LS Polls: ಶಾಸಕ ಎಸ್‌.ಆರ್‌.ವಿಶ್ವನಾಥ್‌ ವಿಶ್ವಾಸ ಗೆದ್ದ ಡಾ.ಕೆ.ಸುಧಾಕರ್‌

ಎಸ್‌ಆರ್‌ವಿ ಬಂಡಾಯ ಶಮನ ; ಯಲಹಂಕದಲ್ಲಿ ಸುಧಾಕರ್‌ಗೆ ಹೆಚ್ಚು ಮತದ ಭರವಸೆ ; ಕ್ಷೇತ್ರದ ಕಾಂಗ್ರೆಸ್‌ ನಾಯಕರಿಗೆ ಶಾಕ್‌

Team Udayavani, Apr 4, 2024, 9:15 AM IST

5-sudhakar

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರ ಬಗ್ಗೆ ಯಲಹಂಕ ಬಿಜೆಪಿ ಶಾಸಕ ಎಸ್‌. ಆರ್‌.ವಿಶ್ವನಾಥ್‌ ಅವರಿಗಿದ್ದ ಮುನಿಸು ಶಮನವಾಗಿದ್ದು, ಬುಧವಾರ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮಹೋನ್‌ ಅಗರವಾಲ್‌ರವರ ಸಮ್ಮುಖದಲ್ಲಿ ಸುಧಾಕರ್‌ ಶಾಸಕ ವಿಶ್ವನಾಥ್‌ರವರ ವಿಶ್ವಾಸ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಶಾಸಕ ಎಸ್‌.ಆರ್‌.ವಿಶ್ವನಾಥ್‌ ಈವರೆಗೆ ಎನ್‌ಡಿಎಲ್‌ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಬೆಂಬಲಿಸುವುದಿಲ್ಲ ಎಂದು ಬಹಿರಂಗ ವಿರೋಧ ವ್ಯಕ್ತಪಡಿಸಿದ್ದರು. ತಮ್ಮ ಪುತ್ರನಿಗೆ ಟಿಕೆಟ್‌ ನೀಡದ ಕಾರಣ ಸಹಜವಾಗಿಯೇ ಶಾಸಕ ವಿಶ್ವನಾಥ್‌ ಮುನಿಸಿಕೊಂಡಿದ್ದರು. ಇಬ್ಬರ ನಡುವಿನ ವೈಮನಸ್ಸು ತಿಳಿಗೊಂಡಿದ್ದು, , ಈ ಒಳಬೇಗುದಿಯನ್ನೇ ನೆಚ್ಚಿಕೊಂಡಿದ್ದ ಕಾಂಗ್ರೆಸ್‌ ನಾಯಕರಿಗೆ ಮಹಾ ಶಾಕ್‌ ಆಗಿದೆ.

ಕೇಂದ್ರ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಪರಿಸ್ಥಿತಿ ಬದಲಾಗಿದೆ. ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ಅಗರ್ವಾಲ್‌ ಅವರ ಸಮ್ಮುಖದಲ್ಲಿ ಸಂಧಾನ ಸಭೆ ನಡೆದು, ಕೊನೆಗೆ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರು ಡಾ.ಕೆ.ಸುಧಾಕರ್‌ಗೆ ಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಂದಿದ್ದ ದೊಡ್ಡ ತಡೆ ನಿವಾರಣೆಯಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಬಿಜೆಪಿ ಈ ಸಣ್ಣ ಒಡಕನ್ನೇ ತಮ್ಮ ಲಾಭವಾಗಿಸಿಕೊಂಡು ಮತಗಳಾಗಿ ಪರಿವರ್ತಿಸಿಕೊಳ್ಳಲು ತಂತ್ರ ಹೂಡಿದ್ದರು. ಬಿಜೆಪಿ ನಾಯಕರ ನಡುವಿನ ಸಮಸ್ಯೆ ಇನ್ನಷ್ಟು ಬೆಳೆಯಲಿದ್ದು, ಇದರಿಂದ ಕಾಂಗ್ರೆಸ್‌ ಗೆ ಒಂದಷ್ಟು ಮತಗಳು ಬರಬಹುದು ಎಂದು ಕಾಂಗ್ರೆಸ್‌ ನಾಯಕರು ಲೆಕ್ಕಾಚಾರ ಹಾಕಿದ್ದರು. ಆದರೆ ಈಗ ಕಾಂಗ್ರೆಸ್‌ ನಾಯಕರಿಗೆ ಮುಖಭಂಗವಾಗಿ ಎಲ್ಲ ನಿರೀಕ್ಷೆ ಹುಸಿಯಾಗಿದೆ.

ಬಿಜೆಪಿ ಅಭ್ಯರ್ಥಿಗೆ ಈಗ ಆನೆಬಲ: ದಿಢೀರ್‌ ಬದಲಾವಣೆಯಿಂದ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಅವರಿಗೆ ಆನೆ ಬಲ ಬಂದಂತಾಗಿದೆ. ಈಗಾಗಲೇ ಜೆಡಿಎಸ್‌ -ಬಿಜೆಪಿ ಮೈತ್ರಿ ಸುಧಾಕರ್‌ ನಿರಂತರವಾಗಿ ಸಮನ್ವಯ ಸಭೆಗಳನ್ನು ನಡೆಸಿ ಎಲ್ಲರ ವಿಶ್ವಾಸಗಳಿಸಿದ್ದಾರೆ. ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಸೇರಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ಯಲಹಂಕ ಕ್ಷೇತ್ರದಲ್ಲಿ ಸ್ವಪಕ್ಷೀಯರ ಸಂಪೂರ್ಣ ಬೆಂಬಲ ದೊರೆತಿದೆ. ಈ ಮೂಲಕ ಡಾ.ಕೆ.ಸುಧಾಕರ್‌ ಅವರಿಗೆ ವಿಜಯಲಕ್ಷ್ಮಿ ಒಲಿಯುವ ಹಾದಿ ಇನ್ನಷ್ಟು ಸುಗಮವಾಗಿದೆ.

ಮತದಾರರ ಹೆಚ್ಚಳ: ಕಾಂಗ್ರೆಸ್‌ ಲೆಕ್ಕಾಚಾರ ಉಲ್ಟಾ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ಪೈಕಿ, ಯಲಹಂಕ ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಲೋಕಸಭಾ ಕ್ಷೇತ್ರದಲ್ಲಿ 19.50 ಲಕ್ಷ ಮತದಾರರಿದ್ದು, ಯಲಹಂಕ ಕ್ಷೇತ್ರವೊಂದರಲ್ಲೇ 4.45 ಲಕ್ಷ ಮತದಾರರಿದ್ದಾರೆ. ಹೀಗಾಗಿ ಇಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕರ ನಡುವಿನ ಮನಸ್ತಾಪವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಬಹುದೆಂದು ಕಾಂಗ್ರೆಸ್‌ ಲೆಕ್ಕಾಚಾರ ಹಾಕಿತ್ತು. ಜೊತೆಗೆ ಇಲ್ಲಿ ಹೆಚ್ಚು ಮತ ಪಡೆದರೆ ಒಟ್ಟು ಮತ ಗಳಿಕೆಯ ಮೇಲೆ ನಿರ್ಣಾಯಕ ಪರಿಣಾಮ ಬೀರಬಹುದು ಎಂಬ ಅಂದಾಜು ಇತ್ತು. ಆದರೆ ಈಗ ಕಾಂಗ್ರೆಸ್‌ ಈ ಬೆಳವಣಿಗೆ ಶಾಕ್‌ ನೀಡಿದೆ.

ಇಂದು ಬೃಹತ್‌ ರೋಡ್‌ ಶೋ ಮೂಲಕ ಸುಧಾಕರ್‌ ಶಕ್ತಿ ಪ್ರದರ್ಶನ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಗುರುವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬೃಹತ್‌ ರೋಡ್‌ ಶೋ ನಡೆಯಲಿದೆ. ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್‌ ಮೈತ್ರಿ ಇರುವುದರಿಂದ ಅಭ್ಯರ್ಥಿ ಪರ ಒಲವು ಕಂಡುಬಂದಿದೆ. ಈ ಮಹಾ ಶಕ್ತಿಯೊಂದಿಗೆ ಡಾ.ಕೆ.ಸುಧಾಕರ್‌ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗ್ಗೆ ಡಾ.ಕೆ.ಸುಧಾಕರ್‌ ದೇವನಹಳ್ಳಿ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಚಿತ್ರವನದ ಯೋಗಿ ನಾರಾಯಣ ದೇವಸ್ಥಾನ ಹಾಗೂ ವೀರಾಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದೇ ವೇಳೆ ಪೌರಕಾರ್ಮಿಕರು, ಆಟೋ ಚಾಲಕರು, ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರ ಆಶೀರ್ವಾದ ಪಡೆಯಲಿದ್ದಾರೆ. ನಂತರ ಚಿಕ್ಕಬಳ್ಳಾಪುರದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಹಾಗೂ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ರೋಡ್‌ ಶೋ ನಡೆಯಲಿದೆ.

ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ, ಬೆಂಗಳೂರು ಕೇಂದ್ರ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್‌, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ತಾರಾ ಅನುರಾಧ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ. ಶಿಡ್ಲಘಟ್ಟ ವೃತ್ತದಲ್ಲಿ ಜನರನ್ನುದ್ದೇಶಿಸಿ ನಾಯಕರು ಮಾತನಾಡಲಿದ್ದಾರೆ. ■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.