Electrification work: ಕುಂಟುತ್ತಾ ಸಾಗಿದೆ ವಿದ್ಯುದ್ದೀಕರಣ ಕಾರ್ಯ
Team Udayavani, Aug 20, 2023, 4:44 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ರೈಲ್ವೆ ಸಂಚಾರವನ್ನು ಸಂಪೂರ್ಣ ವಿದ್ಯುದ್ದೀಕರಣಗೊಳಿಸುವ ಕಾಮಗಾರಿ ಆರಂಭಗೊಂಡ ವರ್ಷಗಳೇ ಉರುಳಿದರೂ, ಇನ್ನೂ ಕಾಮಗಾರಿ ಮಾತ್ರ ಕುಂಟುತ್ತಾ ಸಾಗಿರುವುದು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ಹೌದು, ಯಲಹಂಕದಿಂದ ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ವಯಾ ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸದಿಂದ ಕೋಲಾರದವರೆಗೂ ರೈಲು ಸಂಚಾರವನ್ನು ವಿದ್ಯುದ್ದೀಕರಣಗೊಳಿಸುವ ಮಹತ್ವಕಾಂಕ್ಷಿ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳ್ಳದೇ ಇರುವುದು ರೈಲ್ವೆ ಪ್ರಯಾಣಿಕರಲ್ಲಿ ತೀವ್ರ ಬೇಸರ ಮೂಡಿಸಿದೆ.
ಜಿಲ್ಲೆಯ ಪಾಲಿಗೆ ಬೆರಣಿಕೆಯಷ್ಟು ರೈಲು ಸಂಚಾರ ಬಿಟ್ಟರೆ ನಿರೀಕ್ಷಿತ ಮಟ್ಟದಲ್ಲಿ ರೈಲುಗಳು ಸಂಚಾರ ಇಲ್ಲ. ಅದರಲ್ಲೂ ರಾಜಧಾನಿ ಬೆಂಗಳೂರಿಗೆ ಸನಿಹದಲ್ಲಿದ್ದರೂ, ಚಿಕ್ಕಬಳ್ಳಾಪುರ ಜಿಲ್ಲೆಯ ನೀರಾವರಿ, ಕೈಗಾರಿಕೆ, ಪ್ರವಾಸೋದ್ಯಮದಲ್ಲಿ ಹಿಂದುಳಿದಂತೆ ರೈಲ್ವೆ ಸೌಲಭ್ಯದಲ್ಲೂ ತೀರಾ ಹಿಂದುಳಿದಿದೆ. ಆದರೆ, ಕೇಂದ್ರ ಸರ್ಕಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾದು ಹೋಗುವ ರೈಲು ಸಂಚಾರವನ್ನು ಸಂಪೂರ್ಣ ವಿದ್ಯುದ್ದೀಕರಣಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡಿರುವುದು ಜಿಲ್ಲೆಯ ಸಾರ್ವಜನಿಕರಲ್ಲಿ ಸಂತಸ ಮೂಡಿದರೂ, ಬರೋಬ್ಬರಿ ಎರಡು ವರ್ಷದಿಂದ ಕಾಮಗಾರಿ ಮಾತ್ರ ಗುರಿ ತಲುಪದೇ ರೈಲ್ವೆ ಪ್ರಯಾಣಿಕರಲ್ಲಿ ಬೇಸರ ಮೂಡಿಸಿದೆ.
ಶಿಡ್ಲಘಟ್ಟದಿಂದ ಕಾಮಗಾರಿ ಬಾಕಿ: ಈಗಾಗಲೇ ವಿದ್ಯುದ್ದೀಕರಣ ಕಾಮಗಾರಿ ಯಲಹಂಕದಿಂದ ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರದವರೆಗೂ ಪೂರ್ಣಗೊಂಡಿದ್ದರೂ, ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ ಕೋಲಾರದವರೆಗೂ ಕಾಮಗಾರಿ ಪ್ರಗತಿಯಲ್ಲಿ ಸಾಗಿದ್ದು, ಕಾಮಗಾರಿ ಮುಗಿಯಲು ಎಷ್ಟು ವರ್ಷ ಬೇಕು ಎನ್ನುವ ಪ್ರಶ್ನೆ ರೈಲ್ವೆ ಪ್ರಯಾಣಿಕರದಾಗಿದೆ. 2023ರ ಜನವರಿ ತಿಂಗಳಲ್ಲಿಯೇ ಕಾಮಗಾರಿ ಮುಗಿದು ಸೇವೆಗೆ ಸಿದ್ದಗೊಳ್ಳಬೇಕಿತ್ತು. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗಿರುವುದರಿಂದ ಕಾಮಗಾರಿ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.
ಪ್ರತಿ ದಿನ ಎರಡು ರೈಲು ಸಂಚಾರ: ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಬಿಟ್ಟರೆ ವೇಗದೂತ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ಇಲ್ಲ. ಈ ಹಿಂದೆ ಅಂದರೆ 2019ರ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಯಶವಂತಪುರದಿಂದ ಚಿಕ್ಕಬಳ್ಳಾಪುರ ವಯಾ ಕೋಲಾರದ ಮೂಲಕ ದೆಹಲಿಗೆ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತಿತ್ತು. ಆದರೆ, ಚುನಾವಣೆ ಮುಗಿದ ಬೆನ್ನಲೇ ನಿಜಾಮುದ್ದೀನ್ ರೈಲು ಸಂಚಾರವನ್ನು ನಿಲ್ಲಿಸಲಾಯಿತು. ಸದ್ಯಕ್ಕೆ ಪ್ಯಾಸೆಂಜರ್ ರೈಲುಗಳು ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ಸೂಕ್ತ ಮೂಲ ಸೌಕರ್ಯಗಳಿಲ್ಲ. ಕನಿಷ್ಠ ವಿದ್ಯುದ್ದೀಕರಣ ಕಾಮಗಾರಿ ಮುಗಿದು ಇನ್ನಷ್ಟು ಚಿಕ್ಕಬಳ್ಳಾಪುರ ಮೂಲಕ ತಿರುಪತಿ, ಚಿತ್ತೂರು, ಮದನಪಲ್ಲಿ, ಕೋಲಾರ, ದೆಹಲಿಗೆ ಸಂಪರ್ಕ ಕಲ್ಪಿಸುವ ರೈಲುಗಳು ಸಂಚಾರ ಆರಂಭಿಸಿದರೆ ಈ ಭಾಗದ ರೈತಾಪಿ ಜನರಿಗೆ, ಉದ್ಯೋಗ ಆರಿಸಿ ಹೋಗುವ ಕೂಲಿ ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಬಗ್ಗೆ ಜಿಲ್ಲೆಯ ಸಂಸದರು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸಿ ಸದ್ಯ ಕುಂಟುತ್ತಾ ಸಾಗಿರುವ ಜಿಲ್ಲೆಯ ರೈಲ್ವೆ ವಿದ್ಯದ್ದೀಕರಣ ಕಾಮಗಾರಿ ತ್ವರಿತವಾಗಿ ಮುಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕಿದೆ.
ವಿದ್ಯುದ್ದೀಕರಣಗೊಂಡರೆ ಹೆಚ್ಚಿನ ರೈಲು ಸಂಚಾರ ನಿರೀಕ್ಷೆ :
ಜಿಲ್ಲೆಯಲ್ಲಿ ರೈಲ್ವೆ ಸಂಚಾರಕ್ಕೆ ಆಧುನಿಕ ಸ್ಪರ್ಶ ನೀಡಿ ಕೋಟ್ಯಾಂತರ ರೂ. ವೆಚ್ಚ ಮಾಡಿ ಯಲಹಂಕದಿಂದ ದೇವನಹಳ್ಳಿ ಮಾರ್ಗವಾಗಿ ವಯಾ ಚಿಕ್ಕಬಳ್ಳಾಪುರ ಮೂಲಕ ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ, ಕೋಲಾರವರೆಗೂ ಅಲ್ಲಿಂದ ಬಂಗಾರಪೇಟೆವರೆಗೂ ಸಂಪೂರ್ಣ ರೈಲು ಸಂಚಾರವನ್ನು ವಿದ್ಯುದ್ದೀಕರಣ ಮಾಡಲಾಗುತ್ತಿದೆ. ಕಾಮಗಾರಿ ಮುಗಿದ ಬಳಿಕ ಇನ್ನಷ್ಟು ರೈಲುಗಳು ಚಿಕ್ಕಬಳ್ಳಾಪುರದ ಮೂಲಕ ಸಂಚರಿಸುವ ಆಶಾಭಾವನೆಯನ್ನು ಜಿಲ್ಲೆಯ ಜನತೆ ಹೊಂದಿದ್ದಾರೆ. ಜಿಲ್ಲೆಯ ಗೌರಿಬಿದನೂರು ಬಿಟ್ಟರೆ ಹೆಚ್ಚಿನ ರೈಲ್ವೆ ಸೌಕರ್ಯ ಯಾವ ತಾಲೂಕಿಗೂ ಇಲ್ಲ. ಕೋಲಾರ ಜಿಲ್ಲೆಯಲ್ಲಿ ಕೂಡ ಬಂಗಾರಪೇಟೆ, ಕೆಜಿಎಫ್ ಬಿಟ್ಟರೆ ಹೆಚ್ಚು ರೈಲು ಸಂಚಾರ ಇಲ್ಲ. ಹೀಗಾಗಿ ಚಿಕ್ಕಬಳ್ಳಾಪುರದಿಂದ ಕೋಲಾರದವರೆಗೂ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ಮುಗಿದರೆ ಬಳಿಕ ಹೆಚ್ಚು ರೈಲುಗಳ ಓಡಾಟ ಆಗಲಿದೆಂಬ ನಿರೀಕ್ಷೆ ಈ ಭಾಗದ ಜನರಲ್ಲಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ ಮೂಲಕ ತಿರುಪತಿ, ದೆಹಲಿಗೆ ರೈಲು ಸೌಲಭ್ಯ ಬೇಕಿದೆ. ಈಗಾಗಲೇ ಬಂಗಾರಪೇಟೆ ಮೂಲಕ ತಿರುಪತಿಗೆ ಸಂಚರಿಸು ರೈಲು ಚಿಕ್ಕಬಳ್ಳಾಪುರದ ಮೂಲಕ ಹಾದು ಹೋಗಬೇಕೆಂಬ ಒತ್ತಾಯ ಇದೆ.
ಈಗಾಗಲೇ ಯಲಹಂಕದಿಂದ ವಯಾ ದೇವನಹಳ್ಳಿ ಮೂಲಕ ಚಿಕ್ಕಬಳ್ಳಾಪುರದವರೆಗೂ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ಶಿಡ್ಲಘಟ್ಟದಿಂದ ವಯಾ ಚಿಂತಾಮಣಿ, ಶ್ರೀನಿವಾಸಪುರ, ಕೋಲಾರದವರೆಗೂ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿ ತ್ವರಿತವಾಗಿ ಮುಗಿಸಲು ಸಂಬಂಧ ಪಟ್ಟವರ ಗಮನಕ್ಕೆ ತರಲಾಗುವುದು.-ಡಾ.ಜಿ.ವಿ.ಮಂಜುನಾಥ, ಕೇಂದ್ರೀಯ ರೈಲ್ವೆ ಪ್ರಯಾಣಿಕರ ಸೌಲಭ್ಯ ಸಮಿತಿ ಸದಸ್ಯರು, ಚಿಕ್ಕಬಳ್ಳಾಪುರ.
-ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.