ಸಂಕಷ್ಟದ ನಡುವೆ ಬೆಲೆ ಏರಿಕೆ ಬಿಸಿ


Team Udayavani, Apr 19, 2020, 2:05 PM IST

ಸಂಕಷ್ಟದ ನಡುವೆ ಬೆಲೆ ಏರಿಕೆ ಬಿಸಿ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಕೋವಿಡ್ 19 ಸಂಕಷ್ಟದಲ್ಲಿ ಸಿಲುಕಿ ಒಪ್ಪೊತ್ತಿನ ಊಟಕ್ಕಾಗಿ ಪರದಾಡುತ್ತಿರುವ ಬಡವರಿಗೆ, ನಿರ್ಗತಿಕರಿಗೆ ಸಾಕಷ್ಟು ಮಂದಿ ದಾನಿಗಳು ಮುಂದೆ ಬಂದು ಉದಾರತೆ ಯಿಂದ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಒಂದೆಡೆ, ಮತ್ತೂಂದೆಡೆ ಕೋವಿಡ್ 19 ಲಾಕ್‌ಡೌನ್‌ ಬಂಡವಾಳ ಮಾಡಿಕೊಂಡು ಕೆಲವರು ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಶೇ.20ರಿಂದ 30 ರಷ್ಟು ಹೆಚ್ಚಳ: ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳಿಂದ ಮನೆಯಲ್ಲಿ ಲಾಕ್‌ ಡೌನ್‌ ಆಗಿರುವ ನಾಗರಿಕರು ತಮಗೆ ಅವಶ್ಯಕ ವಾದ ದಿನಸಿ ಪದಾರ್ಥಗಳ ಖರೀದಿಗೆ ಬಂದಾಗ ಬೆಲೆ ಏರಿಕೆ ಕೈ ಕಚ್ಚುತ್ತಿದೆ. ಅವಶ್ಯಕವಾದ ಅಕ್ಕಿ, ಸಕ್ಕರೆ, ಟೀ., ಗೋಧಿ, ಕಾಫಿ ಪುಡಿ, ಮೊಟ್ಟೆ, ಉಪ್ಪು, ಬೇಳೆಕಾಳುಗಳು ಮತ್ತಿತರ ವಸ್ತುಗಳು ನಿಗದಿತ ಬೆಲೆಗಿಂತ ಶೇ.20 ರಿಂದ 30 ರಷ್ಟು ಬೆಲೆ ಹೆಚ್ಚಿಸಿ ಮಾರಾಟ ಮಾಡುತ್ತಿರುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅನಿವಾರ್ಯವಾಗಿ ಕೇಳಿದ ಬೆಲೆಗೆ ಖರೀದಿ ಮಾಡುವಂತಾಗಿದೆ.

ವಿಶೇಷವಾಗಿ ಮಾರುಕಟ್ಟೆಯಲ್ಲಿ ಅಕ್ಕಿ,ಸಕ್ಕರೆ, ನುಚ್ಚು ಮತ್ತಿತರ ಅವಶ್ಯಕ ಬೆಲೆಗಳ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನ ಸೆಳೆದರೂ ಪ್ರಯೋಜನವಿಲ್ಲ ಎಂಬ ಆರೋಪ ಜನರದ್ದಾಗಿದೆ. ಇನ್ನೂ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಬೇಡಿಕೆಯಂತೆ ಸರಬರಾಜು ಆಗುತ್ತಿಲ್ಲ.ಸಗಟು ಮಳಿಗೆಗಳಲ್ಲಿ ನಮಗೆ ಬೆಲೆ ಜಾಸ್ತಿಯಾಗಿದೆ. 5 ಸಾವಿರ ರೂ.ಗೆ ಖರೀದಿ ಮಾಡಿಕೊಂಡು ಬರುತ್ತಿದ್ದ ವಸ್ತುಗಳು ಈಗ ಏಳು, ಎಂಟು ಸಾವಿರ ಕೊಡಬೇಕೆಂದು ನಗರದ ಎಪಿಎಂಸಿ ಬಳಿ ದಿನಸಿ ಅಂಗಡಿ ನಡೆಸುತ್ತಿರುವ ಹೆಸರು ಹೇಳಲು ಇಚ್ಛಿಸದ ಮಾಲೀಕ ಉದಯವಾಣಿಗೆ ತಿಳಿಸಿದರು.

ಹಳ್ಳಿ ಜನರ ಪಾಡು ಕೇಳ್ಳೋರಿಲ್ಲ: ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳಿಗೆ ಲಾಕ್‌ ಡೌನ್‌ ಅನುಷ್ಠಾನದ ವಿಚಾರದಲ್ಲಿ ದಿನ ಬೆಳಗಾ ದರೆ ನಗರದ ಜನತೆಯನ್ನು ನಿಯಂತ್ರಿಸುವುದರ ಜೊತೆಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಸುಧಾರಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಜನರ ಪರಿಸ್ಥಿತಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟದಲ್ಲಿದ್ದರೂ ಯಾರು ಗಮನ ಕೊಡುವವರಿಲ್ಲ. ನಗರಕ್ಕಿಂತ ಗ್ರಾಮೀಣ ಭಾಗದ ಕಿರಾಣಿ ಅಂಗಡಿಗಳಲ್ಲಿ ಅಗತ ವಸ್ತುಗಳ ಬೆಲೆ ದುಪ್ಪಟ್ಟುಗೊಂಡಿವೆ.

ಜಿಲ್ಲೆಯಲ್ಲಿ ಗೌರಿಬಿದನೂರು, ಚಿಂತಾಮಣಿ ನಗರಗಳಲ್ಲಿ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಸಾರ್ವಜನಿಕರಿಂದ ಇಲಾಖೆಗೆ ಬಂದಿದೆ. ಈ ಬಗ್ಗೆ ನಾವು ಕೂಡ ಪರಿಶೀಲನೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದೇವೆ. ಯಾರೇ ಅಂಗಡಿ ಮಾಲೀಕರು ಜನರ ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಿದರೆ ಸೂಕ್ತ ಕ್ರಮ ವಹಿಸುತ್ತೇವೆ. ಸೋಮಶೇಖರಪ್ಪ, ಉಪ ನಿರ್ದೇಶಕರು, ಆಹಾರ ಇಲಾಖೆ

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.