ವಿರೋಧಿಗಳ ಟೀಕೆಗೆ ಪ್ರತಿಕ್ರಿಯೆ ಬೇಡ
Team Udayavani, Jun 16, 2020, 7:06 AM IST
ಗೌರಿಬಿದನೂರು: ನಮ್ಮ ರಾಜಕೀಯ ವಿರೋಧಿಗಳ ಟೀಕೆಗೆ ನಾವು ಪ್ರತಿಕ್ರಿಯಿಸುವುದು ಬೇಡ. ಬದಲಿಗೆ ಸಂಘಟನಾತ್ಮಕ ಕೆಲಸಗಳ ಕಡೆಗೆ ಒತ್ತು ನೀಡೋಣ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಪುಟ್ಟಸ್ವಾಮಿಗೌಡರ ಬಳಗದ ಮುಖಂಡ ಎಚ್ .ವಿ.ಮಂಜುನಾಥ್ ಮುಖಂಡರಲ್ಲಿ ಮನವಿ ಮಾಡಿದರು.
ಕೆ.ಎಚ್.ಪುಟ್ಟಸ್ವಾಮಿಗೌಡ ಫೌಂಡೇಷನ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ವಾಲ್ಮೀಕಿ ಜನಾಂಗದ ರಾಘವೇಂದ್ರ ಹನುಮಾನ್, ಶಾಹಿದ್ ಅಬ್ಟಾಸ್, ಸೈಯದ್‌ಅಬ್ಟಾಸ್ ಅವರ ಸೇರ್ಪಡೆ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾಯಕ ಜನಾಂಗದ ವರ್ಚಸ್ವಿ ವ್ಯಕ್ತಿ ರಾಘವೇಂದ್ರ ಹನುಮಾನ್ ಅವರ ಸೇರ್ಪಡೆಯಿಂದ ತಾಲೂಕಿನಲ್ಲಿ ನಮಗೆ ಹೆಚ್ಚು ಬಲ ಬಂದಿದೆ ಎಂದರು.
ಈಗಾಗಲೇ ಗೌರಿಬಿದನೂರು ನಗರದ ನೀರಿನ ಸಮಸ್ಯೆ ನೀಗಿಸಲು ಪುಟ್ಟಸ್ವಾಮಿ ಗೌಡರು, ಪ್ರತಿ ತಿಂಗಳು 15 ಲಕ್ಷ ರೂ. ವೆಚ್ಚ ಮಾಡುತ್ತಿದ್ದಾರೆ. ಈಗಾಗಲೇ 65 ಲಕ್ಷ ವೆಚ್ಚ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ನೀಡಲಿದ್ದಾರೆ ಎಂದರು. ಮುಖಂಡ ಜಿ.ಕೆ.ಸತೀಶ್ ಮಾತನಾಡಿ, ತಾಲೂಕಿನಲ್ಲಿ ಶಾಸಕರ ಗೆಲುವಿಗಾಗಿ ನಾವೆಲ್ಲರೂ ಸೇರಿ ಗೆಲ್ಲಿಸಿದ್ದೇವೆ. ಅದರೆ ಅವರು ನಮ್ಮನ್ನು ಪಕ್ಷದಿಂದ ಹೊರ ಹೋಗುವಂತೆ ಮಾಡಿದರು ಎಂದರು.
ಪುಟ್ಟಸ್ವಾಮಿಗೌಡ ಮಾತನಾಡಿ, ನಮ್ಮ ಗುಂಪಿಗೆ ಸೇರ್ಪಡೆಯಾಗಿರುವ ಯಾವುದೇ ಮುಖಂಡರೂ ಸಹ ಹಣದಾಸೆಗಾಗಿ ಬಂದಿರುವವರಲ್ಲ. ಯಾರಿಗೂ ಹಣ ಅಥವಾ ವಾಹನವಾಗಲಿ ನೀಡಿಲ್ಲ. ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು. ಸಭೆಯಲ್ಲಿ ಜಿಪಂ ಸದಸ್ಯ ನರಸಿಂಹಮೂರ್ತಿ, ಕೋಚಿಮುಲ್ ಮಾಜಿ ಅಧ್ಯಕ್ಷ ತೊಂಡೇಭಾವಿ ಕಾಂತರಾಜು, ಅಬ್ದುಲ್ಲಾ, ನಗರಸಭೆ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಅನಂತರಾಜು ಉಪಸ್ಥಿತರಿದ್ದರು. ಮುಖಂಡ ನರಸಿಂಹಮೂರ್ತಿ ಸ್ವಾಗತಿಸಿ ಅನಂತರಾಜು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.