ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹೆಲ್ಮೆಟ್ ವಿತರಣೆ
Team Udayavani, Jan 24, 2020, 12:26 PM IST
ಚಿಂತಾಮಣಿ: 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳಿಂದ ದ್ವಿಚಕ್ರ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಿ ಜೀವ ಉಳಿಸಿಕೊಳ್ಳಿ ಎಂದು ಸಾರಿಗೆ ಅಧಿಕಾರಿ ನಾಗಿರೆಡ್ಡಿ ಸಲಹೆ ನೀಡಿದರು. 31ನೇ ರಾಷ್ಟ್ರೀಯ ರಸ್ತೆ ಸಪ್ತಾಹದ ಅಂಗವಾಗಿ ನಗರದ ಕಿಶೋರ್ ವಿದ್ಯಾಭವನದಲ್ಲಿ ಹಮ್ಮಿಕೊಂಡಿದ್ದ ಹೆಲ್ಮೆಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಚಾಲನೆ ಮಾಡುವವರು ತುಂಬಾ ಎಚ್ಚರಿಕೆ ವಹಿಸಬೇಕು. ಅದಕ್ಕಿಂತಲೂ ಮುಖ್ಯವಾಗಿ ರಸ್ತೆ ಸುರಕ್ಷತೆಯ ಕುರಿತು ಸಾರಿಗೆ ಇಲಾಖೆ ನಿಗದಿಪಡಿಸಿರುವ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದರು. 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಆರ್‌ಟಿಒ ಕಚೇರಿಯ ಬ್ರೇಕ್ ಇನ್ಸ್‌ಪೆಕ್ಟರ್ ಮಹದೇವಪ್ಪ, ಜಿ.ವಿ.ನಾಗರಾಜ್, ಕಿಶೋರ್, ಸಿರಾಜುಲ್ಲಾ ಬೇಗ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.