ರೈತರೊಂದಿಗೆ ಸಂವಾದ ನಡೆಸಿ ಕಾಯ್ದೆ ಜಾರಿಗೊಳಿಸಿ

Team Udayavani, Mar 1, 2021, 1:48 PM IST

ರೈತರೊಂದಿಗೆ ಸಂವಾದ ನಡೆಸಿ ಕಾಯ್ದೆ ಜಾರಿಗೊಳಿಸಿ

ಚಿಕ್ಕಬಳ್ಳಾಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಯಾವುದೇ ಸಮಸ್ಯೆಗಳುಇದ್ದರೂ ಸಹ ಅದನ್ನು ಸಂವಾದದ ಮೂಲಕ ಬಗೆಹರಿಸಬಹುದಾಗಿದೆ. ಲಾಠಿ ಪ್ರಹಾರಮತ್ತು ಫೈರಿಂಗ್‌ ಮಾಡುವುದರಿಂದ ಸಮಸ್ಯೆಗಳು ಪರಿಹಾರ ಆಗುವುದಿಲ್ಲ. ಸಂವಾದ ಮಾಡದೆ ಕೃಷಿ ಕಾಯ್ದೆ ಜಾರಿಗೊಳಿಸಿದ್ದರಿಂದ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ ಎಂದು 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಕೆ.ಅಮರನಾರಾಯಣ್‌ ತಿಳಿಸಿದರು.

8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಸ್ಯೆ ಎಷ್ಟೇ ತೀವ್ರತೆಯಾಗಿದ್ದರೂ ಸಹ ಇತ್ಯರ್ಥ ಮಾಡಬಹುದು. ಅದಕ್ಕಾಗಿ ಸಂವಾದ ಬಹಳ ಮುಖ್ಯವಾಗಿರುತ್ತದೆ ಎಂದರು.

ಸಹಮತ: ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿ ಸಂವಾದಕ್ಕಿದ್ದು, ಹಾವೇರಿಯಲ್ಲಿರಸಗೊಬ್ಬರಕ್ಕಾಗಿ ಹೋರಾಟ ನಡೆಸಿದ ರೈತರ ಮೇಲೆ ಗುಂಡಿನ ದಾಳಿಯಾದರೆ ಅಂದು ದಾವಣಗೆರೆಯಲ್ಲಿ ಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆ ಮಾಡಿದ ಮನವಿಗೆ ರೈತರು ಸಹಮತ ವ್ಯಕ್ತಪಡಿಸಿವಾಪಸ್‌ ತೆರಳಿದರು ಎಂದು ಬೆಳಕಿಗೆ ಚೆಲ್ಲಿದರು.

ದೆಹಲಿ ಘಟನೆ ನಡೆಯುತ್ತಿರಲಿಲ್ಲ: ರೈತರ ಅಭಿವೃದ್ಧಿಗೆಂದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿಲಾಗಿದೆಎನ್ನುತ್ತಾರೆ. ಆದರೆ ರೈತರು ಇದರ ವಿರುದ್ಧಸತತವಾಗಿ ಬೀದಿಗಿಳಿದು ಹೋರಾಟನಡೆಸುತ್ತಿದ್ದಾರೆ. ಜಾರಿಗೊಳಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದರೆ ಬಹುಶಃದೆಹಲಿಯ ಘಟನೆ ನಡೆಯುತ್ತಿರಲಿಲ್ಲಎಂದರು.

ಸಿಲಿಕಾನ್‌ ಸಿಟಿ ಎಂದು ಖ್ಯಾತಿ ಹೊಂದಿರುವ ಬೆಂಗಳೂರು ನಗರ ಪ್ರದೇಶದಲ್ಲಿ ಕಾಂಕ್ರೀಟ್‌ ರಸ್ತೆಗಳನ್ನು ನಿರ್ಮಾಣ ಮಾಡುವತೆಪದಲ್ಲಿ ಗಿಡಮರಗಳನ್ನು ಕಟಾವುಮಾಡುತ್ತಿದ್ದು, ಇದರ ಪರಿಣಾಮವನ್ನುಬೆಂಗಳೂರಿಗರು ಎದುರಿಸುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.

ಗಂಡಾಂತರ: ಕಾವೇರಿ ಕಣಿವೆಯಲ್ಲಿ ನೀರು ಇಲ್ಲದಿದ್ದರೆ ಬೆಂಗಳೂರಿನ ನಿವಾಸಿಗಳು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣ ವಾಗಲಿದೆ. ಪರಿಸರ ನಾಶದಿಂದ ಆಗುತ್ತಿರುವದುಷ್ಪರಿಣಾಮಗಳ ಕುರಿತು ಈಗಾಗಲೇವಿಜ್ಞಾನಿಗಳು ಎಚ್ಚರಿಸಿದ್ದು, ಮುಂದಿನದಿನಗಳಲ್ಲಿ ಬೆಂಗಳೂರಿಗೆ ಗಂಡಾಂತರ ಕಾದಿದೆ ಎಂದು ಪುನರುಚ್ಚರಿಸಿದರು.

ಈ ಸಂದರ್ಭದಲ್ಲಿ ಶಾಂತ ವಿದ್ಯಾ ಸಂಸ್ಥೆಮುಖ್ಯ ಆಡಳಿತಾಧಿಕಾರಿ ಡಾ.ಕೋಡಿರಂಗಪ್ಪ, ಹಿರಿಯ ಸಾಹಿತಿ ಎನ್‌.ಸಂಜೀವಪ್ಪ, ಜಿಲ್ಲಾ ಕಸಪ ಅಧ್ಯಕ್ಷ ಡಾ.ಕೈವಾರ ಶ್ರೀನಿವಾಸ್‌ ಉಪಸ್ಥಿತರಿದ್ದರು.

ಸಮಸ್ಯೆ ಇತ್ಯರ್ಥಕ್ಕೆ ಸಕಾರಾತ್ಮಕ ಸ್ಪಂದನೆ ಅಗತ್ಯ :

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಯೋಜನೆಯಿಂದ ಜನವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಮಸ್ಯೆಯನ್ನು ಬಗೆಹರಿಸಲು ಸಕಾರಾತ್ಮಕವಾಗಿ ಸ್ಪಂದಿಸಬೇಕಾಗಿದೆ ಎಂದು ಸಮ್ಮೇಳನಾಧ್ಯಕ್ಷ ಕೆ. ಅಮರನಾರಾಯಣ ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ಪ್ರತಿಯೊಬ್ಬರು ಗಿಡಮರಗಳನ್ನು ಬೆಳೆಸಿ ಕೋಟಿನಾಟಿ ಅಭಿಯಾನ ಯಶಸ್ವಿಗೊಳಿಸಿ ಕೋಟಿ ಗಿಡಗಳನ್ನು ನಾಟಿ ಮಾಡಿ ಪೋಷಣೆ ಮಾಡಿದರೆ ಮುಂದಿನ 10 ವರ್ಷಗಳಲ್ಲಿಜಿಲ್ಲೆ ಮಳೆನಾಡು ಪ್ರದೇಶವಾಗಲಿದ್ದು, ಈ ಭಾಗದಲ್ಲಿರುವ ನದಿಗಳು ಹರಿದುರೈತರು ಮತ್ತು ಜನಸಾಮಾನ್ಯರುಸಮೃದ್ಧವಾಗಿ ಜೀವನ ನಡೆಸುವುದರಲ್ಲಿ ಅನುಮಾನವಿಲ್ಲ ಎಂದರು.

ಕನ್ನಡ ಭಾಷೆ ವಿಷಯದಲ್ಲಿಮುಕ್ತ ಮನಸ್ಸಿನಿಂದ ಇರಬೇಕು.ಕೇವಲ ಆದೇಶ ದಿಂದ ಕನ್ನಡಭಾಷಾಭಿವೃದ್ಧಿ ಮಾಡುವ ಬದಲಿಗೆ ಇಚ್ಚಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಗಡಿ ಪ್ರದೇಶಗಳಲ್ಲಿರುವ ಸರ್ಕಾರಿಶಾಲೆಗಳನ್ನು ಗಡಿ ಪ್ರದೇಶ ಅಭಿವೃದ್ಧಿಪ್ರಾಧಿಕಾರದಿಂದ ನೆರವು ಪಡೆದು ಅಭಿವೃದ್ಧಿಗೊಳಿಸಬೇಕು. ಕೆ.ಅಮರನಾರಾಯಣ, ಸಮ್ಮೇಳನಾಧ್ಯಕ್ಷ

ಟಾಪ್ ನ್ಯೂಸ್

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.