ಜನಸಂಖ್ಯಾ ನಿಯಂತ್ರಣಕ್ಕೆ ಪ್ರತಿಯೊಬ್ಬರ ಜವಾಬ್ದಾರಿ ಅವಶ್ಯ
Team Udayavani, Aug 1, 2017, 4:31 PM IST
ಶಿಡ್ಲಘಟ್ಟ: ಜನಸಂಖ್ಯೆ ಸ್ಫೋಟ ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ನಾಗರಿಕರು ಸ್ವಯಂ ಪ್ರೇರಿತರಾಗಿ ಜನಸಂಖ್ಯೆ ನಿಯಂತ್ರಣದ ಜವಾಬ್ದಾರಿ ವಹಿಸಬೇಕು ಎಂದು ಶಾಸಕ ಎಂ.ರಾಜಣ್ಣ ಸಲಹೆ ನೀಡಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬಡತನ, ಅಜ್ಞಾನ, ಅನಕ್ಷರತೆ, ಮೂಢನಂಬಿಕೆ ಹಾಗೂ ಬಾಲ್ಯವಿವಾಹ ಇತ್ಯಾದಿ ಕಾರಣಗಳಿಂದ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಜನಸಂಖ್ಯೆ ಹೆಚ್ಚಾದಂತೆಲ್ಲಾ ದೇಶದಲ್ಲಿ ಅನೇಕ ಸಮಸ್ಯೆಗಳು ಉದ್ವವಿಸುತ್ತಿವೆ ಮೂಲಭೂತ ಸೌಕರ್ಯಗಳಾದ ಮನೆ, ನೀರು , ನಿರುದ್ಯೋಗ ಸಮಸ್ಯೆ, ಮುಂತಾದ ಸಮಸ್ಯೆಗಳಿಗೆಲ್ಲ ಶಿಕ್ಷನವೊಂದೇ ಪರಿಹಾರ ಎಂದರು.
ತಹಶೀಲ್ದಾರ್ ಅಜೀತ್‌ಕುಮಾರ್ ರೈ ಮಾತನಾಡಿ, ಜನಸಂಖ್ಯೆ ಹೆಚ್ಚಾದಂತೆಲ್ಲಾ ನಿರುದ್ಯೋಗ ಸಮಸ್ಯೆ ಸಹ ಹೆಚ್ಚಾಗುತ್ತಿದ್ದು, ಎಲ್ಲರಿಗೂ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿಲ್ಲ, ಯುವಕರು ಸರ್ಕಾರ ಕೊಡುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗ ಪ್ರಾರಂಭಿಸಿ, ಬೇರೆಯವರಿಗೂ ಉದ್ಯೋಗ ನೀಡಿ ಎಂದು ತಿಳಿಸಿದರು.
ಇದೇ ವೇಳೆಯಲ್ಲಿ ಜನಸಂಖ್ಯೆ ನಿಯಂತ್ರಣ ಮಾಡಲು ಜನರಲ್ಲಿ ಜಾಗೃತಿ ಮೂಡಿಸಲು ಶಾಲಾ ವಿದ್ಯಾರ್ಥಿಗಳೊಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜನ ಜಾಗೃತಿ ಜಾಥ ನಡೆಸಿದರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮೂಡಿಸಿದರು.
ನಗರಸಭಾ ಉಪಾಧ್ಯಕ್ಷೆ ಪ್ರಭಾವತಿ, ಪೌರಾಯುಕ್ತ ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಿಡಿಪಿಒ ಲಕ್ಷ್ಮೀದೇವಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್, ಸಹಾಯಕ ಆರೋಗ್ಯಾಧಿಕಾರಿ ದಾದಾಪೀರ್,ಬಿಪಿಎಂ ನಂದಿನಿ,ಹಿರಿಯ ಆರೋಗ್ಯ ಸಹಾಯಕಿ ಮುನಿರತ್ನಮ್ಮ,ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.