ಚಿಕ್ಕಬಳ್ಳಾಪುರದಲ್ಲಿ ಎಚ್‌ಐವಿ ಸಂಖ್ಯೆ ಇಳಿಕೆ


Team Udayavani, Dec 1, 2020, 7:11 PM IST

ಚಿಕ್ಕಬಳ್ಳಾಪುರದಲ್ಲಿ ಎಚ್‌ಐವಿ ಸಂಖ್ಯೆ ಇಳಿಕೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಎಚ್‌ಐವಿ ಪೀಡಿತರ ಸಂಖ್ಯೆ ಇಳಿಮುಖವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಇಂದಿರಾ ಆರ್‌ಕಬಾಡೆ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಎಚ್‌ಐವಿ ಸೋಂಕು ತಡೆಗಟ್ಟಲು 14 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ ಪ್ರಸಕ್ತ ಸಾಲಿನಲ್ಲಿ “ಜಾಗತಿಕ ಒಗ್ಗಟ್ಟು ಜವಾಬ್ದಾರಿಯ ಹಂಚಿಕೆ’ ಘೋಷಣೆಯೊಂದಿಗೆ ಡಿ.1 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಂದರು.

ಜಿಲ್ಲಾ ಆಸ್ಪತ್ರೆ ಆವರಣದಿಂದ ನಗರದ ಪ್ರಮುಖ ರಸ್ತೆ ಗಳಲ್ಲಿ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಎಚ್‌ಐವಿ ಏಡ್ಸ್‌ ನಿಯಂತ್ರಣದ ಬಗ್ಗೆ ಪ್ರಮಾಣ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಚ್‌ ಐವಿ ಏಡ್ಸ್‌ಕ್ಷಯ ಐಸಿಟಿಸಿ, ಎಆರ್‌ಟಿ, ಎಸ್‌ಟಿಡಿ, ಸ್ವಯಂ ಸೇವಾ ಸಂಘ ಸಂಸ್ಥೆ ಸೇವೆಗಳ ಮಾಹಿತಿ ಮಳಿಗೆ ಉದ್ಘಾಟನೆ ಮಾಡಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಉಚಿತ ಆಪ್ತಸಮಾಲೋಚನೆ ಮತ್ತು ಪರೀಕ್ಷಾ ಸೌಲಭ್ಯ, ಜಿಲ್ಲಾ ಆಸ್ಪತ್ರೆ, ಚಿಕ್ಕಬಳ್ಳಾಪುರ ಎಸ್‌ಟಿಐ ಆರ್‌ಟಿಐ ಸೋಂಕಿತರಿಗೆ ಉಚಿತಔಷಧಿಸೌಲಭ್ಯ,ಸೋಂಕಿತರಿಗೆ ಉಚಿತ ಎಆರ್‌ಟಿ ಚಿಕಿತ್ಸೆ ಮತ್ತು ಮನೋ ಸಾಮಾಜಿಕ ಆಪ್ತ ಸಮಾಲೋಚನೆ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ ‌ ಸಾಲಿನಲ್ಲಿ ಸಾಮಾನ್ಯ 175 ಮತ್ತು 12 ಗರ್ಭಿಣಿಯರು ಸೇರಿದಂತೆ 187 ಎಚ್‌ಐವಿ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವ ಕೆಲಸವನ್ನು ಮಾಡಿದ್ದೇವೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ 6 ತಿಂಗಳಿಗೊಮ್ಮೆ ನೆರೆ ರಾಜ್ಯಗಳಿಗೆ ಹೋಗಿ ಬರುವ ಸರಕು ಸಾಕಾಣಿಕೆ ವಾಹನ ಚಾಲಕರರ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ ಜನರಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಿದ್ದೇವೆ ಅದರ ಫಲದಿಂದಾಗಿ ಪ್ರಸಕ್ತ ಸಾಲಿನಲ್ಲಿಕೇವಲ 10 ಗ ‌ರ್ಭಿಣಿಯರು ಸಹಿತ96 ಮಂದಿ ಎಚ್‌ಐವಿ ಪೀಡಿತರಿದ್ದು ಅವರಿಗೆ ಚಿಕಿತ್ಸಾ ಕಾರ್ಯ ಮುಂದುವರಿದಿದೆ ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.