4 ಗ್ರಾಪಂ ಸೇರಿ 54 ಸಾನಗಳಿಗೆ ಚುನಾವಣೆ


Team Udayavani, Dec 13, 2018, 3:54 PM IST

chikk-2.jpg

ಚಿಕ್ಕಬಳ್ಳಾಪುರ: ಐದು ವರ್ಷಗಳ ಅಧಿಕಾರ ಅವಧಿ ಮುಕ್ತಾಯಗೊಂಡಿರುವ ಜಿಲ್ಲೆಯ 4 ಗ್ರಾಪಂಗಳ ಒಟ್ಟು 48 ಸದಸ್ಯ ಸ್ಥಾನಗಳಿಗೆ ಹಾಗು ವಿವಿಧ ಕಾರಣಗಳಿಗೆ ತೆರವಾಗಿರುವ ವಿವಿಧ ಗ್ರಪಂಗಳ 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣಾ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದ್ದು, ಮುಂದಿನ ತಿಂಗಳ ಹೊಸ ವರ್ಷದ ಜನವರಿ 2 ರಂದು ಒಟ್ಟು 54 ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

4 ಗ್ರಾಪಂ ಎಲ್ಲಲ್ಲಿ? ಅವಧಿ ಮುಗಿದ ಗ್ರಾಪಂಗಳ ಪೈಕಿ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಭಕ್ತರಹಳ್ಳಿ ಗ್ರಾಪಂನಲ್ಲಿ ಒಟ್ಟು 10 ಸದಸ್ಯ ಕ್ಷೇತ್ರಗಳು, ಮಳಮಾಚನಹಳ್ಳಿ ಗ್ರಾಪಂ (14), ಹೊಸಪೇಟೆ ಗ್ರಾಪಂ (17) ಹಾಗೂ ನಾಗಮಂಗಲ ಗ್ರಾಪಂ (7) ಸದಸ್ಯ ಸ್ಥಾನಗಳು ಸೇರಿ ಒಟ್ಟು 48 ಗ್ರಾಪಂ ಸದಸ್ಯ ಸ್ಥಾನಗಳಿಗೆ ಜನವರಿ 2 ರಂದು ಚುನಾವಣೆ ನಡೆಯಲಿದೆಯೆಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಅನಿರುದ್ದ ಶ್ರವಣ್‌ ತಿಳಿಸಿದ್ದಾರೆ.

6 ಕ್ಷೇತ್ರಗಳಿಗೆ ಉಪ ಚುನಾವಣೆ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ತೆರವಾಗಿರುವ ಒಟ್ಟು 6 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆ ಪೈಕಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಕಾಪುರ ಗ್ರಾಪಂನ ನಂದಿಗಾನಹಳ್ಳಿ ಕ್ಷೇತ್ರ, ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಪಂ ಗೊಲ್ಲಹಳ್ಳಿ ಕ್ಷೇತ್ರ, ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಪಂಯ ಬೂರಗಮಾಕಲಹಳ್ಳಿ ಕ್ಷೇತ್ರ, ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಪಂನ ಜಂಬಿಗೇಮರದಹಳ್ಳಿ ಮತ್ತು ಸೋಮೇಶ್ವರ ಕ್ಷೇತ್ರಗಳಿಗೆ ಹಾಗೂ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವರಗುಡಿಪಲ್ಲಿ ಕ್ಷೇತ್ರ ಸೇರಿ ಒಟ್ಟು 06 ಸದಸ್ಯ ಸ್ಥಾನಗಳನ್ನು ತುಂಬುವ ಸಲುವಾಗಿ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
 
ಚುನಾವಣಾ ವೇಳಾ ಪಟ್ಟಿ ಹೀಗಿದೆ: ಡಿ.17 ರಿಂದ 20ರ ಮದ್ಯಾಹ್ನ 3 ಗಂಟೆಯವರೊ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಬಹುದಾಗಿದೆ. ಡಿ.21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಡಿ.24 ರಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ, ಅವಶ್ಯಕತೆ ಇದ್ದಲ್ಲಿ ಜನವರಿ 2 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆಯೆಂದು ಡೀಸಿ ಅನಿರುದ್‌ಶ್ರವಣ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಜ. 2 ರಂದು ನಡೆಯುವ ವಿವಿಧ ಗ್ರಾಪಂಗಳ ಚುನಾವಣೆಯ ಮತ ಎಣಿಕೆಯನ್ನು ಆಯಾ ತಾಲೂಕು ಕೇಂದ್ರಗಳಲ್ಲಿ ಜನವರಿ 4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ನಡೆಸಿ ಎಣಿಕೆ ಬಳಿಕ ಫ‌ಲಿತಾಂಶ ಪ್ರಕಟಗೊಳ್ಳಲಿದೆ.

ಜಿಲ್ಲೆಯಲ್ಲಿ ಅವಧಿ ಮುಗಿಯಲಿರುವ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ, ಮಳಮಾಚನಹಳ್ಳಿ, ಹೊಸಪೇಟೆ ಮತ್ತು ನಾಗಮಂಗಲ ಒಟ್ಟು 48 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ಹಾಗು ವಿವಿಧ ಕಾರಣಗಳಿಂದ ತೆರವಾಗಿರುವ 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜನವರಿ 2 ರಂದು ನಿಗಧಿಪಡಿಸಲಾಗಿದೆ. ಜ.4ಕ್ಕೆ ಚುನಾವಣಾ ಫ‌ಲಿತಾಂಶ ಹೊರ ಬರಲಿದೆ. ಈ ಬಾರಿ ಅವಧಿ ಮುಗಿದ ಗ್ರಾಪಂಗಳಲ್ಲಿ ಮಲ್ಟಿಚಾಯ್ಸ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗುತ್ತಿದೆ. 
ಅನಿರುದ್ಧ ಶ್ರವಣ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.