ಮರಾಠ ಅಭಿವೃದ್ಧಿ ನಿಗಮ ರದ್ದತಿಗೆ ಆಗ್ರಹ
Team Udayavani, Nov 23, 2020, 6:44 PM IST
ಚಿಕ್ಕಬಳ್ಳಾಪುರ: ರಾಜ್ಯದ ನೆಲ, ಜಲ, ಭಾಷೆ, ಸಾಹಿತ್ಯ ಮತ್ತು ಕಲೆ ಉಳಿಸುವ ಬದಲಾಗಿ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರದ್ದತಿ ರಚಿಸುವ ಮೂಲಕ ಕನ್ನಡ ವಿರೋಧಿಧೋರಣೆ ಅನುಸರಿಸುತ್ತಿದೆಯೇ ಎಂಬ ಅನುಮಾನಕನ್ನಡಿಗರಿಗೆಮೂಡುವಂತಾಗಿದೆ ಎಂದು ನಗರಸಭೆ ಸದಸ್ಯ ವಕೀಲ ಮುನಿರಾಜುಕಳವಳ ವ್ಯಕ್ತಪಡಿಸಿದರು. ನಗರದ ಶ್ರೀ ಕಾಳಿಕಾಂಭ ಸಮುದಾಯಭವನದಲ್ಲಿ ಕಸ್ತೂರಿ ಕರ್ನಾಟಕ ಜನಪರವೇದಿಕೆಯ ಸಾಂಸ್ಕೃತಿಕ ಘಟಕದಿಂದಆಯೋಜಿಸಿದ್ದ 65ನೇ ಕನ್ನಡ ರಾಜ್ಯೋತ್ಸವಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ5 ಕೋಟಿ ರೂ.ಅನುದಾನ ಮೀಸಲಿಟ್ಟಿರುವ ಸರ್ಕಾರ,ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿರೂ.ಅನುದಾನ ನೀಡುವ ಮೂಲಕ ಏನುಸಾಧನೆ ಮಾಡಲು ಹೊರಟಿದೆ ಎಂದು ಪ್ರಶ್ನಿಸಿದರು.
ಹಿಂಪಡೆಯಲು ಆಗ್ರಹ: ಚಿಕ್ಕಬಳ್ಳಾಪುರಜಿಲ್ಲೆ ಗಡಿ ಪ್ರದೇಶವಾಗಿದ್ದು, ಇಲ್ಲಿ ತೆಲುಗು ಭಾಷೆ ವ್ಯಾಮೋಹ ಹೆಚ್ಚಿದ್ದರೂ ಸಹ ಕನ್ನಡದ ವಿಷಯದಲ್ಲಿ ಎಲ್ಲರೂ ಒಂದಾಗಿ ಭಾಷಾ ಸಾಮರಸ್ಯ ಕಾಪಾಡಿಕೊಂಡಿದ್ದಾರೆ. ಜೊತೆಗೆಸೌಹಾರ್ದತೆವಾತಾವರಣನಿರ್ಮಿಸಲಾಗಿದೆ. ಸರ್ಕಾರ ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ವಿಶೇಷ ಒತ್ತು ನೀಡಿ ಮರಾಠ ನಿಗಮಆದೇಶಹಿಂಪಡೆದುಕನ್ನಡಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚು ಅನುದಾನ ನೀಡಬೇಕೆಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿಗೌರವಿಸಲಾಯಿತು. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರ್, ತಾಲೂಕು ಅಧ್ಯಕ್ಷ ರಾಮಾಂಜನೇಯ, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸಿ.ಎನ್.ಮುನಿರಾಜು, ನಗರಸಭಾ ಸದಸ್ಯ ಅನಿಲ್‌ಕುಮಾರ್, ಮನೋಹರ್, ಎನ್‌ಎಸ್‌ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ತಾಲೂಕು ಸಂಚಾಲಕ ಆಫ್ರಿದ್, ಸಿಂಗ್, ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾರಾಯಣಸ್ವಾಮಿ (ಪಟೇಲ್) ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.