ಜ್ಞಾನ, ತಾಂತ್ರಿಕತೆಯ ಮೇಲೆ ದೇಶದ ಭವಿಷ್ಯ ನಿರ್ಧಾರ


Team Udayavani, Oct 29, 2019, 3:00 AM IST

jnana-tatn

ಚಿಕ್ಕಬಳ್ಳಾಪುರ: ದೇಶದ ಆರ್ಥಿಕ ಪ್ರಗತಿ ಜೊತೆಗೆ ಇಂದು ಸಮಾಜದ ಸಮಗ್ರ ಬೆಳವಣಿಗೆಗೆ ತಾಂತ್ರಿಕತೆಯ ಅಭಿವೃದ್ಧಿ ಮೇಲೆ ನಿಂತಿದ್ದು, ಜ್ಞಾನ ಹಾಗೂ ತಾಂತ್ರಿಕತೆ ಒದಗಿಸುವ ಶಿಕ್ಷಣ ಸಂಸ್ಥೆಗಳು ನಿಜವಾಗಿ ದೇಶಕ್ಕೆ ನಾಯಕತ್ವ ರೂಪಿಸುವ ಹೆಚ್ಚು ಹೊಣೆಗಾರಿಕೆ ಹೊಂದಿವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ತಿಳಿಸಿದರು.

ನಗರದ ಹೊರ ವಲಯದ ಮುದ್ದೇನಹಳ್ಳಿಯಲ್ಲಿರುವ ವಿಟಿಯು ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ವಿಟಿಯು ಸ್ನಾತಕೋತ್ತರ ಕೇಂದ್ರದ ಮೂಲ ಸೌಕರ್ಯ ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಪ್ರಾಮಾಣಿಕ ಪ್ರಯತ್ನ ಅಗತ್ಯ: ತಂತ್ರಜ್ಞಾನ ಹಾಗೂ ಜ್ಞಾನ ದೇಶದ ಭವಿಷ್ಯವನ್ನು ನಿರ್ಧರಿಸಲಿವೆ. ತಾಂತ್ರಿಕ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಎಷ್ಟೇ ಒತ್ತು ಕೊಟ್ಟರೂ ಸಾಲದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಅಮೂಲ್ಯ. ಶಿಕ್ಷಕರು ಕೂಡ ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.

ವಿದ್ಯಾರ್ಥಿಗಳಿಗೆ ಸಾಮಾಜಿಕ ಹೊಣೆಗಾರಿಕೆ ಬಹಳ ಮುಖ್ಯ. ತಾವು ಕಲಿತ ಜ್ಞಾನವನ್ನು ಸಮಾಜದ ಸಮಸ್ಯೆ, ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಸಮಾಜಕ್ಕೆ ಧಾರೆ ಎರೆಯಬೇಕು. ಇತ್ತೀಚೆಗೆ ಕಾಲ ಕಳೆದು ಪದವಿ ಪಡೆಯುವರ ಸಂಖ್ಯೆ ಹೆಚ್ಚಾಗಿದೆ. ಅದು ನಿಜವಾದ ವಿದ್ಯಾರ್ಥಿ ಲಕ್ಷ್ಮಣವಲ್ಲ. ಕ್ಯಾಂಪಸ್‌ನಲ್ಲಿ ಇದ್ದು ಕಲಿತರೆ ಅದು ಬದುಕಿಗೆ ನೆರವಾಗುತ್ತದೆ ಎಂದರು.

ಅದ್ಭುತ ಕಟ್ಟಡ: ಮುದ್ದೇನಹಳ್ಳಿಯಲ್ಲಿರುವ ವಿಟಿಯು ಸಂಸ್ಥೆ ದೊಡ್ಡ ಮಟ್ಟಕ್ಕೆ ಬೆಳೆಯಬೇಕಿದೆ. ಇಲ್ಲಿನ ವಿಟಿಯು ಸ್ನಾತಕೋತ್ತರ ಕೇಂದ್ರದ ಕಟ್ಟಡಗಳು ಅದ್ಭುತವಾಗಿ ಮೂಡಿ ಬಂದಿವೆ. ಆದರೆ ಇದಕ್ಕೆ ಬೆಂಬಲವಾಗಿ ಬೇಕಾದ ಮೂಲ ಸೌಕರ್ಯಗಳ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಇಲ್ಲಿ ಭವ್ಯವಾದ ಕಟ್ಟಡ ಕಟ್ಟಲು ಸರ್‌ ಎಂ.ವಿಶೇಶ್ವರಯ್ಯನವರು ತವರು ಮುದ್ದೇನಹಳ್ಳಿ ಇದೆ. ಆದ್ದರಿಂದ ಇಲ್ಲಿ ವಿಟಿಯು ಸ್ನಾತಕೋತ್ತರ ಕೇಂದ್ರವನ್ನು ತೆರೆಯಲಾಗಿದೆ. ಸರ್‌ಎಂವಿಗೆ ಗೌರವ ಸಲ್ಲುವ ರೀತಿಯಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಈ ಸಂಸ್ಥೆ ರಾಷ್ಟ್ರಕ್ಕೆ ಮಾದರಿ ಆಗುವ ರೀತಿಯಲ್ಲಿ ಬೆಳೆಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ, ರಿಜಿಸ್ಟ್ರಾರ್‌ ಡಾ.ಎ.ಎಸ್‌.ದೇಶಪಾಂಡೆ, ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್‌, ಡಿಸಿಎಂ ಆಪ್ತ ಕಾರ್ಯದರ್ಶಿ ಪ್ರದೀಪ್‌, ತಾಪಂ ಇಒ ಹರ್ಷವಧನ್‌ ಸೇರಿದಂತೆ ಮುದ್ದೇನಹಳ್ಳಿ ವಿಟಿಯುನ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸಚಿವರು, ವಿಟಿಯು ಕೈಗೊಂಡಿರುವ ಶೈಕ್ಷಣಿಕ ಕಾರ್ಯಕ್ರಮಗಳು, ಪರೀಕ್ಷಾ ವಿಧಾನ, ವಿಟಿಯುನಲ್ಲಿ ಲಭ್ಯವಿರುವ ಸಂಶೋಧನಾ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಂವಾದದಲ್ಲಿ ವಿಟಿಯು ಸಮಸ್ಯೆಗಳ ಅನಾವರಣ: ಉನ್ನತ ಶಿಕ್ಷಣ ಸಚಿವ ಇಲಾಖೆ ಕಾರ್ಯಭಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ವಿಟಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ, ಮೂಲ ಸೌಕರ್ಯಗಳಿಂದ ಬಳಲುತ್ತಿರುವ ವಿಟಿಯು ಅವ್ಯವಸ್ಥೆಗಳ ಆಗರ ಅನಾವರಣಗೊಂಡಿತು.

ಸ್ನಾತಕೋತ್ತರ ಕೇಂದ್ರ ಆರಂಭಗೊಂಡು 6 ವರ್ಷ ಕಳೆದಿದೆ. ಇದುವರೆಗೂ ಸುಮಾರು ಜನ ಬಂದು ನಮಗೆ ಭರವಸೆ ಕೊಟ್ಟು ಹೋಗುತ್ತಿದ್ದಾರೆ. ನೀವು ಬಂದು ಹೋದರೂ ನಮಗೆ ರಸ್ತೆ ಸರಿ ಹೋಗುತ್ತದೆ ಎನ್ನುವುದು ಏನು ಖಾತ್ರಿ ಎಂದು ವಿದ್ಯಾರ್ಥಿಯೊಬ್ಬ ಡಿಸಿಎಂರನ್ನು ಪ್ರಶ್ನಿಸಿದರು.

ಕಾಲೇಜು ಕಟ್ಟಡ ಚೆನ್ನಾಗಿದೆ. ಆದರೆ ಸರಿಯಾದ ರಸ್ತೆ ಇಲ್ಲ. ಬಸ್‌ ನಿಲ್ದಾಣ ಬಿಡಿ ಕನಿಷ್ಠ ಮಳೆ, ಗಾಳಿ ಬಿಸಿಲಿನಿಂದ ಆಶ್ರಯ ಪಡೆಯಲು ತಂಗುದಾಣ ಇಲ್ಲ. ಬೇಸಿಗೆ ಬಂದರೆ ಕಾಲೇಜಿನಲ್ಲಿ ಹನಿ ನೀರು ಸಿಗಲ್ಲ. ವಿದ್ಯುತ್‌ ಸಮಸ್ಯೆ ಹೇಳ ತೀರದಾಗಿದೆ. ಸರಿಯಾದ ಕ್ಯಾಂಟೀನ್‌ ವ್ಯವಸ್ಥೆ ಇಲ್ಲ. ಆರೋಗ್ಯದಲ್ಲಿ ಏರುಪೇರು ಆದರೆ ವೈದ್ಯಕೀಯ ಚಿಕಿತ್ಸೆ ಸಿಗಲ್ಲ.

ಎಲ್ಲಾ ಮಕ್ಕಳಿಗೆ ಹಾಸ್ಟೆಲ್‌ ಸೌಕರ್ಯ ಇಲ್ಲ. ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದೆ. ಮೊದಲು ದುರಸ್ತಿ ಮಾಡದಿರೆ ಸಾಕು ಎಂದರು. ಸುಮಾರು ವಿದ್ಯಾರ್ಥಿಗಳು, ಉಪನ್ಯಾಸಕರು, ಭದ್ರತಾ ಸಿಬ್ಬಂದಿ ಬಿದ್ದು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಸಂಕಷ್ಟವನ್ನು ಉನ್ನತ ಶಿಕ್ಷಣ ಸಚಿವರ ಮುಂದೆ ತೆರೆದಿಟ್ಟರು.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡುವಂತೆ ನಮಗೂ ಉಚಿತವಾಗಿ ಲ್ಯಾಟ್‌ಟಾಪ್‌ ನೀಡಬೇಕು ಹಾಗೂ ವಿಟಿಯು ವಿಧಿಸುವ ಶುಲ್ಕ ಸಂಪೂರ್ಣ ಉಚಿತ ಮಾಡಿದರೆ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಾರೆ. ಶುಲ್ಕ ಕಡಿತಗೊಳಿಸಬೇಕೆಂದು ವಿದ್ಯಾರ್ಥಿಗಳು ಕೋರಿದರು. ಎಲ್ಲಾ ಸಮಸ್ಯೆಗಳ ಬಗ್ಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವುದಾಗಿ ಸಚಿವರು ಭರವಸೆ ನೀಡಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.