![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 22, 2022, 6:25 PM IST
ಚಿಕ್ಕಬಳ್ಳಾಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಭೇಟಿ ನೀಡಿ, ಮಕ್ಕಳೊಂದಿಗೆ ಊಟ ಸೇವಿಸಿ, ಅಲ್ಲಿನ ಸ್ವತ್ಛತೆ, ಸೌಲಭ್ಯಗಳನ್ನು ಖುದ್ದು ಪರಿಶೀಲಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನವಿಡೀ ಸಭೆಗಳನ್ನು ನಡೆಸಿ ಜಿಲ್ಲೆಯ ಬಗ್ಗೆ ಒಂದಷ್ಟು ಮಾಹಿತಿ ಕಲೆ ಹಾಕಿದರು. ವಿದ್ಯಾರ್ಥಿನಿಲಯಗಳ ಕಾರ್ಯ ವೈಖರಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಪರಿಶೀಲನೆಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಸಂಜೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯಾರ್ಥಿಗಳ ವಾಸದ ಕೊಠಡಿಗಳು, ಊಟದ ಕೋಣೆ, ಆಹಾರ ತಯಾರಿಕ ಕೋಣೆ, ಆಹಾರ ದಾಸ್ತಾನು ಕೋಣೆ, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ಕಾರ್ಯವೈಖರಿ ಮತ್ತು ವಿದ್ಯಾರ್ಥಿ ನಿಲಯದ ಆವರಣದ ಸ್ವಚ್ಛತೆ ಪರಿಶೀಲಿಸಿದರು.
ಕೌಶಲ್ಯಗಳ ಬಗ್ಗೆ ಅರಿವು: ನಂತರ ನಿಲಯದಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಅನುಕೂಲವಾಗಲು ಹಲವು ವಿಷಯಗಳ ಕುರಿತು ಸಲಹೆ ನೀಡುವುದರ ಜೊತೆಗೆ ಯಶಸ್ವಿ ವಿದ್ಯಾರ್ಥಿಗಳಾಗಿ ಹೊರಹೊಮ್ಮಲು ಅಗತ್ಯವಾಗಿ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸಿದರು.
ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿ: ಪ್ರತಿನಿತ್ಯ ನಿಲಯದಲ್ಲಿ ಒದಗಿಸಲಾಗುತ್ತಿರುವ ಸೌಲಭ್ಯಗಳಾದ ಗ್ರಂಥಾಲಯ, ದಿನಪತ್ರಿಕೆ, ನಿಯತಕಾಲಿಕ, ಪರಾಮರ್ಶನ ಗ್ರಂಥಗಳು, ವ್ಯಕ್ತಿತ್ವ ವಿಕಸನದ ಪುಸ್ತಕಗಳನ್ನು ದಿನದಲ್ಲಿ ಕನಿಷ್ಠ ಒಂದು ತಾಸು ಆದರೂ ಓದಿ ಅವುಗಳನ್ನು ಅಧ್ಯಯನ ಮಾಡಲು ತಿಳಿಸಿದರು. ಅದೇ ರೀತಿ ಅಧಿಕಾರಿಗಳು, ಸಿಬ್ಬಂದಿ ಸಹ ನಿಲಯದಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ಹಿಸಲು ಸೂಚಿಸಿದರು.
ದೇಶದ ಆಸ್ತಿಗಳಾಗಿ: ಸರ್ಕಾರವು ಹಿಂದುಳಿದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ನೀಡಲಾಗುತ್ತಿರುವ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಪ್ರೋತ್ಸಾಹ ಧನ, ವಿದ್ಯಾರ್ಥಿವೇತನ ಮುಂತಾದ ಸೌಲಭ್ಯ ಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು, ಜವಾಬ್ದಾರಿಯುತ ಪ್ರಜೆಗಳಾಗಿ, ದೇಶದ ಆಸ್ತಿಗಳಾಗಿ ಹೊರಹೊಮ್ಮುವಂತಾಗಬೇಕು ಎಂದು ಕಿವಿಮಾತು ಹೇಳಿದರು.
ಸದೃಢ ಸಮಾಜದ ನಿರ್ಮಾಣ: ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕಗಳನ್ನು ಗಳಿಸುವುದಲ್ಲದೆ, ಸಮಾಜದ ವಿವಿಧ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಜ್ಞಾನ ಸಂಪಾದಿಸುವುದು ಅತಿ ಮುಖ್ಯ. ತಮ್ಮ ವಿದ್ಯಾ ಭ್ಯಾಸದ ನಂತರ ಔದ್ಯೋಗಿಕ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಲು ಮತ್ತು ಉತ್ತಮ
ಉದ್ಯೋಗಾವಕಾಶ ಪಡೆದುಕೊಳ್ಳಲು ಪ್ರಸ್ತುತ ಕಾಲಘಟ್ಟದಲ್ಲಿ ಇದು ಅವಶ್ಯಕವಾಗಿದೆ. ಆ ಮೂಲಕ ತಂದೆ ತಾಯಿಗೆ ಕೀರ್ತಿ ತರುವುದರೊಂದಿಗೆ ಸದೃಢ ಸಮಾಜ ನಿರ್ಮಾಣಕ್ಕೆ ಕಾರಣೀ ಭೂತರಾಗಲು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.
ಸ್ವಚ್ಛತೆ ಬಗ್ಗೆ ಇಲಾಖೆಯ ಸಿಬ್ಬಂದಿ ಪ್ರಶಂಸೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉತ್ತಮ ನಿರ್ವಹಣೆ ಬಗ್ಗೆ ಮತ್ತು ನಿಲಯಗಳಲ್ಲಿ ಒದಗಿಸಲಾಗಿರುವ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸೋಲಾರ್ ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ನಿಲಯದಲ್ಲಿನ ಸ್ವತ್ಛತೆ ಬಗ್ಗೆ ಇಲಾಖೆಯ ಸಿಬ್ಬಂದಿ ಪ್ರಶಂಸಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಡಾ.ಅಶೋಕ್, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.