ಅಂತರ್ಜಲ ವೃದ್ಧಿಗಾಗಿ ನೀಲಗಿರಿ ನಿರ್ಮೂಲನೆ ಅಗತ್ಯ
Team Udayavani, Feb 7, 2020, 3:00 AM IST
ಗುಡಿಬಂಡೆ: ಸತತ ಬರಗಾಲಕ್ಕೆ ತುತ್ತಾಗುತ್ತಿರುವ ಈ ಭಾಗದಲ್ಲಿ ಅಂತರ್ಜಲ ಮಟ್ಟ ಈಗಾಗಲೇ ಕುಸಿದಿದ್ದು, ಅಂತರ್ಜಲ ಮಟ್ಟ ಹೆಚ್ಚಿಸಲು ನೀಲಗಿರಿ ನಿರ್ಮೂಲನೆ ಅತ್ಯಗತ್ಯವಾಗಿದೆ ಎಂದು ತಹಶೀಲ್ದಾರ್ ಹನುಮಂತರಾಯಪ್ಪ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನೀಲಗಿರಿ ಮರಗಳ ನಿರ್ಮೂಲನೆ ಕುರಿತಂತೆ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ತೆರವಿಗೆ ಆದೇಶ: ತಾಲೂಕಿನಾದ್ಯಂತ ಸರ್ಕಾರಿ ಸ್ಥಳಗಳು ಸೇರಿದಂತೆ ಖಾಸಗಿ ಜಮೀನುಗಳಲ್ಲಿ ಬೆಳೆದಿರುವಂತಹ ನೀಲಗಿರಿ ಮರಗಳನ್ನು ತೆರವುಗೊಳಿಸುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಆದೇಶ ಬಂದಿದೆ. ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯತಿ, ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಇರುವಂತಹ ನೀಲಗಿರಿ ಮರಗಳ ಕುರಿತು ಮಾಹಿತಿ ಕಲೆಹಾಕಿ ನಂತರ ಹಂತ ಹಂತವಾಗಿ ಎಲ್ಲಾ ನೀಲಗಿರಿ ಮರಗಳನ್ನು ತೆರವುಗೊಳಿಸಬೇಕಿದೆ ಎಂದರು.
ತೆರವುಗೊಳಿಸದಿದ್ದರೆ ಕ್ರಮ: ಖಾಸಗಿ ಸ್ಥಳಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ. ಒಂದು ವೇಳೆ ಮರಗಳನ್ನು ತೆರವುಗೊಳಿಸಲು ಮುಂದಾಗದಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ತೆರವುಗೊಳಿಸಿದ ಮರಗಳನ್ನು ಸಾರ್ವಜನಿಕ ಹರಾಜು ಮಾಡಲಾಗುತ್ತದೆ ಎಂದರು.
ವಾರದೊಳಗೆ ತೆರವು ಮಾಡಿ: ತಾಲೂಕಿನಾದ್ಯಂತ ಸರ್ಕಾರಿ ಕಚೇರಿ ಹಾಗೂ ಖಾಸಗಿ ಜಮೀನುಗಳಲ್ಲಿರುವಂತಹ ನೀಲಗಿರಿ ಮರಗಳನ್ನು ಒಂದು ವಾರದೊಳಗೆ ತೆರವು ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ರೈತರಲ್ಲಿ ಅರಿವು ಮೂಡಿಸಿ: ತಮ್ಮ ವ್ಯಾಪ್ತಿಯಲ್ಲಿ ಅಧಿಕಾರಿಗಳು, ರೈತರು ಸ್ವಯಂ ಪ್ರೇರಣೆಯಿಂದ ನೀಲಗಿರಿ ಮರಗಳನ್ನು ತೆರವುಗೊಳಿಸಲು ಅರಿವು ಮೂಡಿಸಬೇಕು. ಖಾಸಗಿ ಹಾಗೂ ಅರಣ್ಯ, ಗೋಮಾಳ ಪ್ರದೇಶದಲ್ಲಿನ ನೀಲಗಿರಿ ಮರಗಳನ್ನು ಬುಡ ಸಮೇತ ತೆರವುಗೊಳಿಸಿದ ಜಾಗದಲ್ಲಿ ಉಪಯುಕ್ತ ಸ್ಥಳೀಯ ಜಾತಿಯ ಸಸಿಗಳನ್ನು ನೆಡಲು ಸಾಮಾಜಿಕ ಹಾಗೂ ಅರಣ್ಯ ಇಲಾಖೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಈಗಾಗಲೇ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 245 ಹೆಕ್ಟೇರ್ ಪ್ರದೇಶ, ಕಂದಾಯ ಇಲಾಖೆ ಗೋಮಾಳದ 43 ಎಕರೆ 22 ಗುಂಟೆ, 8 ಗ್ರಾಪಂ ವ್ಯಾಪ್ತಿಯಲ್ಲಿ ನೂರಾರು ಎಕರೆ ಗ್ರಾಮ ಅರಣ್ಯ ಪ್ರದೇಶದಲ್ಲಿನ ನೀಲಗಿರಿ ಮರಗಳನ್ನು ಗುರುತಿಸಲಾಗಿದ್ದು, ಈಗಾಗಲೇ ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಲಕ್ಕೇನಹಳ್ಳಿ 5 ಎಕರೆ ಗೋಮಾಳದಲ್ಲಿನ ನೀಲಗಿರಿ ಮರಗಳನ್ನು ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ತಾಲೂಕಿನ ಜನರ ಕುಡಿಯುವ ನೀರಿಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ 158, ಪಪಂ ವ್ಯಾಪ್ತಿಯಲ್ಲಿ 16 ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಬರದಿಂದ ಕೊಳವೆ ಬಾವಿಗಳಲ್ಲಿ ನೀರಿನ ಶೇಖರಣೆ ಕುಸಿಯುವ ಸಂಭವವಿದ್ದು, ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಸಾಮಾಜಿಕ ಅರಣ್ಯ ಇಲಾಖೆಯ ಆರ್‌ಎಫ್‌ಒ ದಿವ್ಯ, ಅರಣ್ಯ ಇಲಾಖೆ ಅಧಿಕಾರಿ ಜಾವೀದ್, ತಾಪಂ ಎಡಿಎ ರವಿಕುಮಾರ್, ಪ.ಪಂ ಮುಖ್ಯಾಧಿಕಾರಿ ಸತ್ಯನಾರಾಯಣ, ನೀರು ಮತ್ತು ನೈಮಲ್ಯ ಇಲಾಖೆ ಎಇಇ ನವೀನ ಕುಮಾರ್, ಕಂದಾಯ ಇಲಾಖೆಯ ಶಿವಕುಮಾರ್, ಭಾರ್ಗವಿ, ಪ್ರಿಯಾ, ಉಲ್ಲೋಡು ಹಾಗೂ ವರ್ಲಕೊಂಡ ಪಿಡಿಒ ಅರ್ಚನ, ಹಂಪಸಂದ್ರ ಪಿಡಿಒ ಶ್ರೀನಿವಾಸ್, ದಪ್ಪರ್ತಿ ಪಿಡಿಒ ಗೋಪಾಲ್, ಸೋಮೇನಹಳ್ಳಿ ಹಾಗೂ ಬೀಚಗಾನಹಳ್ಳಿ ಪಿಡಿಒ ಶ್ರೀನಿವಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.