ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸಬೇಡಿ
Team Udayavani, Nov 10, 2019, 3:00 AM IST
ಚಿಂತಾಮಣಿ: ರೈತರು ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸದೇ ಸಾವಯುವ ಹಾಗೂ ಕೃತಕ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯಬೇಕು ಎಂದು ಕೋಚಿಮೂಲ್ ನಿರ್ದೇಶಕ ಊಲವಾಡಿ ಆಶ್ವಥನಾರಾಯಣಬಾಬು ಹೇಳಿದರು.
ತಾಲೂಕಿನ ಕೈವಾರ ಹೋಬಳಿ ಜಂಗಮಶಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಎಂ.ವಿ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜೆ.ಎಂ.ಡಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಶಿಬಿರಜಂಗಮಶೀಗೆಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಬಿಎಂಸಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಆರೋಗ್ಯಕ್ಕೆ ಮಾರಕ: ಆರೋಗ್ಯವೇ ಮಹಾ ಭಾಗ್ಯ, ಮನುಷ್ಯ ಜೀವನದಲ್ಲಿ ಉತ್ತಮವಾಗಿ ಬದುಕಿಬಾಳಬೇಕಾದರೇ ಉತ್ತಮ ಆರೋಗ್ಯ ಆವಶ್ಯಕವಾಗಿದೆ. ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದಂಥ ಆಹಾರ ಪದಾರ್ಥಗಳನ್ನು ತಿನ್ನುತ್ತಿರುವುದರಿಂದ ಜನರ ಆರೋಗ್ಯ ತುಂಬಾ ಹದಗೆಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ವಿಷ ಆಹಾರ ಸೇವನೆ: ಇತ್ತೀಚಿನ ದಿನಗಳಲ್ಲಿ ರೈತರು ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯುತ್ತಿರುವುದರಿಂದ ನಾವು ದಿನನಿತ್ಯ ಸೇವಿಸುತ್ತಿರುವ ಅಹಾರ ಪದಾರ್ಥಗಳಲ್ಲಿ ರಾಸಾಯನಿಕ ಪದಾರ್ಥಗಳು ಹೆಚ್ಚಾಗಿ ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗಿ, ಆಯಸ್ಸು ಕೂಡ ಕಡಿಮೆಯಾಗಿ ನೂರು ವರ್ಷ ಬದುಕಿ ಬಾಳಬೇಕಾದ ವ್ಯಕ್ತಿ ಆರುವತ್ತೇ ವರ್ಷಕ್ಕೆ ಸಾಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಸಾವಯವ ಗೊಬ್ಬರ ಬಳಸಿ: ಮನುಷ್ಯನ ಆರೋಗ್ಯ ಉತ್ತಮಗೊಳ್ಳಬೇಕಾದರೆ ಸಾವಯವ ಗೊಬ್ಬರಗಳನ್ನು ಬಳಸಿ ಬೆಳೆದಂತಹ ಆಹಾರ ಪದಾರ್ಥಗಳನ್ನು ತಿನ್ನಬೇಕಾದಂತಹ ಆವಶ್ಯಕತೆ ಇದೆ ಎಂದು ತಿಳಿಸಿದರು.
ಹಾಲಿನಲ್ಲಿ ಅನೇಕ ಶಕ್ತಿ ಇದೆ: ಇಂದು ಮನುಷ್ಯನ ಉತ್ತಮ ಆರೋಗ್ಯಕ್ಕೆ ಹಾಲು ಅತಿ ಮುಖ್ಯವಾಗಿ ಬೇಕಾಗಿದ್ದು, ಹಾಲಿನಲ್ಲಿ ಉತ್ತಮ ಆರೋಗ್ಯಕ್ಕೆ ಬೇಕಾದಂತೆ ಅನೇಕ ರೀತಿಯ ಪೋಷಾಕಂಶಗಳಿವೆ. ಕೇಂದ್ರ ಸರಕಾರ ವಿದೇಶಿ ಹಾಲು ಆಮುದಿಗೆ ತಾತ್ಕಾಲಿಕವಾಗಿ ತಡೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಂಗಮಶಿಗೇಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.
ಕರ್ನಾಟಕ ಹಾಲು ಮಂಡಳಿ ಒಕ್ಕೂಟದ ನಿರ್ದೇಶಕ ಆರ್.ಶ್ರೀನಿವಾಸ್, ಮಹಿಳಾ ಕಾಲೇಜಿನ ಉಪನ್ಯಾಸಕ ಡಾ.ಎಂ.ಎನ್ ರಘು, ಜಂಗಮಶೀಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮುನಿನಾರಾಯಣಪ್ಪ, ಕೋಚಿಮೂಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ವಿ.ತಿಪ್ಪಾರೆಡ್ಡಿ, ಪ್ರಭಾರ ವ್ಯವಸ್ಥಾಪಕ ಬಿ.ಶಿವರಾಜ್, ಉಪವ್ಯವಸ್ಥಾಪಕ ಎನ್.ನಾಗರಾಜ್, ಗ್ರಾಪಂ ಸದಸ್ಯ ಜೆ.ಎಂ.ದೇವರಾಜ್, ನಾರಾಯಣಮ್ಮ, ಮುನಿನಾರಾಯಣಪ್ಪ, ಸುನಂದಮ್ಮ, ನಾಗರಾಜ್ ಸೇರಿದಂತೆ ಎಲ್ಲಾ ಹಾಲು ಉತ್ಪಾದಕರ ಸಹಾಕರ ಸಂಘದ ಸದಸ್ಯರು ಹಾಗೂ ಮತಿತ್ತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.