ಅಸಂಘಟಿತ ಕಾರ್ಮಿಕರಿಗಾಗಿ ಇ-ಶ್ರಮ್ ಯೋಜನೆ
ಕೇಂದ್ರದ ಮಹತ್ವಾಕಾಂಕ್ಷೆ ಯೋಜನೆಗೆ ಡಿಸೆಂಬರ್ ಅಂತ್ಯದೊಳಗೆ ನೋಂದಣಿ ಮಾಡಿಸಿ: ಜಿಲ್ಲಾಧಿಕಾರಿ ಆರ್.ಲತಾ
Team Udayavani, Oct 29, 2021, 1:59 PM IST
ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇ-ಶ್ರಮ ಯೋಜನೆಯು ಅತಿ ಪ್ರಮುಖವಾಗಿದೆ. ಇದರಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಡಿಸೆಂಬರ್ ಅಂತ್ಯದೊಳಗೆ ನೋಂದಣಿ ಮಾಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಲತಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಇ-ಶ್ರಮ್ ಯೋಜನೆಯ ಜಾರಿ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಯೋಜನೆಯ ನೋಂದಣಿಯು ಆ.26ರಿಂದ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಈ ವರೆಗೆ 6450 ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನೂ ಜಿಲ್ಲೆಯಲ್ಲಿರುವ 5 ಲಕ್ಷ ಅಸಂಘಟಿತ ಕಾರ್ಮಿಕರನ್ನು ಮಾಡಿಸಬೇಕು ಎಂದು ವಿವರಿಸಿದರು.
ಅನುಕೂಲಗಳೇನು: ಇ-ಶ್ರಮ್ ಯೋಜನೆ ಅಡಿಯಲ್ಲಿ ನೋಂದಣಿ ಮಾಡಿಸಿಕೊಂಡರೆ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನ ಮಂತ್ರಿ ಸುರûಾ ಭೀಮಾ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯತೆಗೆ 2 ಲಕ್ಷ ರೂ. ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ, ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳಬಹುದು. ವಲಸೆ ಕಾರ್ಮಿಕರ ಉದ್ಯೋಗಾವಕಾಶಕ್ಕೂ ಸಹಾಯಕವಾಗಲಿದೆ ಎಂದು ಹೇಳಿದರು.
ಮಕ್ಕಳಿಗೆ ಶೈಕ್ಷಣಿಕ ಸಾಲ: ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದರೆ ಸರ್ಕಾರದ ಎಲ್ಲಾ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು ಡಿಬಿಟಿ ಮೂಲಕ ಪಡೆಯಬಹುದು, ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸದೆ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ವಿವಿಧ ಪ್ರಯೋಜನಗಳನ್ನು ಪಡೆಯಬಹುದು. ಉಚಿತ ಆರೋಗ್ಯ ಸೇವೆ, ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಾಲ ಸೌಲಭ್ಯ, ವಿವಾಹ ಸಹಾಯಧನ, ಪಿಂಚಣಿ ಸೌಲಭ್ಯ ಸಹ ಪಡೆಯಬಹುದಾಗಿದೆ ಎಂದು ತಿಳಿಸಿದರು. ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ, ಕೈಗಾರಿಕೆ ಇಲಾಖೆಯ ಅತೀಖ್ ಉಲ್ಲಾ ಶರೀಫ್ ಉಪಸ್ಥಿತರಿದ್ದರು.
ಡಿಸೆಂಬರ್ ಅಂತ್ಯಕ್ಕೆ ನೋಂದಣಿ ಮುಗಿಸಿ-
ಜಿಲ್ಲೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಪಶು ಸಂಗೋಪನಾಕಾರರು, ನೇಕಾರರು, ಬಡಗಿ ಕೆಲಸಗಾರರು, ಆಶಾ ಕಾರ್ಯಕರ್ತರು, ಫೋಟೋಗ್ರಾಫರ್, ನೌಕರರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆ ಕೆಲಸಗಾರರು, ಪತ್ರಿಕೆ ಮಾರಾಟಗಾರರು, ಚಾಲಕರು, ಕೂಲಿ ಕಾರ್ಮಿಕರು (ನರೆಗಾ), ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ಲೈನ್ ಸೇವಾ ಕಾರ್ಮಿಕರು, ಟೈಲರ್‌ಗಳು, ಹೊಟೇಲ್ ಕಾರ್ಮಿಕರು, ಬೇಕರಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು, ಮೆಕಾನಿಕ್, ಇನ್ನಿತರ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಸುವ ಕೆಲಸವನ್ನು ಜಿಲ್ಲಾಧಿಕಾರಿ ಆರ್.ಲತಾ ಇಲಾಖಾವಾರು ಕಾರ್ಯ ಹಂಚಿಕೆ ಮಾಡಿದರು.
ಇದನ್ನೂ ಓದಿ:- ಶಾಲಾ ಕಾಲೇಜುಗಳಲ್ಲಿ ಮೇಳೈಸಿದ ಕನ್ನಡ ಕಂಪು
ನೋಂದಣಿ ಸಂಪೂರ್ಣ ಉಚಿತ
ಗ್ರಾಪಂ ಮಟ್ಟದಿಂದ ಜಿಲ್ಲಾ ಕೇಂದ್ರದವರೆಗೆ ಜಿಲ್ಲಾದ್ಯಂತ 170 ಸಾಮಾನ್ಯ ಸೇವಾ ಕೇಂದ್ರಗಳಿವೆ, ಸಾರ್ವಜನಿಕರು ತಮ್ಮ ಸಮೀಪದ ಕೇಂದ್ರಗಳಿಗೆ ತೆರಳಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ನೋಂದಣಿ ಮಾಡಲು, ಪ್ರತಿ ಪಡೆಯಲು ಪ್ರತಿ ನೋಂದಣಿಗೆ 20 ರೂ. ಅನ್ನು ಸಂಬಂಧಿತ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗಳಿಗೆ ಕೇಂದ್ರ ಸರ್ಕಾರವೇ ಭರಿಸುತ್ತದೆ. ನೋಂದಣಿ ಅಥವಾ ನೋಂದಣಿ ಪ್ರತಿ ಪಡೆಯುವುದು ಸಂಪೂರ್ಣ ಉಚಿತ. ನೋಂದಣಿ ಮಾಡಲು ಹಣದ ಬೇಡಿಕೆ ಇಡುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಕೂಡಲೇ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲೆಯಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಆರ್. ಲತಾ ಸೂಚನೆ ನೀಡಿದರು.
ಕಾರ್ಮಿಕರ ನೋಂದಣಿ ಮಾಡಿಸುವುದು ಹೇಗೆ?
16ರಿಂದ 59 ವರ್ಷದೊಳಗಿನ ವಯೋಮಾನದ ಅಸಂಘಟಿತ ಕಾರ್ಮಿಕರು ಆಧಾರ್ ಕಾರ್ಡ್, ಸಕ್ರಿಯ ಬ್ಯಾಂಕ್ ಖಾತೆ ಪಾಸ್‌ಬುಕ್ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯ ವಿವರಗಳನ್ನು ಇ-ಶ್ರಮ್ ಪೋರ್ಟಲ್‌ನಲ್ಲಿ (ಈ-ಶ್ರಮ್) ನಮೂದಿಸುವ ಮೂಲಕ ನೇರವಾಗಿ ತಮ್ಮ ಸ್ಮಾರ್ಟ್ ಫೋನ್‌ನಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು. ಇಲ್ಲವೆ, ತಮಗೆ ಸಮೀಪವಿರುವ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಯಾವುದೇ ರೀತಿಯ ತೊಡಕು ಉಂಟಾದಲ್ಲಿ ಜಿಲ್ಲಾ, ತಾಲೂಕು ಮಟ್ಟದ ಕಾರ್ಮಿಕ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಮತ್ತು ಸಹಾಯ ಪಡೆದು ನೋಂದಣಿ ಮಾಡಿಕೊಳ್ಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.