಕ ಅಭಿವೃದ್ಧಿಪಡಿಸಲಾಗುವುದು. ಇದರ ಜತೆಗೆ ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಕೂಡ ಲಭ್ಯವಿರುವ ಅನುದಾನದ ಜತೆಗೆ ಸ್ಥಳೀಯ ದಾನಿಗಳ ಮೂಲಕವೂ ಕಲ್ಯಾಣಿ, ಚೆಕ್ ಡ್ಯಾಂಗಳನ್ನು ಅಭಿವೃದ್ಧಿ ಕೈಗೊಳ್ಳಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಡಿಪಿಆರ್ ವರದಿ ಸಲ್ಲಿಸಿ: ಚಿಕ್ಕಬಳ್ಳಾಪುರ ಹೊರವಲಯದ ರಂಗಸ್ಥಳವು ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದ್ದು, ವಿವಿಧ ಕಡೆಯಿಂದ ನೂರಾರು ಭಕ್ತರು ಬಂದು ಹೋಗುತ್ತಾರೆ. ಹಾಗಾಗಿ ಈ ಸ್ಥಳವನ್ನು ಉತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬಹುದಾಗಿದ್ದು, ಈ ಸಂಬಂಧ ಇಲ್ಲಿನ 3 ಕಲ್ಯಾಣಿಗಳ ಅಭಿವೃದ್ಧಿ, ಉದ್ಯಾನವನ ನಿರ್ಮಾಣ, ಶೌಚಾಲಯ ಮತ್ತು ಸ್ನಾನದ ಗೃಹಗಳ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಎಷ್ಟು ಅನುದಾನ ಅಗತ್ಯವಿದೆ ಎಂಬುದರ ಡಿಪಿಆರ್ ತಯಾರಿಸಿ, 2-3 ದಿನದೊಳಗೆ ಸಲ್ಲಿಸಿ ಎಂದು ಪಿಆರ್ ಇಡಿ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ :ಹೆದ್ದಾರಿಯನ್ನು ಷಟ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವರಿಗೆ ಮನವಿ
ಗುಡಿಬಂಡೆ ಪಟ್ಟಣದಲ್ಲಿನ 4 ಕಲ್ಯಾಣಿಗಳನ್ನು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಧಿಕಾರಿಗಳಾದ ವಿಜಯಲಕ್ಷ್ಮೀ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜಿಲ್ಲಾ ಅಧಿಕಾರಿ ನಂಜುಂಡಸ್ವಾಮಿ, ನಗರಸಭೆ ಪೌರಾಯುಕ್ತರಾದ ಲೋಹಿತ್ ಕುಮಾರ್, ಸಣ್ಣ ನೀರಾವರಿ ಇಲಾಖೆ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.