ನರೇಗಾದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ
Team Udayavani, Jan 8, 2020, 1:15 PM IST
ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ಸ್ವರೂಪವೇ ಬದಲಾಗಿದ್ದು, ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ತಾಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿಯ ಚೀಮನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ 13 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಗೋಕುಂಟೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ನೈರ್ಮಲ್ಯ ಕಾಪಾಡಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜಾರಿಗೊಳಿಸಿದ ನರೇಗಾ ಯೋಜನೆಯಿಂದ ಕ್ರಾಂತಿಕಾರಿ ಬದಲಾವಣೆಯಾಗಿದ್ದು, ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದರು. ನರೇಗಾ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲು ಶಾಸಕರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಲಾಗಿದ್ದು, ಯಾವ ಯಾವ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಅದು ಗುಣಮಟ್ಟವಾಗಿದೆಯೇ? ಎಂಬುದನ್ನು ಪರಿಶೀಲಿಸುವ ಹಕ್ಕು ಶಾಸಕರಿಗೆ ನೀಡಲಾಗಿದೆ ಎಂದರು. ಅಬ್ಲೂಡು ಗ್ರಾಪಂನ ಚೀಮನಹಳ್ಳಿ ಗ್ರಾಮದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಬಡವರಿಗೆ ಉಚಿತ ನಿವೇಶನಗಳ ಮಂಜೂರಾತಿ ಸಹಿತ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಮ್ಮ ಅಧಿಕಾರಾವಧಿಯಲ್ಲಿ ನಡೆಸಲಾಗಿದೆ ಎಂದರು.
ನರೇಗಾ ಕಾಮಗಾರಿ, ಶಾಸಕರ ಶ್ಲಾಘನೆ: ನರೇಗಾ ಯೋಜನೆಯನ್ನು ಸದುಪಯೋಗ ಮಾಡಿಕೊಂಡು ಅನೇಕ ಗ್ರಾಪಂ ವ್ಯಾಪ್ತಿಯಲ್ಲಿ ಜಲ-ಪರಿಸರ ಸಂರಕ್ಷಣೆ ಸಹಿತ ಅನೇಕಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂರ್ತಜಲ ಮಟ್ಟ ಸಂರಕ್ಷಣೆಗೆ ಗೋಕುಂಟೆಯನ್ನು ಮಾದರಿಯಾಗಿ ನಿರ್ಮಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶಾಸಕರು, ತಾಪಂ ಇಒ, ಪಿಡಿಒ, ಮತ್ತು ಸಿಬ್ಬಂದಿಗೆ ಅಭಿನಂದಿಸಿದರು.
ತಾಪಂ ಇಒ ಶಿವಕುಮಾರ್, ಅಬ್ಲೂಡು ಗ್ರಾಪಂ ಸದಸ್ಯ ಜೆ.ಸಿ.ಬಿ.ಮಂಜುನಾಥ್, ಪಿಡಿಒ ಅಂಜನ್‌ಕುಮಾರ್, ಕಾರ್ಯದರ್ಶಿ ಮದ್ದರೆಡ್ಡಿ, ಗ್ರಾಪಂ ಸದಸ್ಯೆ ಜ್ಯೋತಿ ಗಂಗಾಧರ್, ಶಾಸಕರ ಆಪ್ತ ಕಾರ್ಯದರ್ಶಿ ಗುಡಿಹಳ್ಳಿ ಚಂದ್ರು, ಮುನಿರಾಜು, ಹೆಚ್.ಬಸವರಾಜು, ಬಸವರಾಜು, ರಾಮಣ್ಣ, ಆರ್‌ಟಿಐ ಕಾರ್ಯಕರ್ತ ಮುನಿರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.