ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನವಕಾಶ

Team Udayavani, Mar 10, 2020, 3:00 AM IST

yella-khsetra

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾದ ಸಹಕಾರ, ಬೆಂಬಲ ಸಿಗುತ್ತಿದೆ. ಆದರೆ, ಲೈಂಗಿಕ ದೌರ್ಜನ್ಯ, ಕಿರುಕುಳ, ಬಲತ್ಕಾರದ ಪ್ರಕರಣಗಳಿಂದ ಮಹಿಳೆ ಅಬಲೆಯಾಗುತ್ತಿದ್ದಾಳೆ. ಇಂತಹ ಸ್ಥಿತಿ ನಿರ್ಮಾಣವಾಗುವುದು ಬೇಡ. ಮಹಿಳೆಯರಿಗೆ ಸಮಾನ ಸ್ಥಾನದ ಜೊತೆ ಗೌರವ ಕೊಡಬೇಕಾಗಿರುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ತಿಳಿಸಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವೊಬ್ಬ ಹೆಣ್ಣು ಮಗುವು ಕೂಡ ಶಿಕ್ಷಣದಿಂದ ಹಿಂದೆ ಸರಿಯಬಾರದು. ಕಡ್ಡಾಯವಾಗಿ ಶಿಕ್ಷಣ ಪಡೆದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವೆಂದರು.

3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಸಿ.ಭಾನುಮತಿ ಮಾತನಾಡಿ, ಯಾರ ಹೊಗಳಿಕೆಗೆ ಒಳಗಾಗದೇ ನಾಲ್ಕು ಗೋಡೆಗಳ ಮಧ್ಯೆ ಇದ್ದುಕೊಂಡೇ ದಿನ ಪೂರ್ತಿ ಮನೆ ಕೆಲಸ ಮಾಡುವ ಗೃಹಿಣಿಯರು ಕೂಡ ಸಾಧನೆ ಮಾಡಿದ ಮಹಿಳೆಯರ ಗುಂಪಿಗೆ ಸೇರುತ್ತಾರೆ ಎಂದರು. ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಸಿ.ಜೆ.ಎಂ ರೂಪಾ ಕೆ.ಎನ್‌. ಮಾತನಾಡಿ, ಇಂದಿನ ಮಹಿಳೆಯರು ವಿವಿಧ ವೃತ್ತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ. ಜೊತೆಗೆ ಮನೆಯ ನಿರ್ವಹಣೆಯನ್ನು ಶಾಂತಿಯುತವಾಗಿ ನಿಭಾಯಿಸಬಲ್ಲರು ಎಂದರು.

ಕೀಳರಿಮೆ ಇರಬಾರದು: ಅಪರ ಜಿಲ್ಲಾಧಿಕಾರಿ ಆರತಿ ಮಾತನಾಡಿ, ಬಲಿಷ್ಠ ಸಮಾಜ ಕಟ್ಟುವಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯ ಹಾಗೂ ಮಹಿಳೆ ತನ್ನ ಕುಟುಂಬದಲ್ಲಿ ತಾಯಿ, ಮಗಳು, ಸೊಸೆ ಸೇರಿದಂತೆ ಪ್ರಮುಖ ಪಾತ್ರ ನಿರ್ವಹಿಸುತ್ತಾಳೆ. ಉತ್ತಮ ಸಮಾಜ ನಿರ್ಮಾಣಕ್ಕೆ ಗಂಡು ಹೆಣ್ಣು ಎಂಬ ಕೀಳರಿಮೆ ಇರಬಾರದು ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹೆಚ್‌.ದೇವರಾಜ್‌, 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮಾಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್‌.ತಮ್ಮೇಗೌಡ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವಿ. ವಿನೋದ್‌ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಲಕ್ಷಿದೇವಮ್ಮ ಉಪಸ್ಥಿತರಿದ್ದರು.

8 ಮಂದಿಗೆ ಅಸಾಧಾರಣ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದಲ್ಲಿ 2019-20 ಸಾಲಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಸಾಧಾರಣ ಮಕ್ಕಳಾದ ಸುಚಲ್‌ ಪಿ.ಜಿ., ಕೆ.ವಿ.ಶ್ರೀತಾ, ನಿಶ್ಚಲ್‌ರಾಮ್‌, ಭೂಮಿಕಾ ಹೆಚ್‌.ಆರ್‌., ಯಶ್ವಂತ್‌ ಎಸ್‌., ಗಣೇಶ್ವರ ಬಿ.ಎಂ., ಸಿರಿ ಎಂ.ಭಟ್‌, ಶ್ರಾವ್ಯ ಪಿ.ವಿ.ಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ತಲಾ 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಮಹಿಳೆಯರ ಪೌಷ್ಟಿಕತೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ಆಯೋಜಿಸಿದ್ದ ಪೋಷಣ್‌ ಅಭಿಯಾನವು ಉತ್ತಮವಾದ ಕಾರ್ಯವನ್ನು ನಿರ್ವಹಿಸಿದೆ. ಇದರಿಂದ ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮಹಿಳೆಯರು ಪೌಷ್ಟಿಕರಾಗಿ ಹೊರಹೊಮ್ಮಿದ್ದಾರೆ. ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರಿಗೆ ಆಗುತ್ತಿರುವ ಮಾನಸಿಕ ಹಾಗೂ ದೈಹಿಕ ಕಿರುಕುಳಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ಅಗತ್ಯ ಇದೆ.

-ಬಿ.ಫೌಝೀಯಾ ತರುನ್ನುಮ್‌, ಜಿಪಂ ಸಿಇಒ

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.