ಬಿಸಿಯೂಟ ನೌಕರರಿಗೆ ನಾಲ್ಕು ತಿಂಗಳಿಂದ ವೇತನ ಇಲ್ಲ
ಸಾಲ ಮಾಡಿ ಜೀವನ ಸಾಗಿಸುತ್ತಿರುವ ನೌಕರರು ; ಇತ್ತ ಉದ್ಯೋಗ ಇಲ್ಲ, ವೇತನವೂ ಇಲ್ಲದೆ ಪರದಾಟ
Team Udayavani, Aug 11, 2021, 4:40 PM IST
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಸಿಯೂಟ ನೌಕರರು ಸೇವಾ ಭದ್ರತೆ, ಸಕಾಲದಲ್ಲಿ ವೇತನ ಪಾವತಿಸಲು ಪ್ರತಿಭಟನೆ ನಡೆಸಿದ್ದರು.(ಸಂಗ್ರಹ ಚಿತ್ರ).
ಚಿಕ್ಕಬಳ್ಳಾಪುರ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಬಂದ್ ಮಾಡಿದ್ದರಿಂದ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡಿದೆ. ಅಡುಗೆ ಸಿಬ್ಬಂದಿಗೆ
ಕಳೆದ 4 ತಿಂಗಳಿಂದ ವೇತನ ಇಲ್ಲದೆ ಬದುಕಿನ ಬಂಡಿ ನೂಕಲು ಪರದಾಡುವಂತಾಗಿದೆ. ಜಿಲ್ಲೆಯ ಶಿಡ್ಲಘಟ್ಟ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ ತಾಲೂಕುಗಳಲ್ಲಿ 2735 ಅಡುಗೆ ಮಾಡುವ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಕಳೆದ ಏಪ್ರಿಲ್ ತಿಂಗಳಿಂದ ಅವರಿಗೆ ವೇತನ ಭಾಗ್ಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಾಲ ಮಾಡುವ ಪರಿಸ್ಥಿತಿ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡರೂ ಶಾಲೆಯಲ್ಲಿ ದಾಖಲಾದ ಮಕ್ಕಳಿಗೆ ಆಹಾರ ಧಾನ್ಯ ಪೂರೈಕೆ ಮಾಡುವ ಕಾರ್ಯದಲ್ಲಿ ಶಿಕ್ಷಕರೊಂದಿಗೆ ಅಡುಗೆ ಮಾಡುವ ಸಿಬ್ಬಂದಿಯೂ ಕೈಜೋಡಿಸಿದ್ದಾರೆ. ವಿದ್ಯಾರ್ಥಿಗಳ ಮನೆಯ ಬಾಗಿಲಿಗೆ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು. ಆದರೂ, ಸರ್ಕಾರ ಕಳೆದ ಏಪ್ರಿಲ್ ತಿಂಗಳಿಂದ ಅವರಿಗೆ ವೇತನ ಪಾವತಿಸಿಲ್ಲ. ಇದರಿಂದ ಅಡುಗೆ ಮಾಡುವ ಸಿಬ್ಬಂದಿಯವರು ಕುಟುಂಬ ನಿರ್ವಹಣೆಗಾಗಿ ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ:ಆನಂದ ಸಿಂಗ್ ಭೇಟಿ ವಿಚಾರದಲ್ಲಿ ಮಾಹಿತಿ ಬಿಟ್ಟು ಕೊಡದ ಸ್ಪೀಕರ್
ಮಧ್ಯಾಹ್ನದ ಬಿಸಿಯೂಟದ ಯೋಜನೆ ಯಾವುದೇ ರೀತಿಯ ಲೋಪವಿಲ್ಲದೆ ಅನುಷ್ಠಾನ ಮಾಡಲು ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ
ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸಲು ಈ ಹಿಂದೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸೇವಾ ಭದ್ರತೆ, ವೇತನವನ್ನು ನಿಗ ದಿತ ಅವಧಿಯಲ್ಲಿ ಪಾವತಿಸಲು ಮನವಿ ಸಹ ಸಲ್ಲಿಸಿದ್ದಾರೆ. ಆದರೆ, ಸರ್ಕಾರ ತನ್ನ ಯೋಜನೆಗಳನ್ನು ಪರಿಣಾಮಕಾರಿಯಾಗಿ
ಅನುಷ್ಠಾನಗೊಳಿಸಲು ಬಿಸಿಯೂಟ ನೌಕರರನ್ನು ಬಳಸಿಕೊಂಡಿದೆಯೇ ವಿನಃ, ಅವರಿಗೆ ಸಕಾಲದಲ್ಲಿ ವೇತನ ಪಾವತಿಸಲು ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಅಸಮಾಧಾನ ಕೇಳಿ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2735 ಬಿಸಿಯೂಟ ನೌಕರರು ಇದ್ದಾರೆ. ಮಾರ್ಚ್‌ವರೆಗೆ ವೇತನ ಪಾವತಿಯಾಗಿಲ್ಲ. ಸರ್ಕಾರದಿಂದ ಮಂಜೂರಾದ ತಕ್ಷಣ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.
-ಶೈಲಾ, ಶಿಕ್ಷಣಾಧಿಕಾರಿ, ಅಕ್ಷರ ದಾಸೋಹ
ಬಿಸಿಯೂಟ ಯೋಜನೆ
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲ. ಕುಟುಂಬ ನಿರ್ವಹಣೆಕಷ್ಟ ವಾಗಿದೆ.ಕಳೆದ ಸಾಲಿನಲ್ಲಿ ಶಾಲೆಗಳು ಸ್ಥಗಿತಗೊಂಡರೂ ಮಾರ್ಚ್‌ವರೆಗೆ ವೇತನ ಪಾವತಿಸಲಾಗಿದೆ. ನಂತರ ವೇತನ ಪಾವತಿಯಾಗಿಲ್ಲ, ಸರ್ಕಾರ ಕೂಡಲೇ ವೇತನ ಪಾವತಿಸಲು ಕ್ರಮಕೈಗೊಳ್ಳಬೇಕು.
-ಕೆ.ಎಸ್.ಮಂಜುಳಾ, ಕಾರ್ಯದರ್ಶಿ,
ಬಿಸಿಯೂಟ ನೌಕರರ ಸಂಘ
-ಎಂ.ಎ.ತಮೀಮ್ ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.