ಕಾಮಗಾರಿ ಪೂರ್ಣ, ಉದ್ಘಾಟನೆ ವಿಳಂಬ


Team Udayavani, Aug 3, 2023, 3:28 PM IST

tdy-17

ಚಿಕ್ಕಬಳ್ಳಾಪುರ: ದಶಕದ ಕಾಲ ಕಾಮಗಾರಿ ಕುಂಟುತ್ತಾ ಸಾಗಿ ವಿದ್ಯಾರ್ಥಿ ಪೋಷಕರ ಹಾಗೂ ಸಾರ್ವಜನಿಕರ ವ್ಯಾಪಕ ಟೀಕೆಗೆ ಗುರಿಯಾಗಿ, ಅಂತೂ ಇಂತೂ ನಿರ್ಮಾಣಗೊಂಡಿರುವ ಜಿಲ್ಲಾ ಕೇಂದ್ರದ ಸರ್ಕಾರಿ ಮಹಿಳಾ ಪದವಿ ಕಾಲೇಜು ಕಟ್ಟಡ ಇದೀಗ ಉದ್ಘಾಟನೆಗಾಗಿ ಚುನಾಯಿತ ಜನಪ್ರತಿನಿಧಿಗಳ ಎದುರು ನೋಡುತ್ತಿದೆ.

2013ರಲ್ಲಿ ಅಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಕ್ಷೇತ್ರದ ಶಾಸಕರಾಗಿದ್ದ ಡಾ.ಕೆ.ಸುಧಾಕರ್‌ ನೇತೃತ್ವದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿದ್ದ ಆರ್‌ .ವಿ.ದೇಶಪಾಂಡೆ ಮಹಿಳಾ ಪದವಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು, ಬರೋಬ್ಬರಿ 10 ವರ್ಷದಿಂದ ಕಾಮಗಾರಿ ನನೆಗುದಿಗೆ ಬಿದ್ದು ಸದ್ಯ ಉದ್ಘಾಟನೆ ಹಂತಕ್ಕೆ ಬಂದು ತಲುಪಿದೆ.

ತಾತ್ಕಾಲಿಕ ಕಟ್ಟಡದಲ್ಲಿ ತರಗತಿ: ಜಿಲ್ಲಾ ಕೇಂದ್ರಕ್ಕೆ ಹಲವು ವರ್ಷಗಳ ಹಿಂದೆಯೇ ಮಹಿಳಾ ಸರ್ಕಾರಿ ಪದವಿ ಕಾಲೇಜು ಮಂಜೂರಾದರೂ ಸ್ವಂತ ಕಟ್ಟಡ ಇಲ್ಲದ ಕಾರಣಕ್ಕೆ ನಗರದ ಸಿಟಿಜನ್‌ ಕ್ಲಬ್‌ ಆವರಣದಲ್ಲಿದ್ದ ತಾತ್ಕಾಲಿಕ ಕಟ್ಟಡದಲ್ಲಿ ಕಾಲೇಜು ನಡೆಸಲಾಗುತ್ತಿತ್ತು. ಜೊತೆಗೆ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ಕಟ್ಟಡದಲ್ಲಿ ಕೆಲವೊಂದು ತರಗತಿಗಳನ್ನು ನಡೆಸಲಾಗುತ್ತಿತ್ತು. ಆದರೆ, ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದ ಹೊರ ವಲಯದ ಡೀಸಿ ಕಚೇರಿಗೆ ತೆರಳುವ ಶಿಡ್ಲಘಟ್ಟ ರಸ್ತೆಯಲ್ಲಿ ಕಾಮಗಾರಿಗೆ ಚಾಲನೆ ನೀಡಿ ಹಲವು ವರ್ಷಗಳೇ ಕಳೆದರೂ ಅನುದಾನದ ಕೊರತೆ ಜೊತೆಗೆ ಅವೈಜ್ಞಾನಿಕವಾಗಿ ಕೆರೆಯಂಗಳದಲ್ಲಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸ್ಥಳ ನೀಡಿದ್ದು, ಮಳೆ ಬಂದಾಗೆಲ್ಲಾ ಕಾಲೇಜು ಕಟ್ಟಡ ಮಳೆ ನೀರಿನಲ್ಲಿ ಜಲಾವೃತಗೊಂಡು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿತ್ತು.

ಸ್ವಂತ ಕಟ್ಟಡಕ್ಕೆ ಸ್ಥಳಾಂತರಕ್ಕೆ ಒತ್ತಾಯ: ಕಾಲೇಜು ಸಕಾಲದಲ್ಲಿ ನಿರ್ಮಾಣಕ್ಕೆ ಬೇಕಾದ ಅನುದಾನ ಕೂಡ ಬಿಡುಗಡೆ ಆಗದೇ ಹಲವು ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗಿ ಈಗ ಕಾಮಗಾರಿ ಸಂಪೂರ್ಣ ಮುಗಿದರೂ ಉದ್ಘಾಟನೆಗೆ ಸಮಯ ಕೂಡಿ ಬಂದಿಲ್ಲ. ಕಾಲೇಜು ವಿದ್ಯಾರ್ಥಿಗಳು ಮೂಲ ಸೌಕರ್ಯ ವಂಚಿತ ಗಾಳಿ ಬೆಳಕು ಸಮರ್ಪಕವಾಗಿ ಇಲ್ಲದ ಓಬಿರಾಯನ ಕಾಲದ ತಾತ್ಕಾಲಿಕ ಕಟ್ಟಡದಲ್ಲಿ ಉಸಿರುಗಟ್ಟುವ ವಾತಾವರಣದಲ್ಲಿ ಇನ್ನೂ ವ್ಯಾಸಂಗ ಮಾಡುತ್ತಿದ್ದು, ಆದಷ್ಟು ಬೇಗ ಮಹಿಳಾ ಪದವಿ ಕಾಲೇಜು ಹೊಸದಾಗಿ ನಿರ್ಮಿಸಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂಬ ಒತ್ತಾಯ ವಿದ್ಯಾರ್ಥಿ ಪೋಷಕರಿಂದ ಕೇಳಿ ಬರುತ್ತಿದೆ.

ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ: ಜಿಲ್ಲೆಯ ಚಿಂತಾಮಣಿಯಂತ ತಾಲೂಕು ಕೇಂದ್ರದ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಸಾವಿರ ದಾಟಿದೆ. ಆದರೆ, ಜಿಲ್ಲಾ ಕೇಂದ್ರದಲ್ಲಿ ದಶಕದಿಂದ ಸ್ವಂತ ಕಟ್ಟಡ, ಮೂಲ ಸೌಕರ್ಯದ ಕೊರತೆಯ ಪರಿಣಾಮ ಕಾಲೇಜಿನಲ್ಲಿ ಕೇವಲ 530 ವಿದ್ಯಾರ್ಥಿಗಳು ಮಾತ್ರ ವ್ಯಾಸಂಗ ಮಾಡುತ್ತಿದ್ದಾರೆ. ಸ್ವಂತ ಕಟ್ಟಡ ಕೊರತೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಸರ್ಕಾರ, ಮಹಿಳಾ ಪದವಿ ಕಾಲೇಜಿನ ಸ್ವಂತ ಕಟ್ಟಡವನ್ನು ತ್ವರಿತವಾಗಿ ಉದ್ಘಾಟಿಸುವುದರ ಜೊತೆಗೆ ಕಾಲೇಜಿನಲ್ಲಿ ಸ್ನಾತಕೋತ್ತರ ಕೇಂದ್ರ ಜೊತೆಗೆ ವಿವಿಧ ಕೌಶಲ್ಯಭರಿತ ಕೋರ್ಸ್‌ಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳ ಪ್ರವೇಶ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ .

ಜಿಲ್ಲಾಡಳಿತಕ್ಕೆ ಚಾಟಿ ಬೀಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ: ಹಲವು ವರ್ಷಗಳ ಕಾಲ ಕುಂಟುತ್ತಾ ಸಾಗಿದ್ದ ಸರ್ಕಾರಿ ಮಹಿಳಾ ಪದವಿ ಕಾಲೇಜು ಕಟ್ಟಡ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ, ತಾತ್ಕಾಲಿಕ ಕಟ್ಟಡದಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಆಗಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ವೀರಪ್ಪ, ಖುದ್ದು ಕಾಲೇಜಿಗೆ ದಿಢೀರ್‌ ಭೇಟಿ ನೀಡಿ ಕಾಲೇಜು ಕಟ್ಟಡ ಕಾಮಗಾರಿ ಅನುದಾನ ಇಲ್ಲದೇ ಕುಂಟುತ್ತಾ ನಿರ್ಲಕ್ಷ್ಯಕ್ಕೆ ಒಳಗಾಗಿದ್ದನ್ನು ನೋಡಿ ಜಿಲ್ಲಾಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದರು. ನ್ಯಾಯಮೂರ್ತಿಗಳ ಭೇಟಿ ಬಳಿಕ ಕಾಲೇಜು ಕಟ್ಟಡ ಕಾಮಗಾರಿ ಚುರುಕುಗೊಂಡು ಇದೀಗ ಉದ್ಘಾಟನೆ ಹಂತಕ್ಕೆ ಬಂದು ನಿಂತಿದೆ. ಇಷ್ಟೊತ್ತಿಗಾಗಲೇ ಉದ್ಘಾಟನೆಯಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುವು ಆಗಬೇಕಿದ್ದ ಕಾಲೇಜು ಕಟ್ಟಡ ಅದೇಕೋ ಉದ್ಘಾಟನೆ ವಿಚಾರದಲ್ಲಿ ವಿಳಂಬ ಆಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಉನ್ನತ ಶಿಕ್ಷಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಹಾಗೂ ಕ್ಷೇತ್ರದ ಶಾಸಕರಾದ ಪ್ರದೀಪ್‌ ಈಶ್ವರ್‌ ಇತ್ತಕಡೆ ಗಮನಹರಿಸಿ ಉದ್ಘಾಟನೆಗೆ ಮುಹೂರ್ತ ನಿಗದಿಪಡಿಸಬೇಕಿದೆ.

ವಿಜ್ಞಾನ ವಿಭಾಗ ಇಲ್ಲದೇ ಖಾಸಗಿ ಕಾಲೇಜುಗಳಿಗೆ ಸುಗ್ಗಿ!: ವಿಪರ್ಯಾಸದ ಸಂಗತಿ ಎಂದರೆ ಕಟ್ಟಡದ ಕೊರತೆ ಪರಿಣಾಮ ಮಹಿಳಾ ಪದವಿ ಕಾಲೇಜು ಜಿಲ್ಲಾ ಕೇಂದ್ರಕ್ಕೆ ಮಂಜೂರಾತಿಯಾಗಿ 10 ವರ್ಷ ದಾಟಿದೆ. ಆದರೆ ಇಲ್ಲಿವರೆಗೂ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ಆರಂಭವಾಗಿಲ್ಲ. ಪ್ರಯೋಗಾಲಯ, ಕಟ್ಟಡಗಳ ಕೊರತೆಯಿಂದ ಕೇವಲ ಬಿ.ಎ., ಬಿ.ಕಾಂ ಪದವಿಗೆ ಪ್ರವೇಶ ನೀಡಲಾಗುತ್ತಿದೆ. ಇದರಿಂದ ಬಿಎಸ್ಸಿ ಓದುಬೇಕು ಎಂಬ ಹಂಬಲ ಇರುವ ವಿದ್ಯಾರ್ಥಿನಿಯರು ಅನಿವಾರ್ಯವಾಗಿ ಖಾಸಗಿ ಕಾಲೇಜುಗಳಲ್ಲಿ ದುಬಾರಿ ಶುಲ್ಕ ಕಟ್ಟಿ ಪ್ರವೇಶ ಪಡೆಯುವಂತಾಗಿದೆ. ಮಹಿಳಾ ಪದವಿ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ವ್ಯಾಸಂಗಕ್ಕೆ ಅವಕಾಶ ಇಲ್ಲದೇ ಇರುವುದು ಜಿಲ್ಲಾ ಕೇಂದ್ರದಲ್ಲಿ ತಲೆಎತ್ತಿರುವ ಖಾಸಗಿ ಪದವಿ ಕಾಲೇಜುಗಳಿಗೆ ಸುಗ್ಗಿಯಾಗಿದೆ. ಕೆಲ ಬಡ ವಿದ್ಯಾರ್ಥಿನಿಯರು ಅನಿವಾರ್ಯವಾಗಿ ಕಲಾ ಹಾಗೂ ವಾಣಿಜ್ಯ ಪದವಿಗೆ ಪ್ರವೇಶ ಪಡೆಯುತ್ತಿದ್ದಾರೆ.

ಕಾಲೇಜು ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸದ್ಯದಲೇ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಿ ದಿನಾಂಕ ನಿಗದಿಪಡಿಸಿ ಹೊಸ ಕಟ್ಟಡ ಉದ್ಘಾಟನೆ ನೆರವೇರಿಸಲಾಗುವುದು. ಕಾಲೇಜಿನಲ್ಲಿ 530 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಪ್ರಯೋಗಾಲಯ ಮತ್ತಿತರ ಮೂಲ ಸೌಕರ್ಯದ ಕೊರತೆಯಿಂದ ಬಿ.ಎಸ್ಸಿ ಕೋರ್ಸ್‌ ಇಲ್ಲ. – ಚಂದ್ರಯ್ಯ, ಪ್ರಾಂಶುಪಾಲರು, ಮಹಿಳಾ ಪದವಿ ಕಾಲೇಜು ಚಿಕ್ಕಬಳ್ಳಾಪುರ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.