ರಾಜ್ಯಕ್ಕೆ ಜಿಲ್ಲೆ ಪ್ರಥಮ, ಜಿಪಂ ಅಧ್ಯಕ್ಷ ಹರ್ಷ


Team Udayavani, Aug 11, 2020, 8:44 AM IST

ರಾಜ್ಯಕ್ಕೆ ಜಿಲ್ಲೆ ಪ್ರಥಮ, ಜಿಪಂ ಅಧ್ಯಕ್ಷ ಹರ್ಷ

ಶಿಡ್ಲಘಟ್ಟ: ಕೋವಿಡ್ ಸಮಯದಲ್ಲೂ ಪ್ರಾಣದ ಹಂಗು ತೊರೆದು ಶಿಕ್ಷಕರು ವಿದ್ಯಾರ್ಥಿಗಳ ಮನೆ ಮನೆಗಳಿಗೆ ತೆರಳಿ ಬೋಧನೆ ಮಾಡಿದ ಶಿಕ್ಷಕರಿಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಬರಲು ಶ್ರಮ ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ(ಚಿನ್ನಿ) ಅಭಿನಂದನೆ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಬಳಿಕ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಡಾ.ಕೆ.ಸುಧಾಕರ್‌ರವರು ಅಧಿಕಾರ ಸ್ವೀಕಾರ ಮಾಡಿದಾಗ ಅವರು ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಿ ಎಂದು ಹೇಳಿದ್ದರು. ಅದೇ ರೀತಿ ನಮ್ಮ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಬೋಧನೆ ಹಾಗೂ ಆನ್‌ಲೈನ್‌ ತರಗತಿ ನಡೆಸಿ ಎಸ್‌ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದೇವೆ ಎಂದರು.

ಜಿಲ್ಲಾದ್ಯಂತ 350ರಿಂದ 360 ಶಿಕ್ಷಕರನ್ನು ಕರೆಸಿ ಸಭೆ ನಡೆಸಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಅವರಲ್ಲಿ ಉತ್ತೇಜನ ನೀಡಿ ಮಕ್ಕಳಿಗೆ ಸಂಜೆ ವೇಳೆಯಲ್ಲಿ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈಗಾಗಲೇ ಹೇಳಿದಂತೆ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂರು ಶಾಲೆಗಳಿಗೆ ತಲಾ ಒಂದೊಂದು ಲ್ಯಾಪ್‌ಟಾಪ್‌ಗ್ಳನ್ನು ನೀಡಲಾಗುವುದು ಎಂದು ತಿಳಿಸಿದರು.

15,513 ಮಕ್ಕಳು ಪರೀಕ್ಷೆಗೆ ಹಾಜರ್‌: ಜಿಲ್ಲಾಧಿಕಾರಿ ಆರ್‌. ಲತಾ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ ಬರಲು ಶ್ರಮಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯಲ್ಲಿ 287 ಶಾಲೆಗಳಿದ್ದು, ಇದರಲ್ಲಿ 111 ಸರ್ಕಾರಿ ಶಾಲೆಗಳು, 45 ಅನುದಾನ ಸಹಿತ, 118 ಅನುದಾನ ರಹಿತ ಶಾಲೆಗಳು, 13 ವಸತಿ ಶಾಲೆಗಳಲ್ಲಿ ಒಟ್ಟು 15,676 ಮಕ್ಕಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 15,513 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. 7,527 ವಿದ್ಯಾರ್ಥಿನಿಯರು 7949 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಮಾಹಿತಿ ನೀಡಿದರು.

ಕೋರ್‌ ಕಮಿಟಿ ರಚನೆ: 34 ಶೈಕ್ಷಣಿಕ ಜಿಲ್ಲೆಗಳ ಪೈಕಿ ಕಳೆದ ವರ್ಷ 19 ನೇ ಸ್ಥಾನ ಬಂದಿತ್ತು. ಈ ವರ್ಷ ಮೊದಲ ಸ್ಥಾನ ಬರಲು 2700 ಶಿಕ್ಷಕರ ಶ್ರಮವಿದೆ ಹಾಗೂ ಈ ಹಿಂದೆಯೇ ಜಿಲ್ಲೆ ಮೊದಲ ಸ್ಥಾನ ಬರಲು ನಿವೃತ್ತ ಪ್ರೊಫೆಸರ್‌ ಒಳಗೊಂಡಂತೆ ಕೋರ್‌ ಕಮಿಟಿ ರಚನೆ ಮಾಡಿ ಪ್ರತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಯ ಬಗ್ಗೆ ಗಮನ ಹರಿಸಲಾಗುತ್ತಿತ್ತು ಎಂದು ತಿಳಿಸಿದರು.

ವಿನೂತನ ಪ್ರಯತ್ನ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ  ನಿದೇಶಕ ಎಸ್‌.ನಾಗೇಶ್‌ ಮಾತನಾಡಿ, ಜಿಲ್ಲಾಡಳಿತ ಮಾರ್ಗ  ದರ್ಶನದಂತೆ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಬರಲು ಸಾಧ್ಯವಾಯಿತು. ಪ್ರತಿಯೊಬ್ಬ ಶಿಕ್ಷಕರ ಶ್ರಮದಿಂದ ಜಿಲ್ಲೆ ಮೊದಲ ಸ್ಥಾನ ಬರಲು ಕಾರಣವಾಗಿದೆ.ಕೋವಿಡ್‌ ಸಮಯದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ನೀಡಲು ವಿನೂತನ ಪ್ರಯತ್ನಗಳನ್ನು ಮಾಡಲಾಯಿತು ಎಂದು ಹೇಳಿದರು. ಕೋವಿಡ್‌ ಸಂದರ್ಭದಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಪ್ರೋತ್ಸಾಹ ನೀಡಿದ ಕೆ.ಎಸ್‌.ಆರ್‌.ಟಿ.ಸಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಅಭಿನಂದನೆಗಳು ಸಲ್ಲಿಸಿದರು.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮುನಿಯಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿ ಎಸ್‌ಎಸ್‌ ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲಾಗುವುದು ಎಂದು ಘೋಷಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.