ಆಟೋ ಪ್ರಯಾಣ ದರ ಪರಿಷ್ಕರಣೆಗೆ ಚಾಲಕರ ಮನವಿ
Team Udayavani, Oct 7, 2019, 2:55 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಲವು ವರ್ಷ ಗಳಿಂದ ಪರಿಷ್ಕರಣೆ ಆಗದೇ ನೆನಗುದಿಗೆ ಬಿದಿರುವ ಆಟೋ ಪ್ರಯಾಣ ದರವನ್ನು ಕೂಡಲೇ ಪರಿಷ್ಕರಿಸಿ ಆಟೋ ಚಾಲಕರ ಹಿತ ಕಾಯಬೇಕೆಂದು ಆಗ್ರಹಿಸಿ ತ್ರಿಚಕ್ರ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಇತ್ತೀ ಚೆಗೆ ಜಿಲ್ಲಾಧಿಕಾರಿ ಆರ್. ಲತಾಗೆ ಮನವಿ ಸಲ್ಲಿಸಿದರು.
ರಾಜ್ಯ ಆಟೋ ಚಾಲಕರ ಸಂಘದ ಕಾಯಾಧ್ಯಕ್ಷ ಕೆ.ವಿ.ಸುರೇಶ್ ಕುಮಾರ್, ಜಿಲ್ಲಾಧ್ಯಕ್ಷ ಡಾಂಬು ಶ್ರೀನಿವಾಸ್, ಕರವೇ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಮತ್ತಿತರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಕೋರಿ ಮನವಿ ಸಲ್ಲಿಸಿತು. ಕೇಂದ್ರ ಸರ್ಕಾರ ತಿದ್ದುಪಡಿ ಮೂಲಕ ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆಯ ಬಗ್ಗೆ ಕೂಡಲೇ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಆಟೋ ಚಾಲಕರಿಗೆ ಜಾಗೃತಿ ಮೂಡಿಸಬೇಕು. ಆಟೋ ಚಾಲಕರಿಗೆ ಸಂಬಂಧಿಸಿದ ಸಮಸ್ಯೆ ಗಳ ಚರ್ಚೆಗೆ ಜಿಲ್ಲಾ ಮಟ್ಟದ ಸಾರಿಗೆ ಪ್ರಾಧಿಕಾರ ಸಭೆ ಆಯೋಜಿಸಬೇಕು, ಅಧಿಕೃತ ಆಟೋಗಳ ನಿಲ್ದಾಣ ಹಾಗೂ ಆರ್‌ಟಿಒ ಇಲಾಖೆಯಿಂದ ಪರವಾನಿಗೆ ಪಡೆದು ಕೊಳ್ಳುವ ಬಗ್ಗೆ ಚಾಲಕರಲ್ಲಿ ಅರಿವು ಮೂಡಿಸ ಬೇಕೆಂದು ನಿಯೋಗ ಜಿಲ್ಲಾಧಿಕಾರಿಗಳನ್ನು ಕೋರಿತು.
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಒಂದು ಬಾರಿ ಆಟೋ ಪ್ರಯಾಣ ದರ ಪರಿಷ್ಕರಣೆಗೊಂಡಿದ್ದು, ಬಳಿಕ ಸುಮಾರು ವರ್ಷ ಗಳಿಂದ ಪ್ರಯಾಣ ದರ ಏರಿಕೆ ಅಥವಾ ಪರಿಷ್ಕರಣೆಗೊಂಡಿಲ್ಲ. ಸದ್ಯ, ಆಟೋ ಚಾಲ ಕರು ಸಂಕಷ್ಟದಲ್ಲಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸಲು ಪರಿಷ್ಕರಣೆ ಮಾಡಬೇಕೆಂದು ಕೋರಿ ದರು. ಬಹಳಷ್ಟು ನಗರ ಪಟ್ಟಣಗಳಲ್ಲಿ ಅಧಿ ಕೃತ ಆಟೋಗಳಿಗೆ ನಿಲ್ದಾಣ ಇಲ್ಲದೇ ಸಮಸ್ಯೆ ಇದ್ದು, ಕೂಡಲೇ ಜಿಲ್ಲಾಡಳಿತ ಆಟೋ ನಿಲ್ದಾಣ ಗಳಿಗೆ ಜಾಗ ಗುರುತಿಸಿ ನಿಲ್ದಾಣ ಗಳನ್ನು ಆಯಾ ನಗರಸಭೆಗಳ ಮೂಲಕ ನಿರ್ಮಿಸಿ ಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ಶಬ್ಬೀರ್, ಎಸ್.ಗೋಪಿ, ಎನ್. ವೆಂಕಟೇಶ್, ಫಕ್ರು ದ್ಧೀನ್ ಸೇರಿದಂತೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.