ಕುಡಿದು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ¨


Team Udayavani, Aug 26, 2017, 12:23 PM IST

chikkab.jpg

ಚಿಂತಾಮಣಿ/ಚಿಕ್ಕಬಳ್ಳಾಪುರ: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವ ಪೈಶಾಚಿಕ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಆರೋಪಿ ಬಂಧನ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಅದೇ ಗ್ರಾಮದ ಆನಂದ್‌ (26) ಎಂದು ಗುರುತಿಸಲಾಗಿದ್ದು,
ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾರೆ. ನಾಪತ್ತೆಯಾಗಿದ್ದ ಬಾಲಕಿ: ಶಾಲೆಯಿಂದ ಬಂದು ಮನೆಗೆಲಸದಲ್ಲಿ ತೊಡಿಗಿಸಿಕೊಂಡಿದ್ದ ಬಾಲಕಿ ಸಂಜೆ 7 ಗಂಟೆ ನಂತರ ನಾಪತ್ತೆಯಾಗಿದ್ದಳು. ಇದರಿಂದ ಆತಂಕಗೊಂಡ ಬಾಲಕಿಯ ಪೋಷಕರು ಗ್ರಾಮದಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಗ್ರಾಮದ ಹೊರ ವಲಯದಲ್ಲಿ ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿರುವುದು ಕಂಡು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೋಷಕರು ಮಗುವನ್ನು ಗುರುತಿಸಿದ್ದಾರೆ. ಅತ್ಯಾಚಾರವೆಸಗಿ ಕೊಲೆ: ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಕೊಲೆಗೀಡಾದ ಬಾಲಕಿಯ ಪೋಷಕರೊಂದಿಗೆ ಮಾತುಕತೆ ನಡೆಸಿ ಸಂಶಯಾಸ್ಪದ ಹಿನ್ನೆಲೆಯಲ್ಲಿ ಅದೇ ಗ್ರಾಮದ ಆನಂದ್‌ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದಾಗ ತಾನೇ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ  ಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸ್‌ ಮೂಲಗಳು ತಿಳಿಸಿವೆ. ಅತ್ಯಾಚಾರ ಪ್ರಕರಣ ತಿಳಿದ ಕೂಡಲೇ ಗ್ರಾಮಕ್ಕೆ ಚಿಂತಾಮಣಿ ತಾಲೂಕು ತಹಶೀಲ್ದಾರ್‌ ಎಂ.ಗಂಗಪ್ಪ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್‌ ಸಮ್ಮುಖದಲ್ಲಿ ಬಾಲಕಿಯರ ಮರಣೋತ್ತರ ಪರೀಕ್ಷೆಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಯ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಐಜಿಪಿ, ಎಸ್ಪಿ ಭೇಟಿ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೇಂದ್ರ ವಲಯದ ಐಜಿಪಿ ಅಮೃತ್‌ ಪಾಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕರೆಡ್ಡಿ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ಸಂಬಂದ ಆರೋಪಿ ವಿರುದ್ಧª ಕ್ರಮ ಕೈಗೊಳ್ಳುವಂತೆ ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಜಿ.ಕೃಷ್ಣಮೂರ್ತಿ, ಚಿಂತಾಮಣಿ ಗ್ರಾಮಾಂತರ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಆನಂದ್‌ ಕುಮಾರ್‌ಗೆ ಸೂಚಿಸಿದರು. ಕುಡಿದ ಅಮಲಿನಲ್ಲಿ ಕೃತ್ಯ: ಜಿಲ್ಲೆಯ ಚಿಂತಾಮಣಿ ತಾಲೂಕಿನ ದ್ವಾರಪಲ್ಲಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಈಗಾಗಲೇ ಅದೇ ಗ್ರಾಮದ ಆರೋಪಿ ಆನಂದ್‌ (26) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿದ್ದಾನೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾನೆ ಎಂದು ಕೇಂದ್ರ ವಲಯದ ಐಜಿಪಿ ಅಮೃತ್‌ಪಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.