ಉಚಿತ ಬಸ್‌ಪಾಸ್‌ಗೆ ಆಗ್ರಹ


Team Udayavani, Jun 19, 2019, 3:00 AM IST

uchitta

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಎಸ್‌ಸಿ, ಎಸ್‌ಟಿ ಹಾಗೂ ರಾಜ್ಯದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್‌ನ್ನು ಈ ಶೈಕ್ಷಣಿಕ ವರ್ಷದಿಂದಲೇ ವಿತರಿಸಬೇಕೆಂದು ಮಂಗಳವಾರ ಜಿಲ್ಲಾ ಕೇಂದ್ರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಮುಖ್ಯ ರಸ್ತೆಗಳಲ್ಲಿ ಬೃಹತ್‌ ಪ್ರತಿಭಟನಾ ನಡೆಸಿದ ಬಳಿಕ ಸ್ಥಳೀಯ ತಾಲೂಕು ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ಕಾಲೇಜು ವಿದ್ಯಾರ್ಥಿಗಳು, ಸರ್ಕಾರ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಸಮೀಪಿಸುತ್ತಿದ್ದರೂ ಉಚಿತ ಬಸ್‌ಪಾಸ್‌ ವಿತರಣೆಗೆ ಮುಂದಾಗದಿರುವುದನ್ನು ಖಂಡಿಸಿ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಾರಿಗೆ ಬಾರದ ಘೋಷಣೆ: ಶಿಕ್ಷಣವೆಂಬುದು ಸರ್ವರಿಗೂ ಸಿಗಬೆಕಾಗಿರುವ ಅಮೂಲ್ಯ ಸಂಪತ್ತು. ಜಾತಿ, ಮತ, ಬಡವ ಮತ್ತು ಶ್ರೀಮಂತ ಎನ್ನದೇ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ಆದರೆ 2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಣೆ ಮಾಡಿತ್ತು.

ಆದರೆ ಇಂದಿಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಬಗ್ಗೆ ನಿರ್ಲಕ್ಷ ವಹಿಸಿರುವುದು ಎದ್ದು ಕಾಣುತ್ತಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರದ ಧೋರಣೆ ಖಂಡಿಸಿದರು.

ಎಲ್ಲಾ ವರ್ಗದವರಿಗೂ ನೀಡಲಿ: ಎಬಿವಿಪಿ ವಿಭಾಗೀಯ ಸಂಚಾಲಕ ಮಂಜುನಾಥ ರೆಡ್ಡಿ ಮಾತನಾಡಿ, ರಾಜ್ಯವು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಡೊನೇಷನ್‌ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಈ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್‌ ಪಾಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕೆಂದು ಆಗ್ರಹಿಸಿದರು.

ಬೇಡಿಕೆ ಮೂಲೆಗುಂಪು: ಹಳ್ಳಿಗಳಿಂದ ತಾಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ರಾಜ್ಯ ಸರ್ಕಾರ, ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ.

ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು. ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು.

ತಾಲೂಕು ಕಚೇರಿ ಎದುರು ಧರಣಿ: ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ವಿದ್ಯಾರ್ಥಿಗಳು ತಾಲೂಕು ಕಚೇರಿ ಎದುರು ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿ ಕೆ.ನರಸಿಂಹಮೂರ್ತಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಶಾಲಾ, ಕಾಲೇಜುಗಳ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸುವ ಮೂಲಕ ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು.

ಸರ್ಕಾರ ಶಾಲಾ, ಕಾಲೇಜುಗಳ ಆರಂಭವಾಗಿ ತಿಂಗಳು ಸಮೀಪಿಸುತ್ತಿದ್ದರೂ ಬಸ್‌ಪಾಸ್‌ ವಿತರಣೆಗೆ ಮುಂದಾಗಿಲ್ಲ. ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಎಲ್ಲರಿಗೂ ಉಚಿತ ಬಸ್‌ಪಾಸ್‌ನ್ನು ಈ ವರ್ಷದಿಂದಲೇ ನೀಡಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.