Politics: ಲೋಕ ಸಮರ; ನಾಯಕರ ನಿದ್ದೆಗೆಡಿಸಿದ ಪಕ್ಷಾಂತರ ಪರ್ವ!
Team Udayavani, Apr 12, 2024, 5:36 PM IST
ಚಿಕ್ಕಬಳ್ಳಾಪುರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಯಲ್ಲಿ ಇದೀಗ ಪಕ್ಷಾಂತರ ಪರ್ವ ರಾಜಕೀಯ ಪಕ್ಷಗಳಿಗೆ ನಿದ್ದೆಗೆಡಿಸಿದ್ದು, ಪಕ್ಷಗಳಲ್ಲಿರುವ ಮುಖಂಡರು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಸವಾಲು ಎದುರಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಹಾಗೂ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿಗೆ ಚುನಾವಣಾ ಅಖಾಡ ಸಾಕ್ಷಿಯಾಗಿದ್ದು ಇದರ ಪರಿಣಾಮ ಪಕ್ಷಾಂತರ ಕೂಡ ರಾಜಕೀಯ ಪಕ್ಷಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣೆಯ ಮತದಾನಕ್ಕೆ ಕೇವಲ 16 ದಿನ ಮಾತ್ರ ಬಾಕಿ ಇದ್ದು ಬಹಿರಂತ ಪ್ರಚಾರಕ್ಕೆ ಕೇವಲ 13 ದಿನ ಮಾತ್ರ ಇದೆ. ಏ.24ಕ್ಕೆ ಬಹಿರಂತ ಪ್ರಚಾರ ತೆರೆ ಕಾಣಲಿದೆ. ಇದರ ನಡುವೆ ಕ್ಷೇತ್ರದಲ್ಲಿ ಮತದಾರರ ಮನವೊಸಲು ಪೈಪೋಟಿಗೆ ಇಳಿದಿರುವ ಪಕ್ಷಗಳು ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಮತ ತಂದುಕೊಡಬಲ್ಲ ರಾಜಕೀಯ ಪಕ್ಷಗಳ ಮುಖಂಡರಿಗೆ, ನಾಯಕರಿಗೆ ಪಕ್ಷಗಳು ಗಾಳ ಹಾಕಿ ವಿವಿಧ ಆಸೆ, ಅಮಿಷಗಳನ್ನು ನೀಡಿ ತಮ್ಮ ಪಕ್ಷಗಳ ಕಡೆಗೆ ಸೆಳೆದುಕೊಳ್ಳುವ ಮೂಲಕ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷಗಳು ಪಕ್ಷಾಂತರಕ್ಕೆ ಒತ್ತು ಕೊಟ್ಟಿದ್ದು, ಮತಗಟ್ಟೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ತಂದುಕೊಡಬಲ್ಲ ನಾಯಕರನ್ನು ಆಪರೇಷನ್ ಮೂಲಕ ಪಕ್ಷಗಳಿಗೆ ಕರೆ ತರುವ ಕೆಲಸ ಮಾಡಲಾಗುತ್ತಿದ್ದು. ಇದಕ್ಕಾಗಿ ರಾಜಕೀಯ ಪಕ್ಷಗಳಲ್ಲಿ ಕೆಲವೊಂದು ತಂಡಗಳು ಸಕ್ರಿಯವಾಗಿ ಪಕ್ಷಾಂತರ ಮಾಡಿಸುವ ಕಾಯಕದಲ್ಲಿ ಸದ್ದಿಲ್ಲದೇ ತೊಡಗಿಸಿಕೊಂಡಿವೆ.
ಪಕ್ಷಾಂತರಗೊಂಡ ಪ್ರಮುಖ ನಾಯಕರು, ಮುಖಂಡರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಎಂ.ಶಿವಾನಂದ್ ರಕ್ಷಾ ರಾಮಯ್ಯಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಪಕ್ಷ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದರೆ, ಡಾ.ಕೆ.ಸುಧಾಕರ್, ಬಿಜೆಪಿ-ಜೆಡಿಎಸ್ ಮೈತ್ರಿ ಆಗಿರುವುದನ್ನು ವಿರೋಧಿಸಿ ಚಿಕ್ಕಬಳ್ಳಾಪುರದ ಜೆಡಿಎಸ್‌ನ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಶಿಡ್ಲಘಟ್ಟ ಕ್ಷೇತ್ರದ ಸಮಾಜ ಸೇವಕ ಪುಟ್ಟು ಆಂಜಿನಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಮುನೇಗೌಡ ಕಾಂಗ್ರೆಸ್ ಗೂಡು ಸೇರಿದ್ದಾರೆ.
ಕಳೆದ ಬಾರಿ ಗೌರಿಬಿದನೂರಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್.ಪುಟ್ಟಸ್ವಾಮಿಗೌಡ ಪರ ಬ್ಯಾಟಿಂಗ್ ಬೀಸಿದ್ದ ಜಿಪಂ ಮಾಜಿ ಅಧ್ಯಕ್ಷ ಹೆಚ್.ವಿ.ಮಂಜುನಾಥ ಸೇರಿ ಹಲವು ಮಂದಿ ಕೆಎಚ್‌ಪಿ ಬಣ ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ.
ಅಲ್ಲದೇ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ನಗರಸಭಾ ಸದಸ್ಯರು ಕೂಡ ಪಕ್ಷಾಂತರ ಪರ್ವಕ್ಕೆ ಮುಂದಾಗುವ ಮೂಲಕ ತಮ್ಮ ಪಕ್ಷಗಳಿಗೆ ಬಿಸಿ ಮುಟ್ಟಿಸಿದ್ದಾರೆ.
–ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.