2 ತಿಂಗಳಲ್ಲಿ ಎಕೋ ಥೀಮ್ ಪಾರ್ಕ್ ಕಾಮಗಾರಿ ಪೂರ್ಣ
Team Udayavani, Jul 3, 2022, 4:03 PM IST
ಚಿಕ್ಕಬಳ್ಳಾಪುರ: ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಕೆ.ಆರ್.ಎಸ್.ಬೃಂದಾವನ ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ಎಕೋ ಥೀಮ್ ಪಾರ್ಕ್‌ನ ಕಾಮಗಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಆರ್.ಲತಾ ಪರಿಶೀಲನೆ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 8.1 ಕೋಟಿ ರೂ. ವೆಚ್ಚದಲ್ಲಿ ಎಕೋ ಥೀಮ್ ಪಾರ್ಕ್‌ನ್ನು ನಿರ್ಮಿಸಲಾಗುತ್ತಿದ್ದು, 2 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸ ಲಾಗುವುದು. ಪರಿಸರ ಸ್ನೇಹಿ ಉದ್ಯಾನವನ ಪ್ರವಾಸಿಗರ ಮನಸೆಳೆಯುವ ಹಲವು ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಮಾದರಿಗಳು ಈ ಪಾರ್ಕ್‌ನಲ್ಲಿ ಮೈತಳೆಯಲಿದ್ದು, ಜಿಲ್ಲೆಗೆ ಅತ್ಯಂತ ಆಕರ್ಷಣೀಯ ಮಾದರಿಯ ಉದ್ಯಾನವನ ಇದಾಗಲಿದೆ ಎಂದರು.
ಈ ಉದ್ಯಾನವನದಲ್ಲಿ ಸರಳ ಜಿಮ್, ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಅನುಕೂಲ ಗಳು, ಹಿರಿಯ ನಾಗರಿಕರ ವಿಶ್ರಾಂತಿ ಸ್ಥಳ, ಸಂಗೀತ ಕಾರಂಜಿ, ಬೋಟಿಂಗ್, ಕಲಾ ಗ್ರಾಮದ ಮಳಿಗೆಗಳು, ಸ್ಥಳೀಯ ಕಲೆಗಳ ಪ್ರದರ್ಶನ ಕೇಂದ್ರ, ಪಾದಾಚಾರಿ ಸೇತುವೆ, ವನೌಷಧಿ ಸಸ್ಯಗಳ ಪಾರ್ಕ್ ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಒಟ್ಟಾರೆ ಜಿಲ್ಲೆಯ ಪ್ರವಾಸೋದ್ಯಮ ವನ್ನು ಅಭಿವೃದ್ಧಿಪಡಿಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಂತರ ಜಿಲ್ಲಾಧಿಕಾರಿಗಳು ನೇರವಾಗಿ ಮುನ್ಸಿಪಾಲ್ ಬಡಾವಣೆ ಎಸ್.ಡಿ.ಎಂ.ಐ (ಐಡಿಯಾ ಸಮಿತಿ) ಬಡಾವಣೆಗಳ ಉದ್ಯಾನವನ ಗಳು ಮತ್ತು ಚೆನ್ನಯ್ಯ ಪಾರ್ಕ್‌ಗೆ ಭೇಟಿ ನೀಡಿ, ಅಲ್ಲಿನ ನಿರ್ವಹಣೆಯನ್ನು ವೀಕ್ಷಿಸಿ ಸ್ಥಳದಲ್ಲೇ ನಿರ್ವಹಣೆಯ ಉನ್ನತೀಕರಣಕ್ಕೆ, ಸ್ವಚ್ಛತೆ ಕಾಪಾಡಲು ಅಗತ್ಯ ಸೂಚನೆಗಳನ್ನ ನಗರಾಭಿವೃದ್ಧಿ ಕೋಶದ ಮತ್ತು ನಗರ ಸಭೆಯ ಅಧಿಕಾರಿಗಳಿಗೆ ನೀಡಿದರು.
ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ (ಬಾಬು), ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.