ಸಿಪಿಐಎಂನಿಂದ ಮಾತ್ರ ಬಾಗೇಪಲ್ಲಿ ಅಭಿವೃದ್ಧಿ


Team Udayavani, Jan 8, 2023, 4:40 PM IST

tdy-16

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿಯಾಗಿದೆ ಎಂದರೆ ಅದು ಸಿಪಿಐಎಂನ ಅವಧಿಯಲ್ಲಿ ಮಾತ್ರ ಎಂದು ಸಿಪಿಐಎಂನ ಮುಖಂಡ ಡಾ.ಅನಿಲ್‌ ತಿಳಿಸಿದರು.

ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆವಿಗೂ ಬಾಗೇಪಲ್ಲಿ ಕ್ಷೇತ್ರದಲ್ಲಿ ಮೂರು ಭಾರಿ ನಮ್ಮ ಪಕ್ಷದ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಗೊಂಡಾಗ ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳೇ ಇಂದಿಗೂ ಶಾಶ್ವತವಾಗಿ ಉಳಿದಿದೆಯೇ ಹೊರತು ಬೇರೆ ಶಾಸಕರು ಅಭಿವೃದ್ಧಿ ಮಾಡಿರುವುದು ಏನೂ ಇಲ್ಲ, ನಾವು ಅಧಿಕಾರಕ್ಕೆ ಬಂದಾಗಿನಿಂದಲೂ ಆ ಕೆಲಸ ಮಾಡಿದ್ದೇವೆ, ಈ ಕೆಲಸ ಮಾಡಿದ್ದೇವೆ ಎಂದು ಬೊಬ್ಬೆ ಹೊಡೆಯುವುದೇ ಅಗಿದೆಯೇ ಹೊರತು ಅವರು ಮಾಡಿರುವ ಕೆಲಸಗಳು ಯಾರಿಗೂ ಪ್ರತ್ಯಕ್ಷವಾಗಿ ಗೋಚರಿಸುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದರು.

ನಮ್ಮ ಪಕ್ಷದ ಮಾಜಿ ಶಾಸಕ ದಿವಂಗತ ಜಿ.ವಿ.ಶ್ರೀರಾಮರೆಡ್ಡಿಯವರು ಶಾಸಕರಾಗಿ ಆಯ್ಕೆಯಾದ ಎರಡು ಭಾರಿಯೂ ರಾಜ್ಯ ಸರ್ಕಾರದ ಆಡಳಿತ ಮುಖ್ಯಮಂತಿ ಹಾಗೂ ಮಂತ್ರಿಗಳಿಗೆ ಸದನದಲ್ಲಿ ಚಳಿ ಬಿಡಿಸಿ, ಅನುದಾನವನ್ನು ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ, ಈಗಿನ ಹಾಲಿನ ಶಾಸಕರು ಸತತವಾಗಿ ಎರಡು ಭಾರಿ ಚುನಾಯಿತರಾದ ಕೇವಲ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಕೆಲಸ ಮಾಡುತ್ತಿದ್ದಾರೆಯೇ ಹೊರತು, ವಿಶೇಷ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಹಾಲಿ ಶಾಸಕರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಪುನಃ ಮಾತೃ ಪಕ್ಷಕ್ಕೆ: ದಿವಂಗತ ಜಿ.ವಿ.ಶ್ರೀರಾಮರೆಡ್ಡಿ ಕೆಲವು ಕಾರಣಾಂತರಗಳಿಂದ ಸಿಪಿಐಎಂ ಪಕ್ಷವನ್ನು ತೊರೆದು ಪಿಎಸ್‌ಎಸ್‌ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು. ಪುನಃ ನಮ್ಮ ಪಕ್ಷದ ಹಿರಿಯ ಮುಖಂಡರು ಅವರೊಂದಿಗೆ ಚರ್ಚಿಸಿ, ಮಾತುಕತೆ ನಡೆಸಿದ್ದು, ಇನ್ನೇನು ಅವರನ್ನು ಮರಳಿ ಮಾತೃ ಪಕ್ಷಕ್ಕೆ ಕರೆತರುವ ಸಿದ್ಧತೆಗಳನ್ನು ನಡೆಸುತ್ತಿದ್ದ ಸಮಯದಲ್ಲಿ ಅವರು ದೆ„ವಾದೀನರಾಗಿದ್ದು, ಅವರೊಂದಿಗೆ ಪಕ್ಷವನ್ನು ತೊರೆದಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸುತ್ತಿದ್ದು, ಅವರನ್ನು ಪುನಃ ಮಾತೃ ಪಕ್ಷಕ್ಕೆ ಕರೆತರುವ ವಿಶ್ವಾಸವಿದೆ ಎಂದು ಹೇಳಿದರು.

ಪಕ್ಷೇತರಿಗೆ ಬೆಂಬಲಿಸಿದರೆ ತೊಂದರೆ ಇಲ್ಲ : ದಿ. ಜಿ.ವಿ.ಶ್ರೀರಾಮರೆಡ್ಡಿ ರವರು ಸ್ಥಾಪಿಸಿದ ಪಿ.ಎಸ್‌.ಎಸ್‌. ಸಂಘಟನೆಯ ಕೆಲವು ಮುಖಂಡರು ಪಕ್ಷೇತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವವರಿಗೆ ಬೆಂಬಲಿಸುತ್ತಿರುವುದು ತಿಳಿದು ಬಂದಿದ್ದು, ಅವರಿಂದ ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಯಾವುದೇ ಒಡೆತ ಆಗುವುದಿಲ್ಲ, ಹಾಗೂ ನಮ್ಮ ಪಕ್ಷದ ಮೂಲ ಕಾರ್ಯಕರ್ತರರನ್ನು ಬೇರೆಡೆಗೆ ಸೆಳೆಯಲು ಸಹ ಸಾಧ್ಯವಾಗುವುದಿಲ್ಲ ಎಂದು ಸಿಪಿಐಎಂನ ಮುಖಂಡ ಡಾ.ಅನಿಲ್‌ ಹೇಳಿದರು.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.