ಚಿಕ್ಕಬಳ್ಳಾಪುರಕ್ಕೆ ಇಎಸ್‌ಐ ಆಸ್ಪತ್ರೆ ಮಂಜೂರು

Team Udayavani, May 21, 2022, 3:20 PM IST

ಚಿಕ್ಕಬಳ್ಳಾಪುರಕ್ಕೆ ಇಎಸ್‌ಐ ಆಸ್ಪತ್ರೆ ಮಂಜೂರು

ಚಿಕ್ಕಬಳ್ಳಾಪುರ: ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ದೆಹಲಿಯ ಕಾರ್ಮಿಕಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಸಿಂಗ್‌ ಯಾದವ್‌ ಅವರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐಆಸ್ಪತ್ರೆ ಮಂಜೂರು ಮಾಡುವ ಪ್ರಕ್ರಿಯೆಗೆ ತಕ್ಷಣವೇಚಾಲನೆ ನೀಡುವಂತೆ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉನ್ನತ ಮಟ್ಟದ ಸಭೆಗೂ ಮುನ್ನ ಸಚಿವ ಯಾದವ್‌ಅವರನ್ನು ಭೇಟಿ ಮಾಡಿದ್ದ ರಾಜ್ಯದ ಆರೋಗ್ಯ ಮತ್ತುವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಆಸ್ಪತ್ರೆ ಆರಂಭಿಸುವಂತೆ ಮನವಿ ಸಲ್ಲಿಸಿದರು. ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಕಾರ್ಮಿಕರು ಮತ್ತು ಅವರಅವಲಂಬಿತರಿದ್ದಾರೆ. ಅವರಿಗೆ ಗುಣಮಟ್ಟದಆರೋಗ್ಯ ಸೇವೆ ದೊರಕಿಸುವ ನಿಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಗತ್ಯವಿದೆ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಸುಧಾಕರ್‌ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್‌ ಕೂಡಲೇ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಸುಧಾಕರ್‌, ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳಮೂಲ ಸೌಕರ್ಯ ಅಭಿವೃದ್ಧಿಗೆ ಆರೋಗ್ಯ ಮತ್ತುವೈದ್ಯಕೀಯ ಶಿಕ್ಷಣ ಸಚಿವನಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ಮೆಡಿಕಲ್‌ಕಾಲೇಜು ಸ್ಥಾಪನೆ, ಜಿಲ್ಲಾ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಅಭಿವೃದ್ಧಿ, ಹೊಸ ತಾಯಿ-ಮಗುವಿನ ಆಸ್ಪತ್ರೆನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ ಎಂದರು.

ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವುದರಿಂದ ದೊಡ್ಡ ಸಂಖ್ಯೆಯಲ್ಲಿಕಾರ್ಮಿಕರು ಪ್ರತಿನಿತ್ಯ ಸಂಚರಿಸುತ್ತಾರೆ. ಜತೆಗೆ ದೊಡ್ಡ ಸಂಖ್ಯೆಯ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲೆಯಲ್ಲಿ ದುಡಿಯುತ್ತಿದ್ದಾರೆ.

ಹಾಗೆಯೇ ಜಿಲ್ಲೆ ಮತ್ತು ತಾಲೂಕು ಕೇಂದ್ರ ದಲ್ಲಿ ಕೈಗಾರಿಕೆಗಳಿವೆ ಮತ್ತು ಹೊಸದಾಗಿ ಅನೇಕ ಕೈಗಾರಿಕೆಗಳು ತಲೆ ಎತ್ತುತ್ತಿವೆ. ಇಂತಹ ಸ್ಥಿತಿಯಲ್ಲಿ ಕಾರ್ಮಿಕರು ಮತ್ತು ಅವರನ್ನು ಅವಲಂಬಿಸಿರುವ ಕುಟುಂಬಗಳ ಸದಸ್ಯರು ಬೆಂಗಳೂರಿಗೆ ತೆರಳಿ ಇಎಸ್‌ಐ ಆಸ್ಪತ್ರೆ ಸೌಲಭ್ಯ ಪಡೆಯುವುದು ಕಷ್ಟವಾಗುತ್ತಿದೆ ಎಂದು ವಿವರಿಸಿದರು.

ಆದ್ಯತೆ ಮೇರೆಗೆ ಒಪ್ಪಿಗೆ: ಆರೋಗ್ಯ ಸಚಿವ ಸುಧಾಕರ್‌ ಅವರ ಮನವಿಗೆ ಸಭೆಯಲ್ಲಿಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರದ ಕಾರ್ಮಿಕಸಚಿವ ಯಾದವ್‌ ಅವರು, ರಾಜ್ಯದಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಆದ್ಯತೆಮೇರೆಗೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ನೆರೆ ಜಿಲ್ಲೆಗಳಿಗೂ ಅನುಕೂಲ :  ಚಿಕ್ಕಬಳ್ಳಾಪುರ ಜಿಲ್ಲೆಗೆ ಆಸ್ಪತ್ರೆ ಮಂಜೂರುಮಾಡುವುದರಿಂದ ನೆರೆಯ ತುಮಕೂರು,ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಕಾರ್ಮಿಕರಲ್ಲದೆ, ನೆರೆಯ ಆಂಧ್ರದ ಗಡಿ ಭಾಗದಜಿಲ್ಲೆಗಳ ಕಾರ್ಮಿಕರಿಗೂ ಸಮರ್ಪಕವೈದ್ಯಕೀಯ ಸೌಲಭ್ಯ ದೊರಕಲಿದೆ. ಪ್ರತಿಜಿಲ್ಲೆಗೂ ಇಎಸ್‌ಐ ಆಸ್ಪತ್ರೆ ಆರಂಭಿಸಬೇಕುಎಂಬುದು ರಾಜ್ಯ ಸರ್ಕಾರದ ಚಿಂತನೆ ಆಗಿದ್ದು,ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟು69 ಆಸ್ಪತ್ರೆಗಳ ಆರಂಭಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಪೈಕಿ 19 ಕ್ಕೆ ಮಾತ್ರ ಅನುಮತಿ ಸಿಕ್ಕಿದೆ, ಉಳಿದ ಪ್ರಸ್ತಾವನೆಗಳಿಗೂ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವ ಭರವಸೆ ಸಿಕ್ಕಿದೆ. ದೊಡ್ಡಸಂಖ್ಯೆಯಲ್ಲಿರುವ ಕಾರ್ಮಿಕರಿಗೆಗುಣಮಟ್ಟದ ಆರೋಗ್ಯ ಸೇವೆದೊರಕಿಸಲು ಸಾಧ್ಯವಾಗುತ್ತದೆ” -ಡಾ. ಕೆ. ಸುಧಾಕರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.