ಪರಿಸರ ಸ್ನೇಹಿ ನಾಡ ಕಚೇರಿ ಉದ್ಘಾಟನೆ ಇಂದು


Team Udayavani, Aug 19, 2019, 3:00 AM IST

parisara-snehi

ಶಿಡ್ಲಘಟ್ಟ: ತಾಲೂಕು ಸಹಿತ ಜಿಲ್ಲಾದ್ಯಂತ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸಲು ಮಳೆ ನೀರು ಕೊಯ್ಲು ಪದ್ಧತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಸಕ್ತಿ ವಹಿಸಿ ಶಾಲಾ ಕಾಲೇಜು ಹಾಗೂ ಸರ್ಕಾರಿ ಜಮೀನು ಮತ್ತು ಕಚೇರಿಗಳ ಸುತ್ತಮುತ್ತ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಪರಿಸರ ಸಂರಕ್ಷಣೆಗಾಗಿ ಗಮನ ಸೆಳೆದಿದ್ದ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಅವರ ಮತ್ತೂಂದು ಕನಸು ಪರಿಸರ ಸ್ನೇಹಿ ನಾಡ ಕಚೇರಿ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದ್ದು, ಸೋಮವಾರ ಉದ್ಘಾಟನೆ ಭಾಗ್ಯ ಕಾಣಲಿದೆ.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿ ಪರಿಸರ ಸ್ನೇಹಿ ನಾಡ ಕಚೇರಿ ನಿರ್ಮಿಸಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಿದ್ದು, ಕಟ್ಟಡ ನವವಧುವಿನಂತೆ ಶೃಂಗಾರಗೊಂಡಿದೆ.

7 ಕೊಠಡಿ: 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪರಿಸರ ಸ್ನೇಹಿ ನಾಡ ಕಚೇರಿ ಕಟ್ಟಡ 7 ಕೊಠಡಿಗಳನ್ನು ಹೊಂದಿದ್ದು, ಕೂಲಿ ಕಾರ್ಮಿಕರು ಈ ಕಟ್ಟಡ ನಿರ್ಮಿಸಲು ಶ್ರಮವಹಿಸಿದ್ದಾರೆ. ತಾಲೂಕಿನ ಜಂಗಮಕೋಟೆ ಮತ್ತು ಸಾದಲಿ ಗ್ರಾಮದಲ್ಲಿ ಇದೇ ಮಾದರಿಯಲ್ಲಿ ಪರಿಸರ ಸ್ನೇಹಿ ಕಟ್ಟಡಗಳು ತಲೆಎತ್ತಿದ್ದು, ಪ್ರಥಮ ಹಂತದಲ್ಲಿ ಜಂಗಮಕೋಟೆ ನಾಡ ಕಚೇರಿಗೆ ಉದ್ಘಾಟನೆಗೆ ಭಾಗ್ಯ ಕೂಡಿ ಬಂದಿದೆ. ಮುಂದಿನ ದಿನಗಳಲ್ಲಿ ಸಾದಲಿ ಕಟ್ಟಡ ಪೂರ್ಣಗೊಳ್ಳಲಿದೆ.

ಪ್ಲಾಸ್ಟಿಂಗ್‌ ರಹಿತ ಕಟ್ಟಡ: ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳ ಕಟ್ಟಡಗಳನ್ನು ನಿರ್ಮಿಸಲು ಇಟ್ಟಿಗೆ ಅಥವಾ ಹಾಲೋಬ್ರಿಕ್ಸ್‌ ಇಟ್ಟಿಗೆಗಳನ್ನು ಬಳಕೆ ಮಾಡುತ್ತಾರೆ. ಆದರೆ ಈ ಕಟ್ಟಡಕ್ಕೆ ಮಾತ್ರ ಸ್ಥಳದಲ್ಲಿ ಸಿಮೆಂಟ್‌, ಕೆಮ್ಮಣ್ಣು, ಎಂ.ಸ್ಯಾಂಡ್‌, ಸುಣ್ಣದ ನೀರು ಬಳಕೆ ಮಾಡಿ ಇಟ್ಟಿಗೆ ತಯಾರಿಸಿ ಸುಮಾರು 22 ದಿನ ಕ್ಯೂರಿಂಗ್‌ ಮಾಡಿದ ಬಳಿಕ ತಯಾರಾದ ಇಟ್ಟಿಗೆಯನ್ನು ಬಳಕೆ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿ ಸಹ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ವೇದಿಕೆ ಸಜ್ಜಾಗಿದೆ.

68 ಹಳ್ಳಿಗಳು ಮತ್ತು 13 ಕಂದಾಯ ವೃತ್ತಗಳು: ಹೋಬಳಿ ಕೇಂದ್ರವಾಗಿರುವ ಜಂಗಮಕೋಟೆ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲಿದೆ. ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 68 ಹಳ್ಳಿಗಳು ಮತ್ತು 13 ಕಂದಾಯ ವೃತ್ತಗಳು ಇದರ ವ್ಯಾಪ್ತಿಗೆ ಬರಲಿದ್ದು, ಜನಸಾಮಾನ್ಯರು ಪ್ರತಿಯೊಂದು ಕೆಲಸಕ್ಕೆ ಶಿಡ್ಲಘಟ್ಟ ನಗರದ ತಾಲೂಕು ಕಚೇರಿಗೆ ಅಲೆದಾಡುವ ಬದಲಿಗೆ ಮುಂದಿನ ದಿನಗಳಲ್ಲಿ ಹೋಬಳಿ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸೇವೆಗಳು ಲಭಿಸಲಿದೆ.

ಕಚೇರಿಗೆ ಅಗತ್ಯ ಸಿಬ್ಬಂದಿ ದೊರೆಯಲಿ: ಜಂಗಮಕೋಟೆ ಗ್ರಾಮ ಹೋಬಳಿ ಮತ್ತು ಪಂಚಾಯಿತಿ ಕೇಂದ್ರವಾಗಿರುವುದರಿಂದ ವಿವಿಧ ಸರ್ಕಾರಿ ಸೇವೆ ಒದಗಿಸಲು ಈಗಾಗಲೇ ನಾಡ ಕಚೇರಿ ನಡೆಯುತ್ತಿದೆ. ಕಚೇರಿಗೆ ನೂತನ ಕಟ್ಟಡ ಭಾಗ್ಯ ಕೂಡಿಬಂದಿದ್ದು, 13 ಮಂದಿ ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯನಿರ್ವಹಿಸಬೇಕಾದ ಜಾಗದಲ್ಲಿ ಕೇವಲ 7 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನುಳಿದ ಸಿಬ್ಬಂದಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಇಲ್ಲಿ ಒಬ್ಬರು ಉಪ ತಹಶೀಲ್ದಾರ್‌, ರಾಜಸ್ವ ನಿರೀಕ್ಷಕ ವಿಷಯ ನಿರ್ವಾಹಕರ ಒಬ್ಬರು, ಇಬ್ಬರು ಆಪರೇಟರ್‌, ಡಿ-ಗ್ರೂಪ್‌ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ.

ಸೇವೆಗಳು: ಪ್ರಸ್ತುತ ನಾಡ ಕಚೇರಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಸಹಿತ ಎಲ್ಲಾ ವಿಧವಾದ ದೃಢೀಕರಣ ಪತ್ರಗಳು, ರೈತರಿಗೆ ಪಹಣಿ, ಮುಟೇಷನ್‌, ಸರ್ವೇ ಪ್ರತಿಗಳು ಸೇವೆ ಲಭಿಸುತ್ತಿದೆ.

ಜಂಗಮಕೋಟೆಯಲ್ಲಿಯ ನಾಡ ಕಚೇರಿಯನ್ನು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್‌.ಮುನಿಸ್ವಾಮಿ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನಸಭೆಯ ಉಪಾಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ, ಜಿಪಂ ಅಧ್ಯಕ್ಷ ಹೆಚ್‌.ವಿ.ಮಂಜುನಾಥ್‌, ವಿಧಾನ ಪರಿಷತ್‌ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚೌಡರೆಡ್ಡಿ ತೋಪಲ್ಲಿ, ಸಿ.ಆರ್‌.ಮನೋಹರ್‌, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಜಿಪಂ ಸಿಇಒ ಫೌಝೀಯಾ ತರಾನ್ನುಮ್‌, ಜಿಪಂ ನಿರ್ಮಲಾ, ತಾಪಂ ಅಧ್ಯಕ್ಷ ಜಿ.ವಿ.ನಾರಾಯಣಸ್ವಾಮಿ, ಜಿಪಂ ಸದಸ್ಯೆ ತನುಜಾ, ಜಂಗಮಕೋಟೆ ಗ್ರಾಪಂ ಅಧ್ಯಕ್ಷೆ ರಹಮತ್‌ಜಾನ್‌ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಗ್ರಾಮಾಂತರ ಪ್ರದೇಶದ ಜನರಿಗೆ ಸುಲಭವಾಗಿ ಸರ್ಕಾರಿ ಸೇವೆಗಳು ಲಭಿಸಬೇಕೆಂಬ ಉದ್ದೇಶದೊಂದಿಗೆ ನಿರ್ಮಿಸಿರುವ ಪರಿಸರ ಸ್ನೇಹಿ ಕಟ್ಟಡದಿಂದ ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಲಭಿಸಲಿದೆ. ಮಾದರಿ ಕಟ್ಟಡವನ್ನು ನಿರ್ಮಿಸಲು ಬೆಂಗಳೂರಿನ ಐಐಎಸ್‌ಸಿ ಅವರಿಂದ ತಾಂತ್ರಿಕ ಸಲಹೆ ಪಡೆದು ಕಟ್ಟಡ ನಿರ್ಮಿಸಿದ್ದೇವೆ.
-ಅನಿರುದ್ಧ್ ಶ್ರವಣ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.