ರಾಜ್ಯದಲ್ಲೇ ಮಾದರಿ ನಗರಸಭೆಗೆ ಸಂಕಲ್ಪ: ಲತಾ
ಮಾದರಿಯಾಗಿ ಚಿಕ್ಕಬಳ್ಳಾಪುರ ನಗರಸಭೆ ಪರಿವರ್ತಿಸಲು ಅನೇಕ ಯೋಜನೆ ಜಾರಿ: ಜಿಲ್ಲಾಧಿಕಾರಿ
Team Udayavani, Nov 4, 2020, 4:08 PM IST
ಪುಟ್ಟತಿಮ್ಮನಹಳ್ಳಿ ಗ್ರಾಮದ ಸಮೀಪದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಾವಯವ ಗೊಬ್ಬರ ಬಳಸಿ ಬೆಳೆದಿರುವ ತರಕಾರಿಯನ್ನು ಜಿಲ್ಲಾಧಿಕಾರಿ ಆರ್.ಲತಾ, ನಗರಸಭಾಧ್ಯಕ್ಷ ಆನಂದ ರೆಡ್ಡಿ, ಪೌರಾಯುಕ್ತ ಡಿ. ಲೋಹಿತ್ ವೀಕ್ಷಿಸಿದರು.
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಚಿಕ್ಕಬಳ್ಳಾಪುರ ನಗರಸಭೆಯನ್ನು ಮಾದರಿಯಾಗಿ ಪರಿವರ್ತಿಸಲು ಅನೇಕ ಯೋಜನೆಗಳನ್ನು ರೂಪಿಸಲಾಗಿದ್ದು, ಹಂತ ಹಂತವಾಗಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ತಾಲೂಕಿನ ಪುಟ್ಟತಿಮ್ಮನಹಳ್ಳಿ ಸಮೀಪದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ವಾರ್ಡ್‌ಗಳಲ್ಲಿ ಪ್ರತಿನಿತ್ಯ ಸ್ವತ್ಛತಾ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿದ್ದೇವೆ. ಮನೆ ಮನೆಯಿಂದ ಕಸ ಸಂಗ್ರಹಣೆ ಮಾಡಿ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಕಸದಿಂದ ರಸ ಮಾಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದೇವೆ ಎಂದರು.
ಮಾಸ್ಟರ್ ಪ್ಲಾನ್: ಕಸವನ್ನು ಆಧುನಿಕ ಯಂತ್ರಗಳ ಮೂಲಕ ವಿಂಗಡಿಸಿ ಎರೆಹುಳ ಗೊಬ್ಬರ ತಯಾರಿಸಿ ಅದರ ಮೂಲಕ ನಗರಸಭೆಗೆ ಸೇರಿದ ಜಾಗದಲ್ಲಿ ಮಿಶ್ರ ಬೆಳೆಗಳನ್ನು ಬೆಳೆದು ಯಶಸ್ವಿ ಕಂಡಿದ್ದೇವೆ. ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿ ಪರಿವರ್ತಿಸಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದು, ಕಾರ್ಯಗತಗೊಳಿಸಲು ಆದ್ಯತೆ ನೀಡಿದ್ದೇವೆ ಎಂದರು.
ಹಸಿರುಮಯ: ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಜಿಲ್ಲೆಯವರು ಆದ ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ್ ಅವರ ಸಹಕಾರ ಪಡೆದು ಜಿಲ್ಲೆಯಲ್ಲಿರುವ ಸರ್ಕಾರಿ ಜಾಗಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಜಿಲ್ಲೆಯನ್ನು ಹಸಿರುಮಯ ಮಾಡಲು ಮತ್ತು ಜಲ ಸಂರಕ್ಷಣೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸ್ಪಷ್ಟಪಡಿಸಿದರು.
ಆದಾಯ ಹೆಚ್ಚಿಸಲು ಕ್ರಮ: ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್‌ರೆಡ್ಡಿ ಮಾತನಾಡಿ, ನಗರದಲ್ಲಿ ಕಸವಿಲೇವಾರಿ ಸಮಸ್ಯೆ ಉಲ್ಬಣಗೊಳ್ಳದಂತೆ ಎಚ್ಚರ ವಹಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಕಸವನ್ನು ರಸ ಮಾಡಿ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.26 ಮಾತ್ರ ಬಾಕಿ: ನಗರಸಭೆಯ ಪೌರಾಯುಕ್ತಮಾತನಾಡಿ, 2023 ಜೂನ್ ಅಥವಾ ಜುಲೈ ತಿಂಗಳ ಅಂತ್ಯದೊಳಗೆ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಾದರಿ ಉದ್ಯಾನವನ ನಿರ್ಮಿಸಲು ಕ್ರಮ ಕೈಗೊಂಡಿದ್ದೇವೆ. ನಗರದಲ್ಲಿ ಸುಮಾರು 300 ಬ್ಲಾಕ್ ಸ್ಪಾಟ್‌ಗಳ ಪೈಕಿ ಕೇವಲ 26 ಮಾತ್ರ ಬಾಕಿ ಉಳಿದುಕೊಂಡಿದ್ದು, ತೆರವು ಮಾಡಿ ಕಸದಿಂದ ರಸ ಮಾಡಿ ನಗರಸಭೆಗೆ ಆದಾಯ ಹೆಚ್ಚಸಲು ಆದ್ಯತೆ ನೀಡಿದ್ದೇವೆ ಎಂದರು.
ಚಿಕ್ಕಬಳ್ಳಾಪುರ ನಗರಸಭಾ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕ ವಾಗಿ ವಿಲೇವಾರಿಮಾಡಿ ಘನ ತ್ಯಾಜ್ಯ ಘಟಕ ಉದ್ಯಾನವನಮಾಡಲು ಕ್ರಮ ಕೈಗೊಂಡಿದ್ದು, ನಾಗರಿಕರಿಗೆ ಪ್ರಶಾಂತ ವಾತಾವರಣದಲ್ಲಿ ವಾಯು ವಿಹಾರಕ್ಕೆ ಅನುಕೂಲವಾಗುವಂತಹ ನಿಟ್ಟಿನಲ್ಲಿ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗಿದೆ. – ಆರ್.ಲತಾ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.