ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯ
Team Udayavani, Mar 4, 2021, 9:00 PM IST
ಚಿಕ್ಕಬಳ್ಳಾಪುರ: ದೆಹಲಿಯ ಸರ್ಕಾರಿ ವಸತಿಗೃಹದಲ್ಲಿ ನಡೆದಿರುವುದು ಮಾನಗೆಟ್ಟ ಕೆಲಸ. ಸಚಿವರಾದವರು ಯಾರಾದರೂ ಇಂತಹ ಕೆಲಸ ಮಾಡುತ್ತಾರಾ ಎಂದು ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕಂದವಾರ ಕೆರೆಯಲ್ಲಿ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಸಚಿವರಾಗಿ ಯಾರಾದರೂ ಇಂತಹ ಕೆಲಸ ಮಾಡುತ್ತಾರಾ? ಅದರಲ್ಲೂ ಸರ್ಕಾರಿ ವಸತಿ ಗೃಹ. ದೆಹಲಿಯ ಕರ್ನಾಟಕ ಭವನದಲ್ಲಿ ಈ ಘಟನೆ ನಡೆದಿದೆ. ಇಂತಹ ಅಸಹ್ಯ, ಅಶ್ಲೀಲವಾದದ್ದನ್ನು ನಾನು ಎಂದೂ ಕಂಡಿರಲಿಲ್ಲ. ರಮೇಶ್ ಜಾರಕಿಹೊಳಿ ಮಂಗಳವಾರವೇ ರಾಜೀನಾಮೆ ನೀಡಬೇಕಿತ್ತು ಒಂದು ದಿನ ತಡ, ವಿಳಂಬ ಮಾಡಿದ್ದೇ ತಪ್ಪು ಎಂದು ಹೇಳಿದರು.
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಳಿಸಲು 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದ್ದೇವೆ. ಅದೇ ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸುವ 1200 ಕೋಟಿ ರೂ. ಗಳ ಎಚ್.ಎನ್.ವ್ಯಾಲಿ ಯೋಜನೆ ಜಾರಿಗೊಳಿಸಿದ ಫಲದಿಂದಾಗಿ ಕೆರೆಗಳಿಗೆ ನೀರು ಬಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆಂದರು. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಅಗತ್ಯವಾಗಿದ್ದು ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಂಡರೆ ಈ ಭಾಗದ ಜನರಿಗೆ ಕುಡಿವ ನೀರು ಲಭ್ಯವಾಗಲಿದೆ ಎಂದರು.
ಈ ವೇಳೆ ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿ ಗೌಡ, ಶಾಸಕರಾದ ಕೃಷ್ಣ ಬೈರೇಗೌಡ, ಎನ್.ಎಚ್.ಶಿವಶಂಕರರೆಡ್ಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೇಶವರೆಡ್ಡಿ, ಯುವ ಕಾಂಗ್ರೆಸ್ ಮುಖಂಡ ನಲಪಾಡ್ ಮೊಹ್ಮದ್ ಹ್ಯಾರೀಸ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.