ಜಿಲ್ಲೆಗಳಲ್ಲಿ ಉದ್ಯೋಗಾಧಾರಿತ ತರಬೇತಿ ಕೇಂದ್ರ
ನೇಕಾರರಿಗೆ ಇಲಾಖೆಯಿಂದ ಗುರುತಿನ ಚೀಟಿ ; ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ
Team Udayavani, Aug 6, 2020, 10:58 AM IST
ಶಿಡ್ಲಘಟ್ಟ: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ತರಬೇತಿ ಕೇಂದ್ರ ತೆರೆಯಲು ಚಿಂತನೆ ನಡೆಸಲಾಗುತ್ತಿದೆ ಎಂದು ಜವಳಿ, ಕೈಮಗ್ಗ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ
ಬಾಳಸಾಹೇಬ ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದರು. ರಾಜ್ಯದಲ್ಲಿ 1.25 ಲಕ್ಷ ನೇಕಾರರಿದ್ದು, ಇವರಿಗೆ ಮುಂದಿನ ದಿನಗಳಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರರಿಗೆ ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಪ್ರತಿ ಜಿಲ್ಲೆಯಲ್ಲಿ
ಉದ್ಯೋಗ ಆಧಾರಿತ ಶಿಕ್ಷಣ ತರಬೇತಿ ಕೇಂದ್ರ
ತೆರೆದು ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.
7.81ಲಕ್ಷ ರೂ. ಅನುದಾನ: ನೇಕಾರ್ ಸಮ್ಮಾನ್ ಯೋಜನೆಯಡಿ ನೇಕಾರರಿಗೆ 2000 ಸಾವಿರ ರೂ. ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ರಾಜ್ಯಾದ್ಯಂತ 54 ಸಾವಿರ ಕೈಮಗ್ಗ ನೇಕಾರರಿದ್ದಾರೆ. ಇದರ ಪೈಕಿ 41 ಸಾವಿರ ಅರ್ಜಿಗಳು ಬಂದಿದ್ದು, 39
ಸಾವಿರ ಕೈಮಗ್ಗ ನೇಕಾರರಿಗೆ ಧನ ಸಹಾಯ ನೀಡಲು ರಾಜ್ಯ ಸರ್ಕಾರ 7.81ಲಕ್ಷ ರೂ. ಅನುದಾನ ಬಿಡುಗಡೆ ಮಾಡಿ ನೇಕಾರರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು
ಹೇಳಿದರು.ರಾಜ್ಯದಲ್ಲಿ 1.25 ಲಕ್ಷ ಪವರ್ ಲೂಮ್ ನೇಕಾರರಿದ್ದು, 47 ಸಾವಿರ ಅರ್ಜಿ ಗಳು ಬಂದಿವೆ. 42 ಸಾವಿರ ಜನರಿಗೆ ಒಬ್ಬರಿಗೆ 2000 ರೂ.ನಂತೆ 6.44 ಕೋಟಿ ರೂ. ಬಿಡುಗಡೆ ಮಾಡಿ ನೇಕಾರರ ಖಾತೆಗಳಿಗೆ ಜಮೆ
ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಜವಳಿ ಮತ್ತು ಕೈಮಗ್ಗ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 790 ಕೈಮಗ್ಗಗಳು, 1342 ವಿದ್ಯುತ್ ಕೈಮಗ್ಗಗಳು, 11 ಜವಳಿ ಘಟಕಗಳು, 12 ಕೈಮಗ್ಗ ಸಹಕಾರ ಸಂಘಗಳು, ಜವಳಿ ನೀತಿ ಅಡಿ 6 ತರಬೇತಿ ಕೇಂದ್ರಗಳಿವೆ ಹಾಗೂ ಜಿಲ್ಲೆಯ ವ್ಯಾಪ್ತಿಯಲ್ಲಿ 1000 ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಗಳಿವೆ ಎಂದು
ಹೇಳಿದರು.
ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಕೈಮಗ್ಗ, ಜವಳಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇ ಶಕ ಪಾಷಾ, ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಾಕಾಂತ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮುನಿಯಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾಧಿಕಾರಿ ಶರೀಫ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.