ರಕ್ತದಾನ ಮಾಡಿ ಜೀವಧಾತರಾಗಿ
Team Udayavani, Jan 26, 2019, 7:41 AM IST
ಚಿಂತಾಮಣಿ: ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಮತ್ತೂಬ್ಬರಿಗೆ ಜೀವದಾತರಾಗಿ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಚಿಕ್ಕಬಳ್ಳಾಪುರ ಘಟಕದ ವೈದ್ಯ ತಂಡದ ಮುಖ್ಯಸ್ಥ ಡಾ.ವಿಕ್ರಮ್ ತಿಳಿಸಿದರು.
ತಾಲೂಕಿನ ಮೈಲಾಂಡ್ಲಹಳ್ಳಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುರುಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ”ರಕ್ತದಾನ ಶಿಬಿರ”ದಲ್ಲಿ ಮಾತನಾಡಿದ ಅವರು, ರಕ್ತದಾನವು ಶ್ರೇಷ್ಠ ದಾನವಾಗಿದ್ದು, ಪ್ರತಿಯೊಬ್ಬರು ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳುವ ಮೂಲಕ ಪರೋಪಕಾರಿತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಜಗತ್ತಿನಲ್ಲಿ ಹಣವನ್ನು ಕೊಟ್ಟು ಏನನ್ನಾದರೂ ಪಡೆಯಬಹುದು ಅಥವಾ ಉತ್ಪಾದನೆ ಮಾಡಬಹುದು. ಆದರೆ ಜೀವ ಉಳಿಸುವ ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ ಎಂದರು.
ಕುರುಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣಿಮ ಮಾತನಾಡಿದರು. ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಸದರಿ ಶಾಲೆಯ ಮುಖ್ಯ ಶಿಕ್ಷಕಿ ಹಸೀನಾ ಬೇಗಂ ಮಾತನಾಡಿದರು. ಸುಮಾರು 78 ಮಂದಿ ಯುವಕರು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 78 ಯುನಿಟ್ ರಕ್ತ ಸಂಗ್ರಹಿಸಿ ರೆಡ್‌ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಲಾಯಿತು. ವೈದ್ಯಾ ಧಿಕಾರಿ ಡಾ.ವಿಕ್ರಂ ಹಾಗೂ ಸಂಸ್ಥೆಯ ತಂಡದವರು ಶಿಬಿರ ನಿರ್ವಹಿಸಿದರು. ಶಾಲೆಯ ಭೋದಕ ಶಿಕ್ಷಕರಾದ ಮಾರಪ್ಪರೆಡ್ಡಿ, ಮುನಿಯಮ್ಮ, ಎಸ್.ಪಿ.ರಮೇಶ್, ಕುರುಬೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.